ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ ದಸರಾ ಉದ್ಘಾಟನೆ: ದಸರಾವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ

PPeepal Media

Peepal Media • ರಾಜ್ಯ

• 2 ನಿಮಿಷದ ಓದು

ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ ದಸರಾ ಉದ್ಘಾಟನೆ: ದಸರಾವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ

ಮೈಸೂರು, ಸೆಪ್ಟೆಂಬರ್ 27 : ಸಾಹಿತಿ ಹಂ.ಪ. ನಾಗರಾಜಯ್ಯ ನವರಿಂದ ಈ ಬಾರಿಯ ದಸರಾ ಉತ್ಸವವನ್ನು ಉದ್ಘಾಟಿಸಲಿದ್ದು, ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ನಂತರ ಪತ್ರಿಕಾ ಗೋಷ್ಠಿಯನ್ನು ನಡೆಸಿದರು.

ಅಕ್ಟೋಬರ್, 3 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗುವುದು. ಈ ಬಾರಿ ಹಂ.ಪ. ನಾಗರಾಜಯ್ಯ ನವರು ದಸರಾ ಉದ್ಘಾಟನೆ ನೆರವೇರಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ , ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ದಸರಾ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ದತೆಗಳನ್ನು ಮಾಡುತ್ತಿದ್ದಾರೆ ಎಂದರು.

ಕಾನೂನು ಲೋಪ ನಡೆಯದಂತೆ ಪೊಲೀಸರಿಗೆ ಸೂಚನೆ

ದಸರಾ ಮಹೋತ್ಸವದಲ್ಲಿ ಉತ್ತಮ ರಸ್ತೆ, ವಿದ್ಯುತ್ ಅಲಂಕಾರ ಸೇರಿದಂತೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ದಸರಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗೆ ನಾಗಮಂಗಲದ ಘಟನೆ, ಪೊಲೀಸರ ಕರ್ತವ್ಯ ಲೋಪದಿಂದ ನಡೆದಿದ್ದು, ಅನಾಹುತ ನಡೆಯುವ ಸಂಭವವಿರುತ್ತಿರಲಿಲ್ಲ. ಆ ರೀತಿಯ ಲೋಪಗಳು ದಸರಾ ಸಂದರ್ಭದಲ್ಲಿ ನಡೆಯಬಾರದೆಂದು ಸೂಚಿಸಲಾಗಿದೆ ಎಂದರು.

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

ಉತ್ತಮ ಮಳೆಯಿಂದಾಗಿ ತಮಿಳು ನಾಡಿಗೆ ಹೆಚ್ಚಿನ ನೀರು ಹರಿಸಲಾಗಿದೆ

ತಮಿಳುನಾಡಿಗೆ 177.25 ಟಿಎಂಸಿ ನೀರು ಬಿಡಬೇಕಾಗಿದೆ. ರಾಜ್ಯದಲ್ಲಿ ಉತ್ತಮ ಮಳೆಯಾದ ಕಾರಣ ತಮಿಳುನಾಡಿಗೆ ಈಗಾಗಲೇ 202 ಟಿ.ಎಂ.ಸಿ ನೀರು ಬಿಡಲಾಗಿದೆ. ಕರ್ನಾಟಕ ನಿಯಮಾನುಸಾರ ಬಿಡುವ ಪ್ರಮಾಣಕ್ಕಿಂತಲೂ ಹೆಚ್ಚಿನ ಪ್ರಮಾಣವನ್ನು ತಮಿಳುನಾಡಿಗೆ ಹರಿಸಿದೆ ಎಂದರು.

ಜಾಮೀನಿನ ಮೇಲೆ ಹೊರಗಿರುವ ಕುಮಾರಸ್ವಾಮಿ ರಾಜಿನಾಮೆ ನೀಡಲಿ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,17 ಎ ಪ್ರಕಾರ ಎಫ್ ಐ ಆರ್ ದಾಖಲು ಮಾಡಿ, ತನಿಖೆ ಮಾಡುತ್ತಾರೆ . ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಚುನಾವಣಾ ಬಾಂಡ್ ಸಂಬಂಧಿಸಿದಂತೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೆಯೂ ಎಫ್ ಐ ಆರ್ ದಾಖಲಿಸಿರುವುದಾಗಿ ತಿಳಿದುಬಂದಿದೆ. ಈ ಸಂದರ್ಭದಲ್ಲಿ ಅವರು ರಾಜಿನಾಮೆ ಕೊಡುತ್ತಾರೆಯೇ ? ಎಂದು ಪ್ರಶ್ನಿಸಿದರು.ಬಿಜೆಪಿಯವರು, ಸಿಎಂ ರಾಜಿನಾಮೆ ಕೊಡುತ್ತಾರೆ ಎನ್ನುತ್ತಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮೊದಲು ಕುಮಾರಸ್ವಾಮಿಯವರು ರಾಜಿನಾಮೆ ನೀಡಲಿ. ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿಯವರೂ ರಾಜಿನಾಮೆ ನೀಡಬೇಕಾಗುತ್ತದೆ ಎಂದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು