ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಿ ಟಿ ರವಿ ಚಕ್ಕರ್?

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ಸಿ ಟಿ ರವಿ ಚಕ್ಕರ್?

ಬೆಂಗಳೂರು: ಯಡಿಯೂರಪ್ಪನವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ 15ರಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದ, ಇದರ ಸಲುವಾಗಿ ಅವರು ಸಿ ಟಿ ರವಿಯವರನ್ನು ಭೇಟಿಯಾದರು. ಆದರೆ ಸಿ ಟಿ ಪಕ್ಷದ ಪ್ರಚಾರ ಕಾರ್ಯಕ್ರಮ ನೆಪ ಹೇಳಿ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಭೇಟಿಯಲ್ಲಿ ನವೆಂಬರ್ 15ರಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯಲಿರುವ ತಮ್ಮ ಪ್ರಮಾಣ ವಚನ ಸಮಾರಂಭಕ್ಕೆ ಹಾಜರಾಗುವಂತೆ ವಿಜಯೇಂದ್ರ ರವಿ ಅವರಿಗೆ ಆಹ್ವಾನ ನೀಡಿದರು. ಆದರೆ ಪೂರ್ವ ನಿಗದಿತ ಕಾರ್ಯಕ್ರಮದ ಕಾರಣ ತಾನು ಅಂದು ಹಾಜರಿರಲು ಸಾಧ್ಯವಿಲ್ಲ ಎಂದು ರವಿ ತಿಳಿಸಿದ್ದಾರೆ. ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಧ್ಯಪ್ರದೇಶದಲ್ಲಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

ವಿಜಯೇಂದ್ರ ಅವರು ಬುಧವಾರ ರಾಜ್ಯಾಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸುವಂತೆ ಹಲವು ಹಿರಿಯ ನಾಯಕರಿಗೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನವೆಂಬರ್ 23-30ರ ನಡುವೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ದೊಡ್ಡ ಸಭೆಯೊಂದನ್ನು ಯೋಜಿಸಿದೆ.

ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದಾಗಿನಿಂದ ರವಿ ಅವರು ಈ ನಿರ್ಧಾರದ ವಿರುದ್ಧ ಬಹಿರಂಗವಾಗಿಯೇ ಭಿನ್ನಾಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಪಕ್ಷ ನನಗೆ ಯಾವುದೇ ಜವಾಬ್ದಾರಿ ನೀಡದಿದ್ದರೂ ಪಕ್ಷದ ಪರ ಪ್ರಚಾರ ಮುಂದುವರಿಸುತ್ತೇನೆ. ನಾನು ಬೇರೆ ಪಕ್ಷ ಸೇರುವ ಬಗ್ಗೆ ಯೋಚಿಸಿಲ್ಲ. ರಾಜಕೀಯದಿಂದ ಬೇಸತ್ತರೆ ಮನೆಯಲ್ಲಿ ಕೂರುತ್ತೇನೆ ಆದರೆ ಬೇರೆ ಪಕ್ಷ ಸೇರುವುದಿಲ್ಲ ಎಂದು ರವಿ ಸೋಮವಾರ ಹೇಳಿದ್ದಾರೆ.

ಈ ವರ್ಷ ಮೇನಲ್ಲಿ ನಡೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಹಂಚಿಕೆ ವಿಚಾರವಾಗಿ ರವಿ ಮತ್ತು ವಿಜಯೇಂದ್ರ ನಡುವೆ ಮಾತಿನ ಚಕಮಕಿ ನಡೆದಿತ್ತು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು