ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜನಪರ ಉತ್ಸವದ ಹೆಸರಲ್ಲಿ ದಲಿತರ ಹಣ ಬೇಕಾಬಿಟ್ಟಿ ಖರ್ಚು – ವಿ.ಅಂಬರೀಷ್ ಖಂಡಿನೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಜನಪರ ಉತ್ಸವದ ಹೆಸರಲ್ಲಿ ದಲಿತರ ಹಣ ಬೇಕಾಬಿಟ್ಟಿ ಖರ್ಚು – ವಿ.ಅಂಬರೀಷ್ ಖಂಡಿನೆ

ಕೋಲಾರ: ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ (ಎಸ್‌ಸಿಎಸ್ಪಿ) ಹಣವನ್ನು ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ ಬೇಕಾಬಿಟ್ಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿ ದಲಿತ ಯುವ ಜಾಗೃತಿ ಸಮಿತಿ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ನಡೆಯುತ್ತಿರುವ ಜನಪರ ಉತ್ಸವದ ವಿಚಾರಗೋಷ್ಠಿಯಲ್ಲಿ ಪೋಸ್ಟರ್ ಪ್ರದರ್ಶನದ ಮೂಲಕ ಮೌನ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ದಲಿತ ಯುವ ವೇದಿಕೆ ಮುಖಂಡ ಶೆಟ್ಟಿಗಾನಹಳ್ಳಿ ವಿ.ಅಂಬರೀಷ್ ಮಾತನಾಡಿ ದಲಿತರ ಅಭಿವೃದ್ಧಿಗೆ ಮೀಸಲಾದ ಸುಮಾರು ಒಂದು ಕೋಟಿ ಹಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಜಿಲ್ಲಾಡಳಿತವು ಮನಸ್ಸೋ ಇಚ್ಛೆ ಖರ್ಚು ಮಾಡಿದ್ದಾರೆ. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಕನಿಷ್ಠ ಅಂಬೇಡ್ಕರ್ ಅವರ ಪೋಟೋ ಹಾಕಿಲ್ಲ ಸಂಘಟನೆಗಳು ಪ್ರಶ್ನೆ ಮಾಡಿದ ನಂತರ ಮರು ಮುದ್ರಣ ಮಾಡಲಾಗಿದೆ ಜಿಲ್ಲೆಯ ಹಿರಿಯ ದಲಿತ ಸಂಘಟನೆಗಳ ನಾಯಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ದಲಿತ ಕಲಾವಿದರನ್ನು ಗುರುತಿಸಿ ಸೌಲಭ್ಯ ಒದಗಿಸಿಲ್ಲ ಆದರೆ ದಲಿತರ ಹಣ ಬೇಕಾಬಿಟ್ಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸರಿಯಾಗಿ ಪ್ರಚಾರ ಮಾಡಿಲ್ಲ ರಾಜ್ಯ ಮಟ್ಟದ ಕಾರ್ಯಕ್ರಮವಾದರೂ ನೂರು ಜನ ಭಾಗವಹಿಸಿಲ್ಲ ಉದ್ವಾಟನೆಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಬರಲಿದ್ದಾರೆ ಅಂತ ಹೇಳಿದ್ದರು ಅವರು ಯಾರು ಬಂದಿಲ್ಲ ಜೊತೆಗೆ ಜಿಲ್ಲೆಯಲ್ಲಿ ಮೀಸಲ ಕ್ಷೇತ್ರಗಳಲ್ಲಿ ಗೆದ್ದಿರುವ ಮೂವರು ಶಾಸಕರು ಇದ್ದು, ಅವರಾರು ಈ ಕಾರ್ಯಕ್ರಮಕ್ಕೆ ಬಂದಿಲ್ಲ ಕಾರ್ಯಕ್ರಮದ ಹೆಸರಲ್ಲಿ ಎರಡು ದಿನ ಕೋಲಾರ ನಗರದಲ್ಲಿ ದೀಪಾಲಂಕಾರ ಮಾಡಿದ್ದಾರೆ ಆದರೆ ಎಷ್ಟೋ ದಲಿತ ಕಾಲೋನಿಗಳಲ್ಲಿ ವಿದ್ಯುತ್‌ ದ್ವೀಪಗಳು ಇಲ್ಲ, ರಸ್ತೆ ಚರಂಡಿಯಂತಹ ಮೂಲಭೂತ ಸೌಕರ್ಯಗಳಿಲ್ಲ, ದಲಿತರು ಸತ್ತಾಗ ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಲು ಶ್ಮಶಾನ ಭೂಮಿಯಿಲ್ಲ, ಅಲ್ಲದೆ ಎಷ್ಟೋ ದಲಿತ ಕಲಾವಿದರಿಗೆ ನಿಲ್ಲಲು ಒಂದು ನೆಲೆಯಿಲ್ಲ ಈಗಿರುವಾಗ ಯಾವ ಪುರುಷಾರ್ಥಕ್ಕೆಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಪ್ರಶ್ನಿಸಿದ ಅವರು, ಇದು ಜನಪರ ಉತ್ಸವ ಅಲ್ಲ, ಕೆಲವರ ಲೂಟಿ ಉತ್ಸವ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಮುಖಂಡ ದೊಡ್ನಹಳ್ಳಿ ಸುಬ್ರಮಣಿ ಮಾತನಾಡಿ ಒಂದು ಕಡೆ ದಲಿತರ ಹಣವನ್ನು ರಾಜ್ಯದ ಗ್ಯಾರಂಟಿ ಯೋಜನೆಗಳಿಗೆ ಬಳಸಿದ್ದಾರೆ ಇನ್ನೊಂದು ಕಡೆಗೆ ದಲಿತರ ಹಣವನ್ನು ಜನಪರ ಉತ್ಸವ ಹೆಸರಲ್ಲಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಅಧಿಕಾರಿಗಳು ಹೇಳಿದ ರೀತಿಯಲ್ಲಿ ಕನಿಷ್ಠ ಹತ್ತು ಸಾವಿರ ಜನ ಬರುವ ನಿರೀಕ್ಷೆ ಅಂತ ಹೇಳಿ ಇವತ್ತು 100 ಜನ ಬಂದಿದ್ದಾರೆ ಕಾರ್ಯಕ್ರಮದ ಕುರಿತು ಸರಿಯಾಗಿ ಜನಕ್ಕೆ ಮಾಹಿತಿ ಪ್ರಚಾರ ಮಾಡದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಮುಖಂಡರಾದ ನಂಬಿಗಾನಹಳ್ಳಿ ನಾರಾಯಣಸ್ವಾಮಿ, ಬೆಟ್ಟಹೊಸಪುರ ರವಿ, ಹರೀಶ್, ಚಲಪತಿ, ಪವನ್, ನಾಗರಾಜಪ್ಪ, ವಿ.ಸುಬ್ರಮಣಿ ಮುಂತಾದವರು ಇದ್ದರು ಹತ್ತು ಸಾವಿರ ಜನ ಬರುವ ನಿರೀಕ್ಷೆ ಅಂತ ಹೇಳಿ ಇವತ್ತು 100 ಜನ ಬಂದಿದ್ದಾರೆ ಸರಿಯಾಗಿ ಜನಕ್ಕೆ ಕಾರ್ಯಕ್ರಮದ ಕುರಿತು ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ವಿಷಯಗಳು: #kannada #karnataka #peepal #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು