ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಡಿ.ಉಮಾಪತಿಯವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು (ಕರ್ನಾಟಕ ವಾರ್ತೆ) ಡಿ.5: ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ವರ್ಷದಿಂದ ಪ್ರಾರಂಭಿಸಿರುವ “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ” ಪ್ರಶಸ್ತಿಗೆ ಹೆಸರಾಂತ ಹಿರಿಯ ಪತ್ರಕರ್ತರಾದ ಡಿ.ಉಮಾಪತಿಯವರನ್ನು ಆಯ್ಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ ,ವಿಶೇಷ ಲೇಖನಗಳ ಪ್ರಕಟಣೆಯನ್ನು ಗುರುತಿಸಿ,ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿಯವರು 2024 ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ “ವಡ್ಡರ್ಸೆ ರಘುರಾಮಶೆಟ್ಟಿ” ಅವರ ಹೆಸರಿನಲ್ಲಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಘೋಷಿಸಿದ್ದರು. ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು “ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿತ್ತು.ಪ್ರಶಸ್ತಿಯು 2 ಲಕ್ಷ ರೂ.ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಡಿ.ಉಮಾಪತಿ ಅವರ ಪರಿಚಯ: ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ ಉಮಾಪತಿ ಅವರು ಮೈಸೂರು ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಪಡೆದವರು. ನ್ಯೂ ಇಂಡಿಯನ್ ಎಕ್ಸಪ್ರೆಸ್ ಸಮೂಹ ಸಂಸ್ಥೆಯ ಕನ್ನಡಪ್ರಭ, ಈ ಟಿವಿಯ ದೆಹಲಿ ಕರೆಸ್ಪಾಂಡೆಂಟ್ ಅಗಿ 27 ವರ್ಷಗಳ ಪರಿಣಾಮಕಾರಿ ವರದಿಗಳಿಂದ ಹೆಸರುಗಳಿಸಿದವರು. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು , ಸುಪ್ರೀಂ ಕೋರ್ಟು ಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಮತ್ತು ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ. ದೆಹಲಿಯಲ್ಲಿ ನೆಲೆಸಿರುವ ಡಿ. ಉಮಾಪತಿ ಅವರು ಆಂದೋಲನ , ರೈತ ಚಳವಳಿ, ವಿಜಯಕರ್ನಾಟಕ, ಪ್ರಜಾವಾಣಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ. ಪ್ರಸ್ತುತ ’ನ್ಯಾಯಪಥ(ಗೌರಿ ಮಿಡಿಯಾ)’ ಮತ್ತು ’ಈದಿನ’ ವೆಬ್ ಜರ್ನಲ್ ಸಂದರ್ಶಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ’ದೆಹಲಿ ನೋಟ’ , ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು