ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ಧರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ: ಪೊಲೀಸ್ ತನಿಖೆಗೆ ಕಾಂಗ್ರೆಸ್ ನಾಯಕರಿಂದ ದೂರು!

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸಿದ್ಧರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಆರೋಪ: ಪೊಲೀಸ್ ತನಿಖೆಗೆ ಕಾಂಗ್ರೆಸ್ ನಾಯಕರಿಂದ ದೂರು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕಪೋಲಕಲ್ಪಿತ ಸ್ಟಿಂಗ್ ಆಪರೇಷನ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ಆರೋಪಿಸಿ, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಕುಶಾಲ್ ಹಾರುವೇಗೌಡ ದೂರು ಸಲ್ಲಿಸಿದ್ದಾರೆ.

ಮಂಗಳವಾರ ಸಲ್ಲಿಸಲಾದ ದೂರಿನಲ್ಲಿ, ಸಿದ್ದರಾಮಯ್ಯ ಅವರು ಕರ್ನಾಟಕದ ಜನಪ್ರಿಯ ಸಮೂಹ ನಾಯಕರಾಗಿದ್ದು, ಆನ್‌ಲೈನ್‌ನಲ್ಲಿ ವ್ಯವಸ್ಥಿತವಾಗಿ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಅವರ ರಾಜಕೀಯ ವರ್ಚಸ್ಸಿಗೆ ಕಳಂಕ ತರಲು ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಆಪಾದಿಸಲಾಗಿದೆ.

ಮುಖ್ಯವಾಗಿ, ಸ್ಟಿಂಗ್ ಆಪರೇಷನ್ ಕುರಿತಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಾರ್ವಜನಿಕವಾಗಿ ನೀಡಿರುವ ಹೇಳಿಕೆಗಳನ್ನು ದೂರಿನಲ್ಲಿ ಉಲ್ಲೇಖಿಸಲಾಗಿದ್ದು, ಅವರ ಬಳಿ ಇದೆ ಎನ್ನಲಾದ ಮಾಹಿತಿ ಮತ್ತು ದಾಖಲೆಗಳ ಸತ್ಯಾಸತ್ಯತೆಯನ್ನು ಪೊಲೀಸರು ಪರಿಶೀಲಿಸಬೇಕೆಂದು ಮನವಿ ಮಾಡಲಾಗಿದೆ. ಕೇಂದ್ರ ಸಚಿವರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದ ಯಾವುದೇ ಸಾಕ್ಷ್ಯಗಳು, ದಾಖಲೆಗಳು ಮತ್ತು ಮಾಹಿತಿಯನ್ನು ಕಾನೂನುಬದ್ಧವಾಗಿ ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದು ಕುಶಾಲ್ ಹಾರುವೇಗೌಡ ಒತ್ತಾಯಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳು ಸಹಜ. ಆದರೆ, ಸುಳ್ಳು ಮಾಹಿತಿ ಅಥವಾ ಕಾನೂನುಬಾಹಿರ ಚಟುವಟಿಕೆಗಳ ಮೂಲಕ ವ್ಯಕ್ತಿಯ ಘನತೆ ಮತ್ತು ಸಾರ್ವಜನಿಕ ಗೌರವಕ್ಕೆ ಧಕ್ಕೆ ತಂದರೆ ಕಾನೂನು ಕ್ರಮ ಅನಿವಾರ್ಯ ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ. ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ. ಈ ದೂರಿಗೆ ಕುಶಾಲ್ ಹಾರುವೇಗೌಡ ಅವರೊಂದಿಗೆ ಮುಖಂಡರಾದ ಮಂಜುನಾಥ್ ಬಿ., ಸಿಕಂದರ್ ಮತ್ತು ಅರುಣ್ ಕುಮಾರ್ ಸಹಿ ಹಾಕಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು