ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ: ಸಿಎಂ ಬೊಮ್ಮಾಯಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್ ಪಕ್ಷ ಮನವೊಲಿಕೆಯ ರಾಜಕಾರಣ ಮಾಡುತ್ತಿದೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ರಾಹುಲ್ ಗಾಂಧಿ ಮತ್ತುಕಾಂಗ್ರೆಸ್ ಪಕ್ಷದ ಅವಧಿಯಲ್ಲಿಆಗಿರುವ ಭಯೋತ್ಪಾದನೆ ಹಾಗೂ ಇತರ ದುಷ್ಕೃತ್ಯಗಳನ್ನು ಮುಚ್ಚಿಕೊಳ್ಳಲು ಮನವೊಲಿಕೆಯ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.

ಅವರು ಇಂದು ಹುಬಳ್ಳಿ ವಿಮಾನ ನಿಲ್ದಾಣದಕ್ಕೆ ಬಂದಿಳಿದು, ಆನಂದ ಮಾಮನಿಯವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸವದತ್ತಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಆರ್ ಎಸ್ ಎಸ್ ಮತ್ತು ಭಾಜಪ ಪಕ್ಷ ಭಾರತದಲ್ಲಿ ಹಿಂಸೆಯನ್ನು ಹಬ್ಬಿಸುತ್ತಿದೆ ಎಂದು ರಾಹುಲ್ ಗಾಂಧಿಯವರು ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿ, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಮನವೊಲಿಕೆಯ ರಾಜಕಾರಣ ಮಾಡುತ್ತಾ ಆರ್ ಎಸ್ ಎಸ್ ಅನ್ನು ದೂಷಿಸುತ್ತಿದ್ದಾರೆ ಎಂದರು.

ಆರ್ ಎಸ್ ಎಸ್ ರಾಷ್ಟ್ರಪ್ರೇಮ ಹೊಂದಿರುವ ಸಂಘಟನೆ ವಿನಾಕಾರಣ ಅದರ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ದೇಶದ ಜನರಿಗೆ ಇದರ ಬಗ್ಗೆ ಅರಿವಿದೆ. ಕಾಂಗ್ರೆಸ್ ಕಾಲದಲ್ಲಿ ದೊಡ್ಡ ಪ್ರಮಾಣದಲ್ಲಿ ಮುಂಬೈ, ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಿತು. ಅವರ ಕಾಲದಲ್ಲಿ ಏನೇನಾಗಿದೆ ಎಂಬುದನ್ನು ಅವರು ಅವಲೋಕನ ಮಾಡಿಕೊಳ್ಳಬೇಕು. ಪ್ರಧಾನಿ ಮೋದಿಯವರ ಆಡಳಿತದಲ್ಲಿ ಆಂತರಿಕ ಭದ್ರತೆ, ಬಾಹ್ಯ ಭದ್ರತೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಿರುವುದನ್ನು ಎಲ್ಲರೂ ಗ್ರಹಿಸಬೇಕು. ಅವರ ನೀತಿಗಳನ್ನು ವಿವಿಧ ರಾಷ್ಟ್ರಗಳು ಹಾಗೂ ಮುಸ್ಲಿಂ ರಾಷ್ಟ್ರಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿವೆ. ಹೀಗಾಗಿ ರಾಹುಲ್ ಗಾಂಧಿಯವರ ಮಾತು ಅಸತ್ಯದಿಂದ ಕೂಡಿದ್ದು, ಅದರಲ್ಲಿ ಯಾವುದೇ ಹುರುಳಿಲ್ಲ ಎಂದರು.

ಎಲ್ಲ ವಿಚಾರಗಳನ್ನು ಹಳದಿ ಕಣ್ಣಿನಿಂದ ನೋಡುವುದು ಕಾಂಗ್ರೆಸ್ ಅಭ್ಯಾಸ:

ರಾಜ್ಯದಲ್ಲಿ ಕೋಮುವಾದವನ್ನು ಹೆಚ್ಚಿಸಲಾಗುತ್ತಿದೆ ಎಂದು ಆರೋಪಿಸಿರುವುದಕ್ಕೆ ಪ್ರತಿಕ್ರಯಿಸಿ, ಕಾಂಗ್ರೆಸ್ ನವರು ಎಲ್ಲ ವಿಷಯವನ್ನು ಹಳದಿ ಕಣ್ಣಿನಿಂದ ನೋಡುವ ಅಭ್ಯಾಸ ಮಾಡಿಕೊಂಡಿದ್ದಾರೆ. ರಾಜಸ್ತಾನದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರೆ, ಯಾರು ಕೋಮುವಾದ, ಮನವೊಲಿಕೆಯ ರಾಜಕಾರಣದ ಮೂಲಕ ದೇಶ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂಬುದು ತಿಳಿಯುತ್ತದೆ. ಮೊದಲಿಗೆ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯದಲ್ಲಿ ಆಗುತ್ತಿರುವ ಕೋಮು ಚಟುವಟಿಕೆಗಳನ್ನು ನಿಯಂತ್ರಿಸಲಿ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು