ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಉಪಚುನಾವಣೆಯಲ್ಲಿ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಮುಖ್ಯಮಂತ್ರಿ ಸಿದ್ದರಾಮಯ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಉಪಚುನಾವಣೆಯಲ್ಲಿ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮಾರ್ಚ್ 16: ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯ ಗೆಲುವಿನಲ್ಲಿ ಕಾಂಗ್ರೆಸ್ ಮಹಿಳಾ ಸದಸ್ಯರ ಪಾತ್ರ ಮಹತ್ವವಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.

ಅವರು ಇಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಸಭೆ ಮತ್ತು ತರಬೇತಿ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.

2013 ರಿಂದ 2018 ಮತ್ತು 2023ರಿಂದ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ಪ್ರಮುಖ ಗ್ಯಾರಂಟಿಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯಿಂದ ಇದುವರೆಗೆ ಮಹಿಳೆಯರು 700 ಕೋಟಿ ಪ್ರಯಾಣಗಳನ್ನು ಕೈಗೊಂಡಿದ್ದಾರೆ. ಮಹಿಳಾ ಕೇಂದ್ರಿತ ಯೋಜನೆಗಳಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲಾಗಿದೆ. ಸರ್ಕಾರದ ಗ್ಯಾರಂಟಿಗಳಿಂದ ಮಹಿಳೆಯರ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 1.26 ಕೋಟಿ ಮಹಿಳೆಯರಿಗೆ ಮಾಸಿಕ 2000 ರೂಗಳನ್ನು ನೀಡಲಾಗುತ್ತಿದ್ದು, ಇದರಿಂದ ಮಹಿಳೆಯರ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿ ಸುಧಾರಿಸಿದೆ. ಆರ್ಥಿಕ ಸ್ವಾತಂತ್ರ್ಯದಿಂದ ಮಹಿಳೆಯರ ಆತ್ಮವಿಶ್ವಾಸ ಹೆಚ್ಚಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರು ಸಮಾಜದಲ್ಲಿ ಲಿಂಗತಾರತಮ್ಯ ಮತ್ತು ಅಸಮಾನತೆ ನಿವಾರಣೆಯಾಗದೇ ಸ್ವಾತಂತ್ರ್ಯ ಸಾರ್ಥಕತೆ ಹೊಂದುತ್ತದೆ ಎಂದರು.

ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ
ಮಹಿಳೆಯರಲ್ಲಿ ನಾಯಕತ್ವದ ಗುಣ ಬಹಳ ಪ್ರಮುಖವಾಗಿದೆ. ಎಲ್ಲರಿಗೂ ಸಮಾನ ಅವಕಾಶ ದೊರೆತರೆ ಸಮಾನತೆಯನ್ನು ಸಾಧಿಸುವುದು ಸುಲಭವಾಗಿದೆ. ಕರ್ನಾಟಕ ಪ್ರದೇಸ ಮಹಿಳಾ ಕಾಂಗ್ರೆಸ್ ನಲ್ಲಿ 1 ಲಕ್ಷಕ್ಕೂ ಹೆಚ್ಚು ಮಹಿಳಾ ಸದಸ್ಯರು ಇದ್ದು, ಭವಿಷ್ಯದಲ್ಲಿ ಈ ಸಂಖ್ಯೆ 2 ಲಕ್ಷಗಳಿಗೆ ವೃದ್ಧಿಸಬೇಕು. ಉಪಚುನಾವಣೆ ಸಮೀಸುತ್ತಿರುವುದರಿಂದ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹಿಳಾ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಮಹಿಳಾ ಸದಸ್ಯರ ಎರಡು ತಂಡಗಳನ್ನು ರಚಿಸಿ , ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಸೂಚಿಸಿದರು. ಕಳೆದ ಬಾರಿ ಚೆನ್ನಪಟ್ಟಣ, ಶಿಗ್ಗಾಂವ , ಸಂಡೂರು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿತ್ತು. ಈ ಬಾರಿಯೂ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕಿದ್ದು , ಇದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಕಾಂಗ್ರೆಸ್ ಪಕ್ಷ ಮಾಡಿಕೊಂಡಿದೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು