ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರ್ ಎಸ್ ಎಸ್ ಎದುರಿಸಲು ನಾವು ಸಿದ್ಧ: 1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು: ಸಿಎಂ ಸಿದ್ದರಾಮಯ್ಯ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಆರ್ ಎಸ್ ಎಸ್ ಎದುರಿಸಲು ನಾವು ಸಿದ್ಧ: 1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು: ಸಿಎಂ ಸಿದ್ದರಾಮಯ್ಯ

ಬಿಜೆಪಿ ಆರ್ ಎಸ್.ಎಸ್ ಹೇಳಿದಂತೆ ಮಾಡುತ್ತೆ. ಆರ್ ಎಸ್ .ಎಸ್ ನವರಿಗೆ ನಾವು ಹೆದರುವುದಿಲ್ಲ. ಅವರನ್ನು ಎದುರಿಸಲು ನಾವು ಸಿದ್ದ ಎಂದು ಮುಖ್ಯಮಂತ್ರಿಗಳು ಪ್ರತಿಪಕ್ಷದವರಿಗೆ ಹೇಳಿದರು.

ದಲಿತರ, ಹಿಂದುಳಿದವರ ಏಳಿಗೆ ಸಹಿಸದ ಬಿಜೆಪಿಗೆ ದಲಿತರು ದಲಿತರ ಕಾಲೋನಿಯಲ್ಲೇ ಇರಬೇಕು ಎನ್ನುವ ದುರುದ್ದೇಶವಿದೆ.

1942 ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು ನೀವು. ನೀವು ಬ್ರಿಟಿಷರ ಏಜೆಂಟರು.
ಆರ್.ಅಶೋಕ್ ಸಾರಿಗೆ ಸಚಿವರಾಗಿದ್ದಾಗ ಶೇ47 ರಷ್ಟು ದರ ಏರಿಕೆ ಮಾಡಿದ್ದರು. ನಮ್ಮ ಸರ್ಕಾರ ಶೇ15 ರಷ್ಟು ಮಾತ್ರ ಪರಿಷ್ಕರಣೆ ಮಾಡಿದೆ: ಸಿ.ಎಂ

ಶಾಸಕ ಭರತ್ ಶೆಟ್ಟಿ ರಾಹುಲ್ ಗಾಂಧಿ ಯವರಿಗೆ ಕಪಾಳಕ್ಕೆ ಹೊಡೆಯಬೇಕು ಎಂದು ಹೇಳಿಕೆ ನೀಡಿದ್ದಾರೆ. ಇದೇ ದ್ವೇಷದ ರಾಜಕಾರಣ. ಇದನ್ನು ಮಾಡಬಾರದು. ಇದನ್ನು ಹುಟ್ಟುಹಾಕಿದ್ದು ಆರ್.ಎಸ್.ಎಸ್ ನವರು ಎಂದದ್ದಕ್ಕೆ ಗಲಾಟೆ ನೀವು ಮಾಡಿದಿರಿ.

ನಮ್ಮ ಕಾಲದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ರಾಜ್ಯ ಮಾದಕ ವಸ್ತು ಮುಕ್ತವಾಗಬೇಕು. ನಿನ್ನೆಯಷ್ಟೇ 75 ಕೋಟಿ ಮೌಲ್ಯದ ಮಾದಕವಸ್ತು ವಶಪಡಿಸಿಕೊಳ್ಳಲಾಗಿದೆ .ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದ ಹೂಡಿಕೆಗಳು ಹೆಚ್ಚಾಗಿದೆ. ಇತ್ತೀಚೆಗೆ ನಡೆದ ಘಟನೆಗಳಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಲಾಗಿದೆ. ಇವರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಲಾಗುವುದು.

ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಅಂಕಿ ಅಂಶಗಳನ್ನು ಇಟ್ಟು ಸ್ಪಷ್ಟಪಡಿಸಿದರು.

ಅಪರಾಧಗಳಿಲ್ಲವೇ ಇಲ್ಲ ಎಂದು ಹೇಳಲ್ಲ. ಆದರೆ ಕಡಿಮೆಯಾಗಿವೆ ಎಂದರು.

ಹಾಲಿನ ದರದ ಏರಿಕೆ ಬಗ್ಗೆ ಮಾತನಾಡಿದ ಸಿಎಂ, 600 ಕೋಟಿ ರೂ ಉಳಿಸಿ ಹೋದವರು ನೀವು ಬಿಜೆಪಿ ಯವರು. ಆದರೆ ನಾವು ಈ ವರ್ಷ 1500 ಕೋಟಿ ಕೊಟ್ಟಿದ್ದು, ಮುಂದಿನ ವರ್ಷ 1500 ಕೋಟಿ ಮೀಸಲಿಟ್ಟಿದೆ.

ಹಂತ ಹಂತವಾಗಿ ಪ್ರೋತ್ಸಾಹ ಧನವನ್ನು ಹೆಚ್ಚು ಮಾಡಲಾಗಿದೆ. 341 ಕೋಟಿ ರೂಪಾಯಿ ಇದ್ದದ್ದು, 1300 ಕೋಟಿ ಹೆಚ್ಚಾಗಿದೆ. ಈ ಪ್ರಗತಿಗೆ ನಮ್ಮ ಸರ್ಕಾರ ಕಾರಣ ಎಂದರು.

ವಿರೋಧ ಪಕ್ಷದ ನಾಯಕರು ಬಸ್ಸಿನ ದರ ಏರಿಕೆ ಬಗ್ಗೆ ಮಾತನಾಡಿದ್ದಾರೆ. 2008-2013 ವರೆಗೆ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಶೇ 47% ರಷ್ಟು ದರ ಏರಿಸಿದ್ದರು ಎಂದರು.

ನಾವು ಬಸ್ಸಿನ ದರ ಶೇ 15% ಮಾತ್ರ ಪರಿಷ್ಕರಣೆ ಮಾಡಿದ್ದೇವೆ. ಸಿಬ್ಬಂದಿ ವೇತನ, ಡೀಸಲ್ ಬೆಲೆ ಏರಿಕೆಯಾದ ಕಾರಣಕ್ಕೆ ನಾವು ಬಸ್ಸಿನ ದರ ಹೆಚ್ಚಳ ಮಾಡಬೇಕಾಗುತ್ತದೆ ಎಂದು ವಿವರಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು