ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು: ಕಾಂಗ್ರೆಸ್ ಎಂಎಲ್‌ಸಿಗಳಿಂದ ವಿಧಾನ ಪರಿಷತ್ ವಿಪಕ್ಷ ನಾಯಕ ಮತ್ತು ಬಿಜೆಪಿ ಮುಖ್ಯ ಸಚೇತಕರ ವಿರುದ್ಧ ದೂರು

P

Peepal Media • ರಾಜ್ಯ

• 1 ನಿಮಿಷದ ಓದು

ಬೆಂಗಳೂರು: ಕಾಂಗ್ರೆಸ್ ಎಂಎಲ್‌ಸಿಗಳಿಂದ ವಿಧಾನ ಪರಿಷತ್ ವಿಪಕ್ಷ ನಾಯಕ ಮತ್ತು ಬಿಜೆಪಿ ಮುಖ್ಯ ಸಚೇತಕರ ವಿರುದ್ಧ ದೂರು

ಬೆಂಗಳೂರು, ಜೂನ್ 3, 2025: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ, ಕಾಂಗ್ರೆಸ್ ಎಂಎಲ್‌ಸಿಗಳ ತಂಡವು ಸೋಮವಾರ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು ಸಲ್ಲಿಸಿದೆ.

ಸಲೀಂ ಅಹ್ಮದ್, ಕೆ. ಗೋವಿಂದರಾಜು, ದಿನೇಶ್ ಗೂಳಿಗೌಡ, ರವಿ, ಪುಟ್ಟಣ್ಣ ಸೇರಿದಂತೆ ಪರಿಷತ್ ಸದಸ್ಯರು ಸಭಾಪತಿಯ ಕಚೇರಿಗೆ ತೆರಳಿ, ಇಬ್ಬರೂ ಮಾಡಿದ ಭಾಷಣದ ತುಣುಕುಗಳನ್ನು ಒಳಗೊಂಡ ಪೆನ್‌ಡ್ರೈವ್ ಮತ್ತು ಮನವಿ ಪತ್ರವನ್ನು ಸಲ್ಲಿಸಿದರು. ಎನ್. ರವಿಕುಮಾರ್ ಜಿಲ್ಲಾಧಿಕಾರಿಯವರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದರೆ, ಛಲವಾದಿ ನಾರಾಯಣ ಸ್ವಾಮಿ ಸಚಿವ ಪ್ರಿಯಾಂಕ್ ಖರ್ಗೆಯವರನ್ನು ಟೀಕಿಸಿದ್ದಾರೆ. ಬಿಜೆಪಿ ಈ ಹೇಳಿಕೆಗಳನ್ನು ಸಮರ್ಥಿಸಿಕೊಳ್ಳುವ ಬದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದ್ದು, ರವಿಕುಮಾರ್ ಅವರ ದುರಹಂಕಾರದ ಮಾತಿಗೆ ಕ್ರಮ ಜರುಗಿಸುವಂತೆ ಆಗ್ರಹಿಸಿದೆ.

ದೂರನ್ನು ಸ್ವೀಕರಿಸಿದ ಸಭಾಪತಿ ಹೊರಟ್ಟಿ, ಸುದ್ದಿಗಾರರೊಂದಿಗೆ ಮಾತನಾಡಿ, “ಕಾಂಗ್ರೆಸ್ ಸದಸ್ಯರು ನೀಡಿದ ದೂರನ್ನು ಪರಿಶೀಲಿಸುತ್ತೇನೆ. ಕಾನೂನು ಚೌಕಟ್ಟಿನ ಹೊರಗೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಈ ಪ್ರಕರಣ ನ್ಯಾಯಾಲಯದಲ್ಲಿ ಸಮಾನಾಂತರವಾಗಿ ವಿಚಾರಣೆಯಲ್ಲಿದೆ. ಹೀಗಾಗಿ ಅದಕ್ಕೆ ಅಡ್ಡಿಯಾಗದಂತೆ ವರ್ತಿಸಬೇಕಾಗಿದೆ,” ಎಂದರು.

ಇದೇ ವೇಳೆ, ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಅವರು ಛಲವಾದಿ ನಾರಾಯಣ ಸ್ವಾಮಿ ವಿರುದ್ಧ ಸ್ಪೀಕರ್‌ಗೆ ಹಕ್ಕುಚ್ಯುತಿ ದೂರು ನೀಡಿ, ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ. “ನಾನು ಬಳಸದ ಶಬ್ದವನ್ನು ಬಳಸಿದ್ದೇನೆ ಎಂದು ಆರೋಪಿಸಿ, ನಾರಾಯಣ ಸ್ವಾಮಿ ಒಂದು ದಿನದ ಕಲಾಪವನ್ನು ವ್ಯರ್ಥಗೊಳಿಸಿದ್ದಾರೆ. ನನ್ನ ಹೇಳಿಕೆಯ ಪೂರ್ಣ ವೀಡಿಯೋ ತುಣುಕನ್ನು ಸಲ್ಲಿಸಿದ್ದೇನೆ. ಈ ಆರೋಪದಿಂದ ನನ್ನ ಹಕ್ಕು ಉಲ್ಲಂಘನೆಯಾಗಿದೆ. ಆದ್ದರಿಂದ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version