ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪ್ರಸಾದ್‌ ರಾಜ್‌ ಕಾಂಚನ್‌ ಗೆ ಕಾಂಗ್ರೆಸ್‌ ಟಿಕೆಟ್‌- ‘ಧನಾಢ್ಯ’ ನಾಯಕರನ್ನು ಎದುರಿಸಲು ‘ಕಾಂಚಾಣ’ದ ಅನಿವಾರ್ಯತೆ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಪ್ರಸಾದ್‌ ರಾಜ್‌ ಕಾಂಚನ್‌ ಗೆ ಕಾಂಗ್ರೆಸ್‌ ಟಿಕೆಟ್‌-  ‘ಧನಾಢ್ಯ’ ನಾಯಕರನ್ನು ಎದುರಿಸಲು ‘ಕಾಂಚಾಣ’ದ ಅನಿವಾರ್ಯತೆ

ಉಡುಪಿ, ಎಪ್ರಿಲ್‌ 6: ಐ.ಎಂ. ಜಯರಾಮ ಶೆಟ್ಟಿ, ಲಕ್ಷ್ಮೀನಾರಾಯಣ, ಪಾಲೇಮಾರ್ ಮತ್ತಿತರ  ಕುಬೇರರನ್ನು ಹುಡುಕಿ ಹುಡುಕಿ ಟಿಕೆಟ್ ಕೊಡುವ ಸಂಪ್ರದಾಯವನ್ನು ಕರಾವಳಿಯಲ್ಲಿ ಆರಂಭಿಸಿದ್ದು ಜಿಜೆಪಿ. ಈಗ ಉಡುಪಿ ಕ್ಷೇತ್ರದ ಮಟ್ಟಿಗೆ ಪಕ್ಷದ ಎರಡನೇ ಹಂತದ ನಾಯಕರನ್ನು ಬದಿಗಿಟ್ಟು ಪ್ರಸಾದ್ ರಾಜ್ ಕಾಂಚನ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿರುವುದು ಬಿಜೆಪಿಯ ‘ಧನಾಢ್ಯ’ ನಾಯಕರನ್ನು ಎದುರಿಸಲು ‘ಕಾಂಚಾಣ’ ಅನಿವಾರ್ಯ ಎಂಬ ಲೆಕ್ಕಾಚಾರದಲ್ಲಿ ಇರಬಹುದು. ಜಾತಿ ಲೆಕ್ಕಾಚಾರ ಹಾಕಿದ್ದ ಕಾಂಗ್ರೆಸ್‌ಗೆ ಉಡುಪಿಯಲ್ಲಿ ಮೊಗವೀರರರಿಗೇ ಟಿಕೆಟ್ ನೀಡುವುದು ಅನಿವಾರ್ಯವಾಗಿತ್ತು.

ಚುನಾವಣೆಯಲ್ಲಿ ಸಹಜವಾಗಿ ಹಣ ಹರಿಸಬೇಕಿರುವುದರಿಂದ, ಪ್ರಸಾದ್ ರಾಜ್ ಕಾಂಚನ್, ಮೊಗವೀರರೂ, ಸಿರಿವಂತರೂ ಆಗಿರುವುದರಿಂದ ಸಹಜವಾಗಿಯೇ ಉಡುಪಿಯ ಟಿಕೆಟ್ ಅವರಿಗೊಲಿದಿದೆ. ಇನ್ನುಳಿದದ್ದು, ಕಾಂಚನ್ ಅವರ ಪಕ್ಷ ನಿಷ್ಠೆ. ಪ್ರಸಾದ್ ರಾಜ್ ಕಾಂಚನ್ ಉಡುಪಿಯ ಮಹಿಳಾ ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಅವರ ಪುತ್ರ. ಸರಳಾ ಕಾಂಚನ್ ಅವರು ಮಾಜಿ ಸಚಿವೆ ಮೋಟಮ್ಮ ಅವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡವರು. ಅಮ್ಮನ ಒತ್ತಾಸೆಗೆ ಒಳಗಾಗಿ ಹಿಂದಿನ ಕೆಲ ಚುನಾವಣೆಗಳಲ್ಲಿ ಪ್ರಸಾದ್ ರಾಜ್ ಕಾಂಚನ್ ತಮ್ಮ ಊರಲ್ಲಿ ಪಕ್ಷದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.  ಉಡುಪಿ, ಮಂಗಳೂರು, ಕಾರವಾರಗಳಲ್ಲಿ ಕಾಂಚನಾ ಹ್ಯೂಂಡೈ ಶೋರೂಮ್ ಮಾಲಕರಾಗಿರುವ ಪ್ರಸಾದ್ ರಾಜ್‌ಗೆ ಅವರೇ ಹೇಳಿಕೊಳ್ಳುವಂತೆ ರಾಜಕೀಯ ಎನ್ನುವುದು ಒಂದು ‘ಪ್ಯಾಷನ್’ ಅಷ್ಟೇ!

ಈ ಬಾರಿ ಉಡುಪಿಯಲ್ಲಿ ಟಿಕೇಟ್ ಪಡೆದೇ ಸಿದ್ಧ ಎಂದು ಜಿದ್ದಿಗೆ ಬಿದ್ದಿದ್ದ ಕಾಂಚನ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಹೇಗೆ ಸಂಪರ್ಕಿಸಬೇಕೋ ಹಾಗೆಯೇ ಸಂಪರ್ಕಿಸಿ ಟಿಕೆಟ್‌ನ ಆಶ್ವಾಸನೆ ಪಡೆದಿದ್ದರು. ಅದರ ಬೆನ್ನಿಗೇ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರು ಅವರ ಜೊತೆಯಾಗಿ ಬ್ರಹ್ಮಾವರ ವಲಯದಲ್ಲಿ ಪಕ್ಷ ಸಂಘಟನೆ ಹಾಗೂ ಕಳೆದೊಂದು ತಿಂಗಳಿಂದ ಗ್ಯಾರಂಟಿ ಕಾರ್ಡ್ ವಿತರಣೆ ಮಾಡುವ ನೆಪದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಿದ್ದರು‌.

ಇನ್ನು, ಉಡುಪಿಯಲ್ಲಿ ಬಲಾಢ್ಯ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾರ್ಪೋರೇಟ್ ಶೈಲಿಯ ಪ್ರಸಾದ್‌ರಾಜ್ ಕಾಂಚನ್‌ಗೆ ಸಾಧ್ಯವೇ ಎಂಬ ಪ್ರಶ್ನೆ ಸಹಜವಾಗಿಯೇ ಮೂಡುತ್ತದೆ. ಬಿಜೆಪಿಯ ಬಲಿಷ್ಠ ಸಂಘಟನೆ, ಧನಬಲ ಹಾಗೂ ಪಳಗಿದ ಅಭ್ಯರ್ಥಿ ಆಕಾಂಕ್ಷಿಗಳೆದುರು ಪ್ರಸಾದ್ ರಾಜ್ ಸಧ್ಯದ ಮಟ್ಟಿಗೆ ದುರ್ಬಲ ಅಭ್ಯರ್ಥಿ ಎಂದೇ ಕಂಡು ಬರುತ್ತಾರೆ. ಆದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಈ ಬಾರಿ ತಮ್ಮ ಪಕ್ಷದ ಶಾಸಕರು ಗೆದ್ದು ಬರಬೇಕೆಂಬ ತುಡಿತ ಇದೆ. ಜನರಲ್ಲಿ ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ಇದೆ. ಕರಾವಳಿಯಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪರಿಸ್ಥಿತಿ ಹೀಗಿರುವಾಗ ಟಿಕೆಟ್ ಆಕಾಂಕ್ಷಿಗಳಾಗಿದ್ದ ಏಳೆಂಟು ನಾಯಕರು, ಪಕ್ಷದ ಕಾರ್ಯಕರ್ತರನ್ನು ಪ್ರಸಾದ್ ರಾಜ್ ಅದು ಹೇಗೆ ಬಡಿದೆಬ್ಬಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವಾಗ ಅದು ಯಾವ ಎಡವಟ್ಟು ಮಾಡಿಕೊಳ್ಳಲಿದೆ ಎಂಬುದರ ಮೇಲೆ ಪ್ರಸಾದ್ ಕಾಂಚನ್ ಅವರ ಭವಿಷ್ಯ ನಿರ್ಧಾರವಾಗಲಿದೆ.

ಈ ಮಧ್ಯೆ ಕಾಂಗ್ರೆಸ್ ಟಿಕೆಟ್ ಪಡೆಯಲು ಭಗೀರಥ ಪ್ರಯತ್ನ ನಡೆಸಿದ್ದ ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸೂಚನೆ ನೀಡಿದ್ದು, ಅಭಿಮಾನಿಗಳು ಹಾಗೂ ಹಿತೈಷಿಗಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್‌ಗೆ ತಲೆ ನೋವಾಗಿ ಪರಿಣಮಿಸಲಿದೆ.

ದಿನೇಶ್‌ ಕಿಣಿ

ಪತ್ರಕರ್ತರು

ವಿಷಯಗಳು: #india #kannada #karnataka #peepal #peepalmedia
PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು