ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಲಿತ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನ ಹಂಚಿಕೆ ಕೊರತೆ ಭರ್ತಿ ಮಾಡಲು ಸಿಎಂ ಸೂಚನೆ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ದಲಿತ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನ ಹಂಚಿಕೆ ಕೊರತೆ ಭರ್ತಿ ಮಾಡಲು ಸಿಎಂ ಸೂಚನೆ

ದಲಿತ ಉದ್ದಿಮೆದಾರರಿಗೆ 2009ರಲ್ಲಿ ನಿಗದಿ ಪಡಿಸಿದ ಮೀಸಲಾತಿಯಂತೆ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿನ ಕೊರತೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ತಮ್ಮನ್ನು ಭೇಟಿಯಾದ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ನಿಯೋಗದ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಿ, ಈ ವಿಷಯ ತಿಳಿಸಿದರು. ಇದಕ್ಕಾಗಿ ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜೊತೆಯಾಗಿ ಲ್ಯಾಂಡ್ ಆಡಿಟ್ ಮಾಡಿ ವರದಿ ಸಲ್ಲಿಸಿ, ಕೊರತೆಯಾಗಿರುವ ಭೂಮಿ ಹಂಚಿಕೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪರಿಶಿಷ್ಟಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನವನ್ನು ಶೇ. 60 ರಷ್ಟು ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿಯಲ್ಲಿ ಹಾಗೂ ಶೇ. 40 ರಷ್ಟು ರಾಜ್ಯಮಟ್ಟದ ಸಮಿತಿಯಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಆದರೆ ದಲಿತ ಉದ್ದಿಮೆದಾರರಲ್ಲಿ ಬಹುತೇಕ ಮಂದಿಯ ಯೋಜನಾ ವೆಚ್ಚ 15 ಕೋಟಿಗಿಂತ ಕಡಿಮೆ ಇರುವುದರಿಂದ ಜಿಲ್ಲಾ ಮಟ್ಟದಲ್ಲಿನ ಹಂಚಿಕೆಯ ಪ್ರಮಾಣವನ್ನು ಹೆಚ್ಚಿಸುವಂತೆ ಸಂಘದವರು ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಮಟ್ಟದಲ್ಲಿ ಶೇ. 70 ರಷ್ಟು ಹಾಗೂ ರಾಜ್ಯ ಮಟ್ಟದಲ್ಲಿ ಶೇ. 30 ರಷ್ಟು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೆ.ಎಸ್.ಎಫ್.ಸಿ.ಯಲ್ಲಿ ಸಾಲ ಸೌಲಭ್ಯ ಪಡೆಯುವಾಗ ಸಮಾನಾಂತರ ಭದ್ರತೆಗೆ ಕೈಗಾರಿಕಾ ಭೂಮಿಯ ವಾಸ್ತವ ಬೆಲೆಯನ್ನು ಪರಿಗಣಿಸುವಂತೆ ಸಂಘದವರು ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

Pee

ದಲಿತ ಉದ್ದಿಮೆದಾರರ ಕೈಗಾರಿಕೆಯಲ್ಲಿ ಕನಿಷ್ಠ 10 ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದರೆ ವೇತನ ಪ್ರೋತ್ಸಾಹಕವನ್ನು ನೀಡುವಂತೆ ಸಂಘವು ಮಾಡಿದ ಮನವಿಯನ್ನು ಮುಂದಿನ ಆಯವ್ಯಯದಲ್ಲಿ ಪರಿಶೀಲಿಸುವುದಾಗಿ ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು