ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಎಸ್‌ಐಆರ್‌ ಕುರಿತು ಏಕಮತದ ತೀರ್ಮಾನ ಕೈಗೊಂಡಿರುವುದಕ್ಕೆ ಇಸಿಐ ದಾಖಲೆಗಳನ್ನು ಸಲ್ಲಿಸಿಲ್ಲ: ಸುಪ್ರೀಂಕೋರ್ಟಿನಲ್ಲಿ ವಾದ ಸಲ್ಲಿಸಿದ ಅರ್ಜಿದಾರರುಬೇಡಿಕೆ ಈಡೇರಿಸುವ ತನಕ ನಾವು ಇಲ್ಲಿಂದ ಹೋಗುವುದಿಲ್ಲ: ಆರೋಗ್ಯ ಸಚಿವರ ಮನವಿಯನ್ನು ತಿರಸ್ಕರಿಸಿದ ಆಶಾ ಕಾರ್ಯಕರ್ತೆಯರುದಕ್ಷಿಣ ಕನ್ನಡ | ಕೋಲ್ಡ್‌ ಪ್ರೆಸ್ಡ್‌ ಹೆಸರಿನಲ್ಲಿ ಕಚ್ಚಾ ಎಣ್ಣೆ ಮಾರಾಟ: 1,240 ಕೆ.ಜಿ. ಅಡುಗೆ ಎಣ್ಣೆ ವಶಕ್ಕೆ ಪಡೆದ ಆಹಾರ ಸುರಕ್ಷತಾ ಇಲಾಖೆಹೋಟೆಲ್‌ ಕೋಣೆಯಲ್ಲಿ ಗಾಂಜಾ ಇಟ್ಟು ಸುಳ್ಳು ಪ್ರಕರಣ ದಾಖಲಿಸಲು ಸಂಚು, ವಿಡಿಯೊ ವೈರಲ್‌; ಠಾಣಾಧಿಕಾರಿ ವರ್ಗಾವಣೆಭದ್ರಾ ಅರಣ್ಯಕ್ಕೆ 56 ಕಾಡಾನೆಗಳ ಸ್ಥಳಾಂತರಕ್ಕೆ ವಿರೋಧ: ಪ್ರಸ್ತಾವನೆ ಕೈಬಿಡುವಂತೆ ಅರಣ್ಯ ಸಚಿವರಿಗೆ ಶಾಸಕ ರಾಜೇಗೌಡ ಮನವಿಹಾಸನದ ಬೇಲೂರಿನಲ್ಲಿ ಕಾಡಾನೆ ಸೆರೆ – ಸ್ಥಳಾಂತರ ಕಾರ್ಯಾಚರಣೆಗೆ ಚಾಲನೆಅನುದಿನದ ಅಂತರಂಗ: ತುಳಿದಷ್ಟೂ ಬೆಳೆಯುತ್ತೇನೆ ತಿಳಿದಿರಲಿ ನಿಮಗೆಬೊಗಸೆಗೆ ದಕ್ಕಿದ್ದು-101 : ಮೇಲ್ವರ್ಗದ ರಕ್ಷಣೆ, ಕೆಳವರ್ಗದ ಗುಲಾಮಿಯೇ ಸರ್ವಾಧಿಕಾರದ ಗುರಿ!SIR ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಸುಪ್ರೀಂ ಕೋರ್ಟ್ ಅಂಗಳಕ್ಕೆ!ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆಗೆ ಸಿದ್ಧತೆ: 300ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆಕೇಂದ್ರದ ವಿರುದ್ಧ ಸುಪ್ರೀಂ ದೂರು – ರಾಜ್ಯ ಬರಬೇಕಾದ 2186 ಕೋಟಿ ರೂ. ಬಾಕಿಕೋಲಾರ : ಆಟೋಗೆ ಸ್ಕೊಡಾ ಕಾರಿನ ನಡುವೆ ಬೀಕರ ಅಪಘಾತ – ಇಬ್ಬರು ದುರ್ಮರಣಎಂಎಸ್ ಧೋನಿ ಐಪಿಎಲ್ ನಿವೃತ್ತಿ: 2027ರಿಂದ CSK ಮೆಂಟರ್ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ – ಮಧು ಬಂಗಾರಪ್ಪಸಾತನೂರು: ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆ; ಬೋನಿಗೆ.ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯಗೆ ಐದನೇ ಸಾಲಿನ ಆಸನ! ಕರ್ನಾಟಕದಲ್ಲಿ ಕಾಂಗ್ರೆಸ್ ತನ್ನ ತಲೆ ಮೇಲೆ ತಾನೇ ಕಲ್ಲು ಎಳೆದುಕೊಂಡಿದೆ ಎಂಬ ಚರ್ಚೆಧರ್ಮಸ್ಥಳದ ಪ್ರತಿಭಟನೆಗೆ ಪ್ರಚಾರ, ಸೌಜನ್ಯಳ ನ್ಯಾಯದ ಪ್ರಶ್ನೆಗಳಿಗೆ ಇಲ್ಲ ಉಪಚಾರ!ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ನಮ್ಮ ಕುಟುಂಬದ ಬಗ್ಗೆ ಹರಡಿರುವ ಬಹುತೇಕ ಕಥೆಗಳು ಸತ್ಯಕ್ಕೆ ದೂರ: ಆತ್ಮಕಥೆ ಬರೆಯಲು ಕಾರಣ ತಿಳಿಸಿದ ಸೋನಿಯಾ ಗಾಂಧಿಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ಹಂಚಿಕೆ ಹಕ್ಕು ಸರ್ಕಾರದ್ದು, ಜನರದ್ದಲ್ಲ: ಸುಪ್ರೀಂಕೋರ್ಟ್

ದಕ್ಷಿಣ ಕನ್ನಡ | ಕೋಲ್ಡ್‌ ಪ್ರೆಸ್ಡ್‌ ಹೆಸರಿನಲ್ಲಿ ಕಚ್ಚಾ ಎಣ್ಣೆ ಮಾರಾಟ: 1,240 ಕೆ.ಜಿ. ಅಡುಗೆ ಎಣ್ಣೆ ವಶಕ್ಕೆ ಪಡೆದ ಆಹಾರ ಸುರಕ್ಷತಾ ಇಲಾಖೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ದಕ್ಷಿಣ ಕನ್ನಡ | ಕೋಲ್ಡ್‌ ಪ್ರೆಸ್ಡ್‌ ಹೆಸರಿನಲ್ಲಿ ಕಚ್ಚಾ ಎಣ್ಣೆ ಮಾರಾಟ: 1,240 ಕೆ.ಜಿ. ಅಡುಗೆ ಎಣ್ಣೆ ವಶಕ್ಕೆ ಪಡೆದ ಆಹಾರ ಸುರಕ್ಷತಾ ಇಲಾಖೆ

ಮಂಗಳೂರು: ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಮತ್ತು ತಪ್ಪು ಲೇಬಲಿಂಗ್‌ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬೋಳಾಸ್‌ ಅಗ್ರೋ ಪ್ರೈವೇಟ್‌ ಲಿಮಿಟೆಡ್‌ನಿಂದ 1,240 ಕೆ.ಜಿ. ಅಡುಗೆ ಎಣ್ಣೆಯನ್ನು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಶಪಡಿಸಿಕೊಂಡ ದಾಸ್ತಾನಿನಲ್ಲಿ ಶೇಂಗಾ ಎಣ್ಣೆ ಮತ್ತು ತೆಂಗಿನ ಎಣ್ಣೆ ಸೇರಿವೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಿಂದ ಖರೀದಿಸಲಾಗಿದ್ದ ಕಚ್ಚಾ ಶೇಂಗಾ ಎಣ್ಣೆಯನ್ನು ರೀಪ್ಯಾಕ್ ಮಾಡಿ, ‘ಕೋಲ್ಡ್‌ ಪ್ರೆಸ್ಡ್‌ ಶೇಂಗಾ ಎಣ್ಣೆ’ ಎಂದು ಮಾರಾಟ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಚ್ಚಾ ಶೇಂಗಾ ಎಣ್ಣೆಯನ್ನು ಕೋಲ್ಡ್‌ ಪ್ರೆಸ್ಡ್‌ ಎಣ್ಣೆ ಎಂದು ಲೇಬಲ್‌ ಮಾಡಿ ಮಾರಾಟ ಮಾಡಿರುವುದು ಗ್ರಾಹಕರನ್ನು ತಪ್ಪುದಾರಿಗೆ ಎಳೆಯುವ ಕ್ರಮವಾಗಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಉತ್ಪನ್ನಗಳ ಲೇಬಲಿಂಗ್‌ ಮತ್ತು ಮಾರುಕಟ್ಟೆ ಮಾರಾಟಕ್ಕೆ ಸಂಬಂಧಿಸಿದ ನಿಯಮಗಳ ಉಲ್ಲಂಘನೆಯ ಕುರಿತು ಪರಿಶೀಲನೆ ನಡೆಸಲಾಗಿದೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸಂಸ್ಥೆಯ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ನಡೆಸಿದ ಪರಿಶೀಲನೆಯ ವೇಳೆ ಒಟ್ಟು 1,240 ಕೆ.ಜಿ. ಅಡುಗೆ ಎಣ್ಣೆಯನ್ನು ವಶಪಡಿಸಿಕೊಳ್ಳಲಾಗಿದೆ.

ಮಾಮೂಲಿ ಎಣ್ಣೆಗೆ ಹೋಲಿಸಿದರೆ ಕೋಲ್ಡ್‌ ಪ್ರೆಸ್‌ ಎಂದು ಮಾರಲಾಗುವ ಎಣ್ಣೆಗೆ ವಿಪರೀತ ದರವಿದ್ದು, ಈ ಘಟನೆಯಿಂದ ಗ್ರಾಹಕರು ಈಗ ಕೋಲ್ಡ್‌ ಪ್ರೆಸ್ಡ್/‌ಗಾಣದ ಎಣ್ಣೆ ಹೆಸರಿನಲ್ಲಿ ಮಾರಲ್ಪಡುವ ಎಣ್ಣೆಗಳನ್ನು ಅನುಮಾನದಿಂದ ನೋಡುವ ಪರಿಸ್ಥಿತಿ ಉಂಟಾಗಿದೆ.

ಇದನ್ನೂ ಓದಿ:

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು