ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರಗ ಜ್ಞಾನೇಂದ್ರ ಅವರ ಮೇಲೆ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಹಿಂಜರಿಯಬಾರದು: ಅಬ್ದುಲ್ ಮಜೀದ್

P

Peepal Media Desk • ರಾಜ್ಯ

• 1 ನಿಮಿಷದ ಓದು

ಆರಗ ಜ್ಞಾನೇಂದ್ರ ಅವರ ಮೇಲೆ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಹಿಂಜರಿಯಬಾರದು: ಅಬ್ದುಲ್ ಮಜೀದ್

ಬೆಂಗಳೂರು: ಬಿಜೆಪಿ ಮತ್ತು ಆರ್.ಎಸ್.ಎಸ್. ಮೂಲ ಸಿದ್ದಾಂತವೇ ಬೇಧಭಾವ ಮತ್ತು ಅಸಮಾನತೆಯನ್ನು ಪೋಷಿಸುವ ಯೋಚನೆಗಳ ಅಡಿಪಾಯದ ಮೇಲೆ ನಿಂತಿದೆ. ಹಾಗಾಗಿ ಅವರು ಇತರರ ಜಾತಿ, ಚರ್ಮದ ಬಣ್ಣ, ಆಹಾರ ಪದ್ಧತಿಗಳ ವಿಚಾರದಲ್ಲಿ ವಿಕೃತಿ ಮೆರೆಯುತ್ತಲೇ ಇರುತ್ತಾರೆ. ಅದರ ಭಾಗವಾಗಿಯೇ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರಿಂದ ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗೆಗಿನ ಅಂತರಾಳದ ಮಾತುಗಳು ಹೊರಬಂದಿವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಖಂಡಿಸಿದ ಮಜೀದ್ ಅವರು ತಕ್ಷಣ ಅವರ ವಿರುದ್ಧ ಎಸ್.ಸಿ, ಎಸ್.ಟಿ ಅಟ್ರಾಸಿಟಿ ಕಾಯಿದೆ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಅರಗ ಅವರ ಹೇಳಿಕೆ ಕೇವಲ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಅಥವಾ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಬಗ್ಗೆಯೋ ಅಥವಾ ಉತ್ತರ ಕರ್ನಾಟಕದ ಜನರ ದೈಹಿಕ ರಚನೆ ಮತ್ತು ಅಲ್ಲಿನ ಪರಿಸರದ ಬಗ್ಗೆ ಮಾತ್ರವಲ್ಲ, ಬದಲಿಗೆ ಈ ದೇಶದ ಮೂಲನಿವಾಸಿಗಳ ಮೈಬಣ್ಣವನ್ನು ಇಡಿಯಾಗಿ ಅವರು ತುಚ್ಛವಾಗಿ ಮಾತನಾಡಿದ್ದಾರೆ ಎಂದು ಮಜೀದ್ ಆರೋಪಿಸಿದರು.

ಬಿಜೆಪಿಯವರ ಈ ರೀತಿಯ ವರ್ತನೆಗಳಿಂದ ಬೇಸತ್ತ ರಾಜ್ಯದ ಜನರು ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದರೂ ಇನ್ನೂ ಅವರಿಗೆ ಬುದ್ದಿ ಬಂದಿಲ್ಲ. ಕಾಂಗ್ರೆಸ್ ಕೇವಲ ವಿಷಾದ ಅಥವಾ ಕ್ಷಮೆಗೆ ತೃಪ್ತಿಪಟ್ಟುಕೊಳ್ಳದೆ ಕಾನೂನಾತ್ಮಕ ಕ್ರಮಕ್ಕೆ ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version