ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿದ್ಯಾರ್ಥಿನಿಲಯಗಳಲ್ಲಿ ಉತ್ತಮ ಓದುವ ವಾತಾವರಣ ನಿರ್ಮಿಸಿ : ಬಿ.ಆ ರ್ಪೂರ್ಣಿಮಾ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ವಿದ್ಯಾರ್ಥಿನಿಲಯಗಳಲ್ಲಿ ಉತ್ತಮ ಓದುವ ವಾತಾವರಣ ನಿರ್ಮಿಸಿ : ಬಿ.ಆ ರ್ಪೂರ್ಣಿಮಾ

ಹಾಸನ : ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯುವ ನಿಲಯಾರ್ಥಿಗಳಿಗೆ ಉತ್ತಮವಾಗಿ ಓದುವ ವಾತಾವರಣವನ್ನು ನಿರ್ಮಿಸಿಕೊಡುವಲ್ಲಿ ನಿಲಯದ ಸಿಬ್ಬಂದಿಗಳ ಪಾತ್ರ ಬಹು ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಬಿ.ಆರ್ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಿಲಯ ಪಾಲಕರು, ನಿಲಯ ಮೇಲ್ವಿಚಾರಕರು, ಕಿರಿಯ ನಿಲಯ ಮೇಲ್ವಿಚಾರಕರು, ಅಡುಗೆಯವರು, ಅಡುಗೆ ಸಹಾಯಕರುಗಳು ಖಾಯಂ ಹಾಗೂ ಹೊರ ಸಂಪನ್ಮೂಲ ಸಿಬ್ಬಂದಿಗಳಿಗೆ ವಿದ್ಯಾರ್ಥಿನಿಲಯಗಳ ನಿರ್ವಹಣೆ ಕುರಿತು ಮೇ.7 ರಿಂದ ಮೇ.9 ರವರೆಗೆ ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿರುವ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ನಿಲಯದ ಊಟೋಪಚಾರ ವ್ಯವಸ್ಥೆ, ಸ್ವಚ್ಚತೆ, ಶಿಸ್ತು ಈ ವಿಷಯಗಳ ಬಗ್ಗೆ ಯಾವುದೇ ರೀತಿಯ ಉದಾಸೀನತೆ ತೋರಿಸದೇ ಕರ್ತವ್ಯ ನಿರ್ವಹಿಸಬೇಕು. ನಿಲಯಗಳಲ್ಲಿ ಆಕಸ್ಮಿಕ ಅವಘಡಗಳು ಸಂಭವಿಸದ ಹಾಗೆ ಮುನ್ನೆಚ್ಚರಿಕೆಯನ್ನು ವಹಿಸಬೇಕು. ಪ್ರತಿ ಹಂತಗಳಲ್ಲೂ ಈ ಬಗ್ಗೆ ಪರಿವೀಕ್ಷಣೆಯನ್ನು ಮುಂದಿನ ಹಂತದ ಅಧಿಕಾರಿಗಳು ಮಾಡಬೇಕು ಎಂದು ತಿಳಿಸಿದರು.


ಮೊದಲ ದಿನದ ತರಬೇತಿಯಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲು 6 ಅವಧಿಗಳನ್ನು ನಿಗಧಿಪಡಿಸಲಾಗಿದ್ದು, ಮೊದಲ ಅವಧಿಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಮಂಜುಳ ಕೆ.ಕೆ ಅವರು ಗುಣಮಟ್ಟದ ಆಹಾರ ಮತ್ತು ಪೌಷ್ಠಿಕ ಆಹಾರದ ಮಹತ್ವ ಮತ್ತು ಅವುಗಳನ್ನು ನಿಲಯದಲ್ಲಿ ವಿತರಿಸುವಲ್ಲಿ ಅಂತಹ ಪದಾರ್ಥಗಳನ್ನು ಬಳಸುವ ಕ್ರಮದ ಬಗ್ಗೆ ಹಾಗೂ ವೈಯಕ್ತಿಕ ಸ್ವಚ್ಚತೆ, ನಿಲಯದ ಸ್ವಚ್ಚತೆ, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳು ಮತ್ತು ತಡೆಗಟ್ಟುವ ಕ್ರಮಗಳ ಬಗೆಗೆ ವಿವರಿಸಿದರು.


ಮುಂದಿನ ಅವಧಿಯಲ್ಲಿ ಗುಣಮಟ್ಟದ ಆಹಾರ ಪದಾರ್ಥಗಳ ಸರಬರಾಜು ಶುಚಿ ಮತ್ತು ರುಚಿಯಾದ ಆಹಾರ ತಯಾರಿಕೆ ಮತ್ತು ವಿತರಣೆ ಹಾಗೂ ಕಲಬೆರಕೆ ಆಹಾರ ಪದಾರ್ಥಗಳನ್ನು ಗುರುತಿಸುವಿಕೆ ಮತ್ತು ಕಲಬೆರಕೆ ಆಹಾರ ಪದಾರ್ಥ ಬಳಸುವುದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಆಹಾರ ಸುರಕ್ಷತಾ ಅಧಿಕಾರಿಗಳಾದ ಬಸವೇಗೌಡ ಮತ್ತು ವಿನಯ್ ಅವರು ವಿವರಿಸಿದರು.ಅಡುಗೆ ತಯಾರಿಯಲ್ಲಿ ಆಹಾರ ಧಾನ್ಯಗಳ ಸಂಯೋಜನೆ ಬಗೆಗೆ ನಿಲಯ ಮೇಲ್ವಿಚಾರಕರಾದ ತ್ರಿವೇಣಿ ಅವರು ವಿವರವಾದ ಮಾಹಿತಿ ನೀಡಿದರು. ಅಗ್ನಿ ಶಾಮಕ ಅಧಿಕಾರಿಗಳಾದ ಶಫೀಕ್ ಅಹಮ್ಮದ್ ಅವರು ಅಗ್ನಿ ಅವಘಡಗಳ ತಡೆಯುವಿಕೆ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಕುಮಾರ್ ಎಂ. ಜಿಲ್ಲೆಯ ವಿವಿಧ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಪ್ರತೀಪ ಎಸ್.ಕೆ., ಹರೀಶ್ ಕೆ., ರಾಜೇಶ್ ಚೌಹಾಣ್ ಹಾಜರಿದ್ದರು. ಸಕಲೇಶಪುರ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳಾದ ಚಂದ್ರಶೇಖರ್ ಆರ್ ಇವರು ಕಾರ್ಯಕ್ರಮ ನಿರೂಪಿಸಿದರು.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು