ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

2026-27ನೇ ಸಾಲಿನ ಚೊಚ್ಚಲ ಬಜೆಟ್ ಮಂಡೆನ ಮಾಡಿದ -‌ ಬೆಂಗಳೂರು ಪೂರ್ವ ನಗರಪಾಲಿಕೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

2026-27ನೇ ಸಾಲಿನ ಚೊಚ್ಚಲ ಬಜೆಟ್ ಮಂಡೆನ ಮಾಡಿದ -‌ ಬೆಂಗಳೂರು ಪೂರ್ವ ನಗರಪಾಲಿಕೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ನೂತನ ನಗರ ಪಾಲಿಕೆಯಾಗಿ ರಚನೆಯಾದ ನಂತರ, ಬೆಂಗಳೂರು ಪೂರ್ವ ನಗರ ಪಾಲಿಕೆಯು (Bengaluru East) 2026-27ನೇ ಸಾಲಿನ ತನ್ನ ಚೊಚ್ಚಲ ಆಯವ್ಯಯವನ್ನು (Budget) ಇಂದು ಅಧಿಕೃತವಾಗಿ ಮಂಡಿಸಿದೆ.

ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಲಾದ ಈ ಆಯವ್ಯಯವನ್ನು ಆಯುಕ್ತರಾದ ಡಿ.ಎಸ್. ರಮೇಶ್ ಅವರು ಸಾರ್ವಜನಿಕವಾಗಿ ಮಂಡಿಸಿದರು.

ಮಹದೇವಪುರ ವಲಯದ ಗರುಡಾಚಾರ್ ಪಾಳ್ಯದಲ್ಲಿರುವ ಎಂ.ಎಲ್.ಆರ್ ಕನ್ವೆಂಷನ್ ಸೆಂಟರ್‌ನಲ್ಲಿ ಆಯೋಜಿಸಲಾಗಿದ್ದ ಈ ವಿಶೇಷ ಕಾರ್ಯಕ್ರಮವು ಪಾಲಿಕೆಯ ಆಡಳಿತಗಾರರಾದ ಶ್ರೀ ಮಹೇಶ್ವರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಹೊಸ ಪಾಲಿಕೆಯಾಗಿ ಅಸ್ತಿತ್ವಕ್ಕೆ ಬಂದ ಮೇಲೆ ಅಭಿವೃದ್ಧಿಯ ಹಾದಿಯಲ್ಲಿ ಇದು ಮಹತ್ವದ ಹೆಜ್ಜೆಯೆಂದು ಗುರುತಿಸಲಾಗಿದೆ. ಆದಾಯ ಮತ್ತು ವೆಚ್ಚದ ವಿವರ 

2026-27ನೇ ಸಾಲಿನ ಈ ಆಯವ್ಯಯದಲ್ಲಿ ಪೂರ್ವ ನಗರ ಪಾಲಿಕೆಯು ಸಮತೋಲಿತ ಬಜೆಟ್ ಮಂಡನೆಗೆ ಒತ್ತು ನೀಡಿದೆ. ಪಾಲಿಕೆಯ ಪ್ರಾರಂಭಿಕ ಶಿಲ್ಕು ಸೇರಿದಂತೆ ಒಟ್ಟು 3,890 ಕೋಟಿ ರೂಪಾಯಿಗಳ ಸ್ವೀಕೃತಿಯನ್ನು ಅಂದಾಜಿಸಲಾಗಿದೆ. 

ಈ ಪೈಕಿ ಒಟ್ಟು 3,889.98 ಕೋಟಿ ರೂಪಾಯಿಗಳ ವೆಚ್ಚವನ್ನು ನಿರೀಕ್ಷಿಸಲಾಗಿದ್ದು, ಅತ್ಯಲ್ಪ ಮೊತ್ತದ ಉಳಿತಾಯ ಬಜೆಟ್ ಇದಾಗಿದೆ. ಈ ಹಣವನ್ನು ಪೂರ್ವ ಬೆಂಗಳೂರು ವ್ಯಾಪ್ತಿಯ ರಸ್ತೆ, ಮೂಲಸೌಕರ್ಯ ಹಾಗೂ ನಾಗರಿಕ ಸೌಲಭ್ಯಗಳ ಉನ್ನತೀಕರಣಕ್ಕೆ ಬಳಕೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಕಾರ್ಯಕ್ರಮದಲ್ಲಿ ಆಡಳಿತ ಯಂತ್ರದ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು. ಅಭಿವೃದ್ಧಿ ವಿಭಾಗದ ಅಪರ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್, ಕಂದಾಯ ವಿಭಾಗದ ಅಪರ ಆಯುಕ್ತರಾದ ಪ್ರಜ್ಞಾ ಅಮ್ಮಂಬಳ, ಜಂಟಿ ಆಯುಕ್ತರಾದ ದಾಕ್ಷಾಯಿಣಿ ಹಾಗೂ ಸುಧಾ ಅವರು ಉಪಸ್ಥಿತರಿದ್ದರು. 

ಇವರೊಂದಿಗೆ ಮುಖ್ಯ ಅಭಿಯಂತರರಾದ ಲೋಕೇಶ್ ಮತ್ತು ಕೃಷ್ಣಮೂರ್ತಿ, ಉಪ ಆಯುಕ್ತರುಗಳಾದ ಶಶಿ ಕುಮಾರ್ ಮತ್ತು ಮುರಳಿಧರ್ ಹಾಗೂ ಹಣಕಾಸು ಉಪ ನಿಯಂತ್ರಕರಾದ ಎ.ಜಿ. ಮಂಜುನಾಥ್ ಸೇರಿದಂತೆ ಪಾಲಿಕೆಯ ಹಿರಿಯ ಅಧಿಕಾರಿಗಳು ಬಜೆಟ್ ಮಂಡನೆ ವೇಳೆ ಹಾಜರಿದ್ದರು. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಪೂರ್ವ ಪಾಲಿಕೆಯು ಪ್ರತ್ಯೇಕವಾಗಿ ಬಜೆಟ್ ಮಂಡಿಸಿರುವುದು ಸ್ಥಳೀಯ ಆಡಳಿತದ ವಿಕೇಂದ್ರೀಕರಣ ಮತ್ತು ತ್ವರಿತ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು