ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹೈನುಗಾರಿಕೆ ಜಿಲ್ಲೆಯ ರೈತರ ಜೀವನೋಪಾಯದ ಪ್ರಮುಖ ಆಧಾರ – ಎಸ್.ಎನ್. ಪ್ರಕಾಶ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

ಹೈನುಗಾರಿಕೆ ಜಿಲ್ಲೆಯ ರೈತರ ಜೀವನೋಪಾಯದ ಪ್ರಮುಖ ಆಧಾರ – ಎಸ್.ಎನ್. ಪ್ರಕಾಶ್‌

ಬೇಲೂರು :  ಹೈನುಗಾರಿಕೆ ಜಿಲ್ಲೆಯ ರೈತರ ಜೀವನೋಪಾಯಕ್ಕೆ ಪ್ರಮುಖ ಆಧಾರವಾಗಿದೆ ಎಂದು ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಸ್.ಎನ್. ಪ್ರಕಾಶ್‌ ತಿಳಿಸಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಹಾಸನ ಜಿಲ್ಲಾ ಸಹಕಾರ ಒಕ್ಕೂಟ, ಹಾಸನ ಸಹಕಾರ ಹಾಲು ಒಕ್ಕೂಟ, ಮತ್ತು ಸಹಕಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ಇಂದು ಬೇಲೂರು ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದ  ಸಭಾಂಗಣದಲ್ಲಿ ಸಂಘದ ಕಾರ್ಯದರ್ಶಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ತರಭೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಬಳಿಕ ಅವರು ಮಾತನಾಡಿದರು.ಸಹಕಾರ ಕ್ಷೇತ್ರದಲ್ಲಿ ಎಲ್ಲರನ್ನು ಒಗ್ಗೂಡಿಸಿ ಎಲ್ಲರ ಸಹಕಾರದಿಂದ ಸಂಘಗಳನ್ನು ಮುಂದುವರೆಸಿಕೊಂಡು ಹೋಗುವುದು ದೊಡ್ಡ ಸಾಧನೆಯಾಗಿದೆ. ಇಂದಿನ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಒಂದೇ ರೈತರ ಜೀವನೋಪಾಯಕ್ಕೆ ಆಧಾರವಾಗಿದೆ. ಹಾಗಾಗಿ ಸಹಕಾರ ಸಂಘಗಳು ಹೆಚ್ಚೆಚ್ಚು ಲಾಭಗಳಿಸಿ ರೈತರು ಆರ್ಥಿಕವಾಗಿ ಅಭಿವೃದ್ದಿ ಹೊಂದಲು ಸಹಾಯವಾಗಬೇಕೆಂದರು.ಹಾಸನದ ಪಶುವೈದ್ಯಕೀಯ ಮಹಾ ವಿದ್ಯಾಲಯದ ಸಹ ಪ್ರಾಧ್ಯಪಕ ಡಾ|| ಚೇತನರವರು ವೈಜ್ಞಾನಿಕ ಹೈನುಗಾರಿಕೆ ಆಹಾರ ಪದ್ಧತಿ ಹಾಗೂ ಹೈನುರಾಸುಗಳಲ್ಲಿ ಹಾಲಿನ ಗುಣಮಟ್ಟದ ನಿರ್ವಹಣೆ, ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಸೌಜನ್ಯರವರು ಆಧುನಿಕ ಹೈನುಗಾರಿಕೆಯಲ್ಲಿ ಕಾರ್ಯದರ್ಶಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತಂತೆ ಹಾಗೂ ಬೇಲೂರು ತಾಲ್ಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿ ಗುರುಮೂರ್ತಿ ಸಹಕಾರ ಸಂಘಗಳ ಚುನಾವಣೆ, ವಾರ್ಷಿಕ ಸರ್ವ ಸದಸ್ಯರ ಸಭೆ ಕುರಿತಂತೆ ಉಪನ್ಯಾಸ ನೀಡಿದರು.ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಡಿ.ಪಿ. ಸೋಮೇಗೌಡ, ನಿರ್ದೇಶಕ ಸಿದ್ದೇಶ್,  ಜಿ.ಆರ್. ರಾಮಚಂದ್ರೇಗೌಡ, ಒಕ್ಕೂಟದವಿಸ್ತರಣಾಧಿಕಾರಿ ಪುಟ್ಟರಾಮು, ದಿನೇಶ್, ಸುರೇಶ್ ಹಾಗೂ ಬೇಲೂರು ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ 80 ಜನ ಪ್ರತಿನಿಧಿಗಳು ಹಾಗೂ ಇತರ ಸಿಬ್ಬಂದಿಗಳು ಬಾಗವಹಿಸಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು