ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ: ಸಿಎಂ

ಚಾಮರಾಜನಗರ ಮಾ 12: ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಚಾಮರಾಜನಗರ ಜಿಲ್ಲೆಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ. ಗ್ಯಾರಂಟಿಗಳನ್ನು ಕೊಟ್ಟಿದೆ. ಕೊಟ್ಟ ಮಾತಿನಂತೆ ಭರವಸೆಗಳನ್ನು ಈಡೇರಿಸಿದ ಏಕೈಕ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ನಮ್ಮ ಐದು ಗ್ಯಾರಂಟಿಗಳಿಗೆ ನಾಲ್ಕೂವರೆ ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ರಾಜ್ಯದ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 45 ಸಾವಿರದಿಂದ 50 ಸಾವಿರ ರೂಪಾಯಿ ಕೊಡುತ್ತಿದ್ದೇವೆ. ಇದನ್ನು ಬಿಜೆಪಿ ಯಾಕೆ ವಿರೋಧಿಸುತ್ತಿದೆ? ನಾಡಿನ ಜನರಿಗೆ ಸರ್ಕಾರದ ಸವಲತ್ತುಗಳು ಸಿಗಬಾರದಾ? ಎಂದು ಪ್ರಶ್ನಿಸಿದರು.

ಒಂದು ಕೋಟಿ ಇಪ್ಪತ್ತು ಲಕ್ಷ ಕುಟುಂಬಗಳ, ನಾಲ್ಕೂವರೆ ಕೋಟಿ ಜನಕ್ಕೆ ಈ ವರ್ಷ 36000 ಕೋಟಿ ಹಣ ಕೊಟ್ಟಿದ್ದೇವೆ. ಮುಂದಿನ ವರ್ಷಕ್ಕೆ 59000 ಕೋಟಿ ರೂಪಾಯಿಗಳನ್ನು ಗ್ಯಾರಂಟಿಗಳಿಗೆ ಕೊಟ್ಟಿದ್ದೇವೆ. ರಾಜ್ಯದ ಜನರ ಅಭಿವೃದ್ಧಿ ಕಾರ್ಯಗಳಿಗೆ ಒಂದು ಲಕ್ಷ ಇಪ್ಪತ್ತು ಕೋಟಿ ರೂಪಾಯಿಗಳನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ ಎಂದರು.

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ

ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಡನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ: ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದರು.

ಮನುವಾದ ನಮ್ಮೆಲ್ಲರ ಶತ್ರು: ಎಚ್ಚರ

ಸಂವಿಧಾನ ಬದಲಾಯಿಸುತ್ತೇವೆ ಎನ್ನುತ್ತಿರುವ ಮನುವಾದಿಗಳು ಮತ್ತು ಮನುವಾದ ನಮ್ಮ ನಿಮ್ಮೆಲ್ಲರ ಶತ್ರು. ಇವರಿಗೆ ಸಂವಿಧಾನ ಬದಲಾಯಿಸಲು ಅವಕಾಶ ಆಗದಂತೆ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನನಗೆ ಶಕ್ರಿ ತುಂಬಿ ಎಂದು ವಿನಂತಿಸಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರುಗಳು ಮತ್ತು ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು