ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಲ್ಬುರ್ಗಿ ಮತ್ತು ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಂದು ದಿನವೂ ಬಾಯಿ ಬಿಡದ ಸಂಸದರನ್ನು ಈ ಬಾರಿ ಸೋಲಿಸಿ: ಸಿ.ಎಂ.ಕರೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಕಲ್ಬುರ್ಗಿ ಮತ್ತು ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಂದು ದಿನವೂ ಬಾಯಿ ಬಿಡದ ಸಂಸದರನ್ನು ಈ ಬಾರಿ ಸೋಲಿಸಿ: ಸಿ.ಎಂ.ಕರೆ

ಕಲ್ಬುರ್ಗಿ (ಅಫ್ಜಲ್ ಪುರ): ಈ ಬಾರಿ ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರು ಗೆಲ್ಲುವುದು ನೂರಕ್ಕೆ ನೂರು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟವಾಗಿ ನುಡಿದರು.

ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಬೃಹತ್ ಜನಸಮಾವೇಶವನ್ನು ಉದ್ಘಾಟಿಸಿ, ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ಮುಖಂಡರುಗಳನ್ನು ಸ್ವಾಗತಿಸಿದ ಬಳಿಕ ಮಾತನಾಡಿದರು.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗಡಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು. ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

371ಜೆ ಜಾರಿ ಆಗೋದಕ್ಕೆ ಮಲ್ಲಿಕಾರ್ಜುನ ಖರ್ಗೆ ಪ್ರಮುಖ ಕಾರಣ. ಇವರ ಹೋರಾಟ, ಶ್ರಮದಿಂದಾಗಿ ಈ ಭಾಗಕ್ಕೆ 371ಜೆ ಜಾರಿಯಾಗಿ ಲಕ್ಷಾಂತರ ಕುಟುಂಬಗಳಿಗೆ ದೊಡ್ಡ ಮಟ್ಟದ ವರದನವಾಗಿದೆ ಎಂದರು.

ಬಿಜೆಪಿಯವರು 371ಜೆ ಕೊಡಲು ಖಡಾಖಂಡಿತವಾಗಿ ನಿರಾಕರಿಸಿದ್ದರು. ಆದರೆ ಖರ್ಗೆಯವರ ಕಾರಣದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲಾಯಿತು. ಇದರ ಫಲವಾಗಿ 371ಜೆ ಈ ಭಾಗಕ್ಕೆ ದೊಡ್ಡ ಮಟ್ಟದ ಅನುಕೂಲ ಆಗಿದೆ ಎಂದರು.

ಮಲ್ಲಿಕಾರ್ಜುನ ಖರ್ಗೆಯವರ ಸೋಲಿನಿಂದ ಈ ಭಾಗಕ್ಕೆ ಬಹಳ ನಷ್ಟ ಆಗಿದೆ. ಈ ಬಾರಿ ಅದಕ್ಕೆ ಅವಕಾಶ ಕೊಡಬಾರದು ಎಂದರು.

KKRDB ಮೂಲಕ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ 5000 ಕೋಟಿ ನೀಡಲಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರ ಅಭಿವೃದ್ಧಿ ಮತ್ತು‌ ಏಳಿಗೆಗಾಗಿ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿ ನುಡಿದಂತೆ ನಡೆದು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ.

ಮೋದಿಯವರು ಹತ್ತತ್ತು ವರ್ಷ ಪ್ರಧಾನಿಯಾಗಿ ಬಡ ಭಾರತೀಯರ, ಮಧ್ಯಮ ವರ್ಗದ ಭಾರತೀಯರ ಪ್ರಗತಿಗಾಗಿ, ಏಳಿಗೆಗಾಗಿ ಒಂದೇ ಒಂದು ಕಾರ್ಯಕ್ರಮವನ್ನು ಜಾರಿ ಮಾಡಿದ ಉದಾಹರಣೆ ಇದ್ದರೆ ತೋರಿಸಿ ಎಂದು ಸವಾಲು ಹಾಕಿದರು.

ನಮ್ಮ ಗ್ಯಾರಂಟಿಗಳನ್ನು ಕದ್ದಿರುವ ಮೋದಿ ಮತ್ತು ಟೀಮು ಪರಮ ಸುಳ್ಳುಗಾರರು ಎನ್ನುವುದು ದೇಶದ ಪ್ರತಿಯೊಬ್ಬರಿಗೂ ಅರ್ಥವಾಗಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಆಗಿದೆ. ಸುಳ್ಳುಗಳ ಮೂಲಕ ಭಾರತೀಯರನ್ನು ನಿರಂತರವಾಗಿ ಬಕ್ರಾ ಮಾಡುವ ಬಿಜೆಪಿಯ ಅಭಿಯಾನಕ್ಕೆ ಬ್ರೇಕ್ ಹಾಕಿ ಎಂದು ಕರೆ ನೀಡಿದರು.

ಕಲ್ಬುರ್ಗಿ ಮತ್ತು ರಾಜ್ಯಕ್ಕೆ ಆದ ಅನ್ಯಾಯದ ಬಗ್ಗೆ ಒಂದು ದಿನವೂ ಬಾಯಿ ಬಿಡದ ಬಿಜೆಪಿ ಸಂಸದರನ್ನು ಈ ಬಾರಿ ಸೋಲಿಸಿ ಎಂದು ಸಿ.ಎಂ. ಕರೆ ನೀಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು