ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ: ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ: ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ


ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಮತ್ತು ಆಳಂದ ಕಾಂಗ್ರೆಸ್ ಶಾಸಕರಾದ ಬಿ.ಆರ್. ಪಾಟೀಲ್ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್ ಅಡಿಯಲ್ಲಿ ನೀಡಲಾಗುವ ಮನೆಗಳನ್ನು ಲಂಚ ಕೊಡುವವರಿಗೆ ಹಂಚಲಾಗುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರೊಂದಿಗೆ ಫೋನ್‌ ಕರೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಅವರು ಈ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಂಚ ಪಡೆದು ಹಂಚಿಕೆ ಮಾಡಲಾಗಿರುವ ಮನೆಗಳ ಕುರಿತಾದ ವಿವರವಾದ ಪಟ್ಟಿಯನ್ನೂ ಹಂಚಿಕೊಂಡಿದ್ದಾರೆ ಎನ್ನಲಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಸರ್ಫರಾಜ್‌ ಖಾನ್‌ ಲಂಚ ಪಡೆದ ವ್ಯಕ್ತಿಗಳ ಕುರಿತು ವಿವರಗಳನ್ನು ನೀಡಿದರೆ ಅಂತಹವರನ್ನು ಜೈಲಿಗೆ ಕಳುಹಿಸಲಾಗುವುದು ಎಂದಿದ್ದಾರೆ.

ಆಳಂದ ವಿಧಾನಸಭಾ ಕ್ಷೇತ್ರದ ಮುನ್ನಳ್ಳಿ ಗ್ರಾಮದಲ್ಲಿ 200 ಮನೆಗಳು, ದರ್ಗಾ ಶಿರೂರಿನಲ್ಲಿ 100, ಧಂಗಾಪುರದಲ್ಲಿ 200, ಕವಲಗಾದಲ್ಲಿ 200, ಮಡಿಯಾಲ್ ಗ್ರಾಮಗಳಲ್ಲಿ 200 ಸೇರಿದಂತೆ ಒಟ್ಟು 950 ಮನೆಗಳನ್ನು ಲಂಚ ಪಡೆದು ಅನರ್ಹರಿಗೆ ಹಂಚಿಕೆ ಮಾಡಲಾಗಿದೆ ಎಂದು ಪಾಟೀಲ್ ದೂರಿದ್ದಾರೆ. ನೆರೆಯ ಅಫ್ಜಲ್‌ಪುರ ವಿಧಾನಸಭಾ ಕ್ಷೇತ್ರದಲ್ಲಿಯೂ ಇದೇ ರೀತಿ ಹಣ ಪಡೆದು ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅವರು ಸಂಭಾಷಣೆಯಲ್ಲಿ ಆರೋಪಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ತಾವು ನೀಡಿದ್ದ ಶಿಫಾರಸು ಪತ್ರಗಳನ್ನು ಮನೆ ಹಂಚಿಕೆಯಲ್ಲಿ ಪರಿಗಣಿಸದೆ, ಗ್ರಾಮ ಪಂಚಾಯತ್ ಅಧ್ಯಕ್ಷರು ಒದಗಿಸಿದ ಪಟ್ಟಿಯನ್ನು ಅನುಮೋದಿಸಲಾಗಿದೆ ಎಂದೂ ಪಾಟೀಲ್ ವಾದಿಸಿದ್ದಾರೆ. “ಶಾಸಕ ನೀಡುವ ಪತ್ರಕ್ಕೆ ಬೆಲೆಯಿಲ್ಲವೇ” ಎಂದು ಅವರು ಪ್ರಶ್ನಿಸಿದ್ದಾರೆ.

ಈ ಹಂತದಲ್ಲಿ, ಸರ್ಫರಾಜ್ ಖಾನ್ ಆಕ್ರೋಶದಲ್ಲಿರುವ ಶಾಸಕರನ್ನು ಸಮಾಧಾನಿಸಿ, ಅವರು ಶಿಫಾರಸು ಮಾಡಿರುವ ಪಟ್ಟಿಯನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಆದರೆ ಈ ಕುರಿತು ಪ್ರತಿಕ್ರಿಯೆ ಪಡೆಯಲು ಪತ್ರಿಕೆ ಪ್ರಯತ್ನಿಸಿದಾಗ ಶಾಸಕ ಉತ್ತರಿಸಲು ನಿರಾಕರಿಸಿದರು ಎಂದು ಅದು ವರದಿ ಮಾಡಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು