ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಮರ್ಪಕ ವಿದ್ಯುತ್ ಪೂರೈಕೆಗೆ 100 ಸಬ್ ಸ್ಟೇಷನ್‌ ಗಳನ್ನು ನಿರ್ಮಾಣ – ಸಚಿವ ಕೆ.ಜೆ.ಜಾರ್ಜ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 2 ನಿಮಿಷದ ಓದು

ಸಮರ್ಪಕ ವಿದ್ಯುತ್ ಪೂರೈಕೆಗೆ 100 ಸಬ್ ಸ್ಟೇಷನ್‌ ಗಳನ್ನು ನಿರ್ಮಾಣ – ಸಚಿವ ಕೆ.ಜೆ.ಜಾರ್ಜ್

ಹಾಸನ: ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯದಲ್ಲಿ ಈಗಾಗಲೇ 100 ಸಬ್ ಸ್ಟೇಷನ್‌ ಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಸೂಕ್ತ ಜಾಗ ನೀಡಿದರೆ ಇನ್ನಷ್ಟು ಸಬ್‌ಸ್ಟೇಷನ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಸಿಟಿಸಿಎಲ್) ವತಿಯಿಂದ ಅರಸೀಕೆರೆ ತಾಲೂಕಿನ ಕಸಬಾ ಹೋಬಳಿ, ಸೂಳೆಕೆರೆ(ಆಗ್ಗುಂದ) ಗ್ರಾಮದಲ್ಲಿ ನಿರ್ಮಿಸಿರುವ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರವನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಸಾಕ? ವಿದ್ಯುತ್ ಲಭ್ಯವಿದೆ. ಅದನ್ನು ಸಮರ್ಪಕವಾಗಿ ಪೂರೈಸಲು ಸಬ್ ಸ್ಟೇಷನ್‌ಗಳ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರ ಈಗಾಗಲೇ 100 ಸಬ್ ಸ್ಟೇಷನ್‌ ಗಳ ನಿರ್ಮಾಣಕ್ಕೆ ಕ್ರಮವಹಿಸಿದೆ. ಇನ್ನಷ್ಟು ಸಬ್‌ಸ್ಟೇಷನ್‌ಗಳು ಬೇಕು ಎಂಬ ಬೇಡಿಕೆ ಇದ್ದು, ಜಾಗದ ಕೊರತೆ ಇದೆ. ಸೂಕ್ತ ಜಾಗ ನೀಡಿದರೆ ಬೇಡಿಕೆಗೆ ತಕ್ಕಂತೆ ಸಬ್‌ಸ್ಟೇಷನ್‌ಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ಸತತ 7 ಗಂಟೆ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್- ಸಿ ಯೋಜನೆಯಡಿ ಕೃಷಿ ಫೀಡರ್‌ಗಳ ಸೌರೀಕರಣ ಮಾಡಲಾಗುತ್ತಿದೆ. ಈ ಯೋಜನೆಯಡಿ ಈಗಾಗಲೇ ರಾಜ್ಯದಲ್ಲಿ 2,400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕ್ರಮ ವಹಿಸಲಾಗಿದೆ. ಇದಕ್ಕಾಗಿ ಖಾಸಗಿಯವರು 10 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದ್ದಾರೆ. ಈ ಯೋಜನೆ ಪೂರ್ಣಗೊಂಡರೆ ಕೃಷಿ ಪಂಪ್‌ಸೆಟ್‌ಗಳ ವಿದ್ಯುತ್ ಸಮಸ್ಯೆ ಬಹುತೇಕ ಬಗೆಹರಿಯಲಿದೆ ಎಂದು ಹೇಳಿದರು.ನಿರಂತರ ಜ್ಯೋತಿ ಯೋಜನೆಯಡಿ ಗೃಹ ಬಳಕೆಗೆ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಯಾವುದೇ ಸಮಸ್ಯೆ ಇದ್ದಲ್ಲಿ ಅದನ್ನು ತ್ವರಿತವಾಗಿ ಬಗೆಹರಿಸಲಾಗುವುದು. ವಿದ್ಯುತ್ ಪೂರೈಕೆ ವಿಚಾರಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದಲೇ ಮೂಲ ಸೌಕರ್ಯ ಹೆಚ್ಚಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದರು.ಈಗಾಗಲೇ ಅಕ್ರಮ-ಸಕ್ರಮ ಯೋಜನೆ ಮೂಲಕ ರೈತರ ಪಂಪ್ ಸೆಟ್‌ಗಳಿಗೆ ಪಡೆದಿದ್ದ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುತ್ತಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಅಕ್ರಮ-ಸಕ್ರಮ ಯೋಜನೆಯಲ್ಲಿ 4.5 ಲಕ್ಷ ಅರ್ಜಿಗಳು ಬಾಕಿ ಉಳಿದಿತ್ತು. ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸಚಿವ ಸಂಪುಟದಲ್ಲಿ ಚರ್ಚಿಸಿ ಸಕ್ರಮಗೊಳಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಲಾಗಿದೆ ಎಂದು ತಿಳಿಸಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು ತಲಾ ಆದಾಯ ಹೆಚ್ಚಳವಾಗಿದೆ ಎಂದು ತಿಳಿಸಿದರು.

ಸಂಸದ ಶ್ರೇಯಸ್ ಪಟೇಲ್ ಅವರು ಮಾತನಾಡಿ ಕೃಷಿಕರ ಅಭಿವೃದ್ಧಿಗಾಗಿ ಉತ್ತಮ ಯೋಜನೆಗಳನ್ನು ರೂಪಿಸಿ ಉಚಿತ ವಿದ್ಯುತ್ ಪೂರೈಕೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರಲ್ಲದೆ, ಗೃಹ ಜ್ಯೋತಿ ಯೋಜನೆಯಡಿ ಸಾರ್ವಜನಿಕರಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಲಾಗುತ್ತದೆ ಎಂದರು.ರಾಜ್ಯ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಮಾತನಾಡಿ ಅರಸೀಕರೆ ಬರಡು ಭೂಮಿ ಎಂದು ಹೇಳಲಾಗುತ್ತಿತ್ತು. ಆದರೆ, ಹಲವು ಯೋಜನೆಗಳ ಮೂಲಕ ತಾಲೂಕಿನ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇದೀಗ ರೈತರಿಗೆ ಉತ್ತಮ ವಿದ್ಯುತ್ ಸೌಲಭ್ಯ ನೀಡಬೇಕಿದ್ದು, ಅರಸೀಕೆರೆಗೆ 100 ಮೆಗಾವ್ಯಾಟ್ ವಿದ್ಯುತ್ ಬೇಕಾಗಿದೆ. ಸದ್ಯ ನಮಗೆ ಅರ್ಧದಷ್ಟು ಮಾತ್ರ ಸಿಗುತ್ತಿದೆ. ರೈತರ ಈ ಬವಣೆಯನ್ನು ಹೋಗಲಾಡಿಸಲು ಕುಸುಮ್-ಸಿ ಯೋಜನೆ ಉಪಯುಕ್ತವಾಗಿದೆ. ಇದರ ಜತೆಗೆ ಕಾಡಂಚಿನ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆ ಕಾರಣ ರಾತ್ರಿ ವೇಳೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಇದೆ. ಈ ಕಾರಣದಿಂದಾಗಿ ನಿರಂತರ ಜ್ಯೋತಿ ಮೂಲಕ ಈ ಸಮಸ್ಯೆ ಬಗೆಹರಿಸಲು ಕ್ರಮವಹಿಸ ಬೇಕಿದೆ. ಅಲ್ಲದೇ ತಾಲೂಕು ವ್ಯಾಪ್ತಿಯಲ್ಲಿ ಇನ್ನಷ್ಟು ಸಬ್ ಸ್ಟೇಷನ್‌ಗಳನ್ನು ಆರಂಭಿಸಿ ರೈತರ ವಿದ್ಯುತ್ ಸಮಸ್ಯೆಯನ್ನು ಹೋಗಲಾಡಿಸಬೇಕು” ಎಂದು ಇಂಧನ ಸಚಿವರಿಗೆ ಮನವಿ ಸಲ್ಲಿಸಿದರು.ಕ.ವಿ.ಪ್ರ.ನಿ.ನಿ ಮುಖ್ಯ ಇಂಜಿನಿಯರ್ ಸತೀಶ್ ಚಂದ್ರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸದರಿ ವಿದ್ಯುತ್ ಕೇಂದ್ರದಿಂದ ೪.೪೨ ಮೇಗಾವ್ಯಾಟ್ ವಿದ್ಯುತ್ ವರ್ಗಾವಣೆ ಮಾಡಲಾಗುವುದು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸುವುದರ ಮೂಲಕ ಸುಮಾರು ೨೫ ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅಧ್ಯಕ್ಷರಾದ ಧರ್ಮಶೇಖರ್, ಅಗ್ಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕವಿತ, ದುಮ್ಮೇನ ಹಳ್ಳಿ ಗ್ರಾಪಂ ಅಧ್ಯಕ್ಷ ಎ.ಎಂ. ಅಜ್ಜಯ್ಯ, ಕ.ವಿ.ಪ್ರ.ನಿ.ನಿ ಅಧೀಕ್ಷಕರಾದ ಮಹೇಶ್, ಕಾರ್ಯಪಾಲಕ ಅಭಿಯಂತರರಾದ ಶಿವಾನಂದ, ಸೆಸ್ಕ್ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್ ಮತ್ತಿತರರು ಹಾಜರಿದ್ದರು.ಸೋಲಾರ್ ಪಾರ್ಕ್ ಪರಿಶೀಲನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಸಂಕೋಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು, ಕುಸುಮ್- ಸಿ ಯೋಜನೆಯಡಿ ಗ್ರಾಮದ 25 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿರುವ “ಸೋಲಾರ್ ಪಾರ್ಕ್” ಪರಿಶೀಲನೆ ನಡೆಸಿದರು.

ವಿಷಯಗಳು: #india #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು