ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ಗೆ ಸಂಪೂರ್ಣ ನಿಷೇಧ: ಸಾರಿಗೆ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ಗೆ ಸಂಪೂರ್ಣ ನಿಷೇಧ: ಸಾರಿಗೆ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು: ದ್ವಿಚಕ್ರ ವಾಹನ ಸವಾರರ ಸುರಕ್ಷತೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರ, ರಸ್ತೆ ಸುರಕ್ಷತಾ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದೆ. ಇದರ ಭಾಗವಾಗಿ ರಾಜ್ಯದಲ್ಲಿ ಹಾಫ್ ಹೆಲ್ಮೆಟ್‌ಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ.

ತಲೆಯ ಮೇಲ್ಭಾಗವನ್ನು ಮಾತ್ರ ಆವರಿಸುವ ಹಾಗೂ ಮುಖ, ಗಲ್ಲ, ಕುತ್ತಿಗೆ ಸೇರಿದಂತೆ ಪ್ರಮುಖ ಭಾಗಗಳಿಗೆ ಅಗತ್ಯ ರಕ್ಷಣೆ ನೀಡದ ಹಾಫ್ ಹೆಲ್ಮೆಟ್‌ಗಳ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ. ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ನಿಗದಿತ ಗುಣಮಟ್ಟದ ಹೆಲ್ಮೆಟ್‌ಗಳನ್ನು ಬಳಸುವುದು ಕಡ್ಡಾಯವಾಗಲಿದೆ.

ಹಾಫ್ ಹೆಲ್ಮೆಟ್‌ಗಳ ಬಳಕೆಯಷ್ಟೇ ಅಲ್ಲದೆ, ಅವುಗಳ ತಯಾರಿಕೆ ಮತ್ತು ಮಾರಾಟದ ಮೇಲೂ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ನಿಷೇಧಿತ ಮಾದರಿಯ ಹೆಲ್ಮೆಟ್‌ಗಳನ್ನು ಉತ್ಪಾದಿಸುವ ಅಥವಾ ಮಾರಾಟ ಮಾಡುವವರ ವಿರುದ್ಧವೂ ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ.

ಇತ್ತೀಚೆಗೆ ರಸ್ತೆ ಸುರಕ್ಷತೆ ಕುರಿತ ಸಭೆಯಲ್ಲಿ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಹಾಫ್ ಹೆಲ್ಮೆಟ್‌ಗಳ ಬಳಕೆ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು. ಇಂತಹ ಹೆಲ್ಮೆಟ್‌ಗಳ ಉತ್ಪಾದಕರು ಹಾಗೂ ಮಾರಾಟಗಾರರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಾನೂನು ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದರು. ಇದೀಗ ಈ ವಿಚಾರದಲ್ಲಿ ಇಲಾಖೆ ಮತ್ತಷ್ಟು ಕಠಿಣ ನಿಲುವು ತೆಗೆದುಕೊಂಡಿದೆ.

ಗುಣಮಟ್ಟದ ಹೆಲ್ಮೆಟ್ ಬಳಕೆಗೆ ಒತ್ತು
ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರು ಸುರಕ್ಷತಾ ಮಾನದಂಡಗಳನ್ನು ಪೂರೈಸುವ ಹೆಲ್ಮೆಟ್‌ಗಳನ್ನು ಧರಿಸುವಂತೆ ಇಲಾಖೆ ಸೂಚಿಸಿದೆ. ರಸ್ತೆ ಅಪಘಾತಗಳಲ್ಲಿ ತಲೆಗೆ ಉಂಟಾಗುವ ಗಂಭೀರ ಗಾಯಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಹಾಫ್ ಹೆಲ್ಮೆಟ್‌ಗಳ ವಿರುದ್ಧದ ಕ್ರಮದ ಜೊತೆಗೆ ಸಂಚಾರ ನಿಯಮ ಉಲ್ಲಂಘಿಸುವವರ ಮೇಲೂ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಹಲವು ಪ್ರಸ್ತಾವನೆಗಳನ್ನು ಪರಿಶೀಲಿಸುತ್ತಿದೆ. ಫುಟ್‌ಪಾತ್ ಮೇಲೆ ದ್ವಿಚಕ್ರ ವಾಹನ ಚಲಾಯಿಸುವುದಕ್ಕೆ ದಂಡ ಹೆಚ್ಚಿಸುವುದು, ಪುನರಾವರ್ತಿತ ಸಂಚಾರ ನಿಯಮ ಉಲ್ಲಂಘನೆಗಳಿಗೆ ಚಾಲನಾ ಪರವಾನಗಿ ಅಮಾನತು ಸೇರಿದಂತೆ ಹಲವು ಕ್ರಮಗಳ ಬಗ್ಗೆಯೂ ಚರ್ಚೆ ನಡೆದಿದೆ.

ಹೀಗಾಗಿ ಇನ್ನು ಮುಂದೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಖರೀದಿಸುವಾಗ ಅದರ ಗುಣಮಟ್ಟ ಹಾಗೂ ಪ್ರಮಾಣೀಕರಣವನ್ನು ಪರಿಶೀಲಿಸಿ, ನಿಗದಿತ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾದ ಹೆಲ್ಮೆಟ್‌ಗಳನ್ನೇ ಬಳಸಬೇಕಾಗಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು