ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಹುಲ್ ಗಾಂಧಿಯನ್ನು ‘ಘಟಿಂಗ’ ಎಂದಿದ್ದ ವ್ಯಕ್ತಿ ಡಿಕೆಶಿ ಮಾಧ್ಯಮ ಕಾರ್ಯದರ್ಶಿ?: ಟ್ರೋಲ್ ಆಗುತ್ತಿವೆ ಹಳೇ ಪೋಸ್ಟ್‌ಗಳು

PPeepal Media

Peepal Media ರಾಜ್ಯ

• 1 ನಿಮಿಷದ ಓದು

ರಾಹುಲ್ ಗಾಂಧಿಯನ್ನು ‘ಘಟಿಂಗ’ ಎಂದಿದ್ದ ವ್ಯಕ್ತಿ ಡಿಕೆಶಿ ಮಾಧ್ಯಮ ಕಾರ್ಯದರ್ಶಿ?: ಟ್ರೋಲ್ ಆಗುತ್ತಿವೆ ಹಳೇ ಪೋಸ್ಟ್‌ಗಳು

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿಯ ಹಳೆಯ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಈಗ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿವೆ. ಕಾಂಗ್ರೆಸ್ ಪಕ್ಷದ ಅಗ್ರ ನಾಯಕ ರಾಹುಲ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಈ ಹಿಂದೆ ಮಾಡಲಾಗಿದ್ದ ವಿವಾದಾತ್ಮಕ ಪೋಸ್ಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಳ್ಳುವ ಮೂಲಕ ಜನರು, ಕಾಂಗ್ರೆಸ್ ನಾಯಕರ ಮಾನಸಿಕತೆಯನ್ನು ಪ್ರಶ್ನಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೂವರು ಮಾಧ್ಯಮ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಗಿತ್ತು. ಅದರಲ್ಲಿ ಒಬ್ಬರಾಗಿರುವ ರಾಘವೇಂದ್ರ ಭಟ್ ಎಂಬುವವರು ಈ ಹಿಂದೆ ಮಾಡಿದ್ದ ಪೋಸ್ಟ್‌ಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಮೇ 3, 2021ರ ಫೇಸ್‌ಬುಕ್ ಪೋಸ್ಟ್ ಒಂದರಲ್ಲಿ ರಾಹುಲ್ ಗಾಂಧಿ ಅವರನ್ನು ‘ಘಟಿಂಗ’ ಎಂದು ಕರೆಯಲಾಗಿತ್ತು. “ಈ ಘಟಿಂಗ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಮೊಮ್ಮಗ ಎಂದು ಕರೆಸಿಕೊಳ್ಳುವುದಕ್ಕೆ ಅರ್ಹನೇ?” ಎಂದು ಪ್ರಶ್ನಿಸಿ ಬರೆಯಲಾಗಿದ್ದ ಪೋಸ್ಟ್‌ನ ಸ್ಕ್ರೀನ್‌ಶಾಟ್ ಇಟ್ಟುಕೊಂಡು ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ಇದರ ಜೊತೆಗೆ ಇತ್ತೀಚಿನ ಮತ್ತೊಂದು ಪೋಸ್ಟ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ವ್ಯಂಗ್ಯವಾಡಲಾಗಿತ್ತು. “ಮೇ 26 ಮೋದಿ ಸರ್ಕಾರ ಹನ್ನೆರಡು ವರ್ಷ ಪೂರ್ಣಗೊಳಿಸಿದ ದಿನ, ಮೇ 26 ಸಿದ್ದರಾಮಯ್ಯ ರಾಜೀನಾಮೆಗೆ ನಿರ್ಧರಿಸಿದ ದಿನ… ಕಾಕತಾಳೀಯ ವೈರುಧ್ಯ ಹೊಂದಾಣಿಕೆ!” ಎಂದು ಬರೆಯಲಾಗಿತ್ತು.

ಈ ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡ ಪೋಸ್ಟರ್ ಹಂಚಿಕೊಂಡಿರುವ ಜಾಲತಾಣ ಬಳಕೆದಾರರು, “ರಾಹುಲ್ ಗಾಂಧಿಯವರನ್ನು ‘ಘಟಿಂಗ’ ಎಂದು ಕರೆದವನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಕಾರ್ಯದರ್ಶಿ! ಇದು ಅವರ ವೈಯಕ್ತಿಕ ಅಭಿಪ್ರಾಯವೇ? ಅಥವಾ ಕಾಂಗ್ರೆಸ್ ನಾಯಕರ ಅಧಿಕೃತ ಮನಸ್ಥಿತಿಯೇ? ಜನತೆ ಎಲ್ಲವನ್ನೂ ನೋಡುತ್ತಿದ್ದಾರೆ!” ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷದೊಳಗೆ ಸಾಫ್ಟ್ ಆರ್‌ಎಸ್ಎಸ್ ಮನಸ್ಥಿತಿಯನ್ನು ಮತ್ತೊಮ್ಮೆ ಸಾಮಾಜಿಕ ಜಾಲತಾಣದ ನೆಟ್ಟಿಗರು ಅನಾವರಣಗೊಳಿಸಿದ್ದಾರೆ. ಈ ಹಿಂದೆಯೂ ಸಹ ಬಿಎಸ್ ಯಡಿಯೂರಪ್ಪ ಅತ್ಯಾಪ್ತ, ಹಾಲಿ ಬಿಜೆಪಿ ಮುಖಂಡ ಬಿಡಿ ಭೂಕಾಂತ್ ಎಂಬ ಶಿವಮೊಗ್ಗ ಮೂಲದ ವ್ಯಕ್ತಿಯನ್ನು ನಿಗಮ ಮಂಡಳಿಯೊಂದರ ಅಧ್ಯಕ್ಷರನ್ನಾಗಿ ಮಾಡಲಾಗಿದ್ದೂ ಅಲ್ಲದೇ, ಅವರಿಗೆ ಸಚಿವ ಸ್ಥಾನಮಾನ ನೀಡಲಾಗಿತ್ತು. ಇದರ ಮೇಲೆ ಮೊದಲು ಬೆಳಕು ಚೆಲ್ಲಿದ ಪೀಪಲ್ ಮೀಡಿಯಾ ವರದಿ ಎಲ್ಲೆಡೆ ಸುದ್ದಿಯಾಗುತ್ತಿದ್ದಂತೆ ಬಿಡಿ ಭೂಕಾಂತ್‌ಗೆ ಸಿಕ್ಕ ಸಚಿವ ಸ್ಥಾನಮಾನವನ್ನು ಕಾಂಗ್ರೆಸ್ ಸರ್ಕಾರ ಕೂಡಲೇ ಹಿಂಪಡೆದಿದ್ದು ಇಲ್ಲಿ ಮತ್ತೊಮ್ಮೆ ನೆನೆಯಲೇಬೇಕು.

ಹೀಗೆ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಆಯಕಟ್ಟಿನ ಜಾಗದಲ್ಲಿ ಆರೆಸ್ಸೆಸ್ ತನ್ನ ಮನಸ್ಥಿತಿಯವರನ್ನು ಕೂರಿಸುತ್ತಿದೆಯೋ ಅಥವಾ ಕಾಂಗ್ರೆಸ್ ಪಕ್ಷದ ಒಳಗೇ ‘ನಮಸ್ತೇ ಸದಾ ವತ್ಸಲೆ..’ಯ ಹೊಗೆಯಾಡುತ್ತಿದೆಯೋ ಎಂಬ ಬಗ್ಗೆ ಈಗ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ.

ಒಟ್ಟಾರೆಯಾಗಿ ಬಿಜೆಪಿ ಕಾರ್ಯಕರ್ತರಿಗಿಂತಲೂ ಕೊಳಕಾಗಿ ಕಾಂಗ್ರೆಸ್‌ ಮತ್ತು ಅದರ ನಾಯಕರನ್ನು ಟ್ರೋಲ್‌ ಮಾಡಿರುವ ಹಾಗೂ ಟೀಕಿಸಿರುವ ವ್ಯಕ್ತಿಯನ್ನು ಮಾಧ್ಯಮ ಸಲಹೆಗಾರನನ್ನಾಗಿ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ತನ್ನದೇ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಗೊಂದಲಕ್ಕೆ ದೂಡಿದ್ದಾರೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು