ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾನಸಿಕ ಅಸ್ವಸ್ಥೆ ನೀಡಿದ ದೂರನ್ನು ಬಳಸಿಕೊಂಡು ಕಾಂಗ್ರೆಸ್‌ ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಬಿಜೆಪಿ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಮಾನಸಿಕ ಅಸ್ವಸ್ಥೆ ನೀಡಿದ ದೂರನ್ನು ಬಳಸಿಕೊಂಡು ಕಾಂಗ್ರೆಸ್‌ ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ: ಬಿಜೆಪಿ

ಬೆಂಗಳೂರು – ಚುನಾವಣೆಯ್ಲಲಿನ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌‍ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಈ ಸಂಬಂಧ ತನ್ನ ಎಕ್ಸ್ (ಈ ಹಿಂದಿ ಟ್ವಿಟರ್) ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪಕ್ಷವು, ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್‌ ಗಾಂಧಿ ಅವರನ್ನು ಕೋರ್ಟ್‌ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್‌‍ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿ.ಎಸ್‌‍.ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ ಎಂದು ದೂರಿದೆ.

ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿ ದೂರಿದೆ.

ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಪರಮೇಶ್ವರ್‌ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.

ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್‌ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್‌‍ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಕಿಡಿ ಕಾರಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು