ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದಾವಣಗೆರೆ ಸಿಂಗಾಪುರ್‌ ಆಗಬೇಕಂತಾದರೆ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಗೆಲ್ಲಬೇಕು: ಪ್ರಭಾ ಮಲ್ಲಿಕಾರ್ಜುನ್‌

P

Peepal Media • ರಾಜ್ಯ

• 1 ನಿಮಿಷದ ಓದು

ದಾವಣಗೆರೆ ಸಿಂಗಾಪುರ್‌ ಆಗಬೇಕಂತಾದರೆ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಗೆಲ್ಲಬೇಕು: ಪ್ರಭಾ ಮಲ್ಲಿಕಾರ್ಜುನ್‌

ದಾವಣಗೆರೆ: ಮಾಜಿ ಸಚಿವ ಎಸ್.ಎಸ್.‌ ಮಲ್ಲಿಕಾರ್ಜುನ ಅವರ 55 ನೇ ಹುಟ್ಟು ಹಬ್ಬದ ಹಿನ್ನಲೆ ಅವರ ಅಭಿಮಾನಿಗಳು ಆಯೋಜಿಸಿದ್ದು ರಕ್ತದಾನ ಅಭಿಯಾನದಲ್ಲಿ ಎಸ್. ಎಸ್.‌ ಹೆಲ್ತ್‌ ಕೇರ್‌ ಟ್ರಸ್ಟ್‌ ಅಧ್ಯಕ್ಷೆ ಪ್ರಭಾ ಮಲ್ಲಿಕಾರ್ಜುನ್‌ ಅವರು ಎಸ್. ಎಸ್.‌ ಮಲ್ಲಿಕಾರ್ಜುನ್‌ ಅವರ ಕಾರ್ಯವೈಖರಿ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಎಸ್.ಎಸ್.‌ ಮಲ್ಲಿಕಾರ್ಜುನ ಅವರ ಹುಟ್ಟು ಹಬ್ಬದ ಹಿನ್ನಲೆ ಅವರ ಅಭಿಮಾನಿಗಳು ಆಯೋಜಿಸಿದ್ದು ರಕ್ತದಾನ ಅಭಿಯಾನಕ್ಕೆ ಚಾಲನೆ ನೀಡಿದ ಅವರು , ಮಲ್ಲಿಕಾರ್ಜುನ್‌ ಅವರ  ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂಬ ನಿಟ್ಟಿನಲ್ಲಿ ಆಯೋಜಿಸಿರುವ ರಕ್ತದಾನದ ಶಿಬಿರವು ಜನರ ಪ್ರೀತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು, ಹಾಗೂ ಅಭಿಮಾನಿಗಳ ಒತ್ತಾಯದ ಮೇರೆಗೆ ರಕ್ತದಾನ ಕ್ಯಾಂಪ್‌ಗಳನ್ನು ಜಿಲ್ಲೆಯಾದ್ಯಂತ ನಡೆಸಲು ತೀರ್ಮಾನಿಸಿದ್ದು, ಈ ಅಭಿಯಾನವು ಸಂಕಷ್ಟದಲ್ಲಿರುವವರಿಗೆ ರಕ್ತವನ್ನು ಉಚಿತವಾಗಿ ನೀಡುವ ಉದ್ದೇಶ ಹೊಂದಿದೆ, ಹಾಗಾಗೀ ಈ ಶಿಬಿರವು ಡಿಸೆಂಬರ್‌ 31 ರ ವರೆಗೆ ನಡೆಯಲಿದೆ ಎಂದರು.

ಮುಂದುವರೆದು ಮಾತನಾಡಿದ ಅವರು,  ಜಿಲ್ಲೆಯ ಅಭಿವೃದ್ದಿಯಲ್ಲಿ ಮಲ್ಲಿಕಾರ್ಜುನ್‌ ಮತ್ತು ಶಾಮನೂರು ಶಿವಶಂಕರಪ್ಪ ಅವರ ಕೊಡುಗೆ ಅಪಾರ. ಅದಕ್ಕೆ ಜನರು ಇಟ್ಟಿರುವ ಅಪಾರ ನಂಬಿಕೆ, ಪ್ರೀತಿ, ವಿಶ್ವಾಸವೇ ಸಾಕ್ಷೀ. ಒಂದು ವೇಳೆ ಜಿಲ್ಲೆ ಅಭಿವೃದ್ಧಿವೊಂದಿ ಸಿಂಗಾಪುರ್‌ ಅಂತಾಗಬೇಕಿದ್ದರೆ ಮಲ್ಲಿಕಾರ್ಜುನ್‌ ಗೆಲ್ಲಬೇಕು ಎಂದು ಹೇಳಿದರು.  

ಈ ಅಭಿಯಾನದಲ್ಲಿ, ಕೆಪಿಸಿಸಿ ವಕ್ತಾರ ಡಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಪಾಲಿಕೆ ಸದಸ್ಯ ಕೆ. ಚಮನ್ ಸಾಬ್, ಕಾಂಗ್ರೆಸ್ ಮುಖಂಡರಾದ ಕೆ. ಜಿ. ಶಿವಕುಮಾರ್, ಮಾಯಕೊಂಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾ ಬಾಯಿ ಮಲ್ಲೇಶ್ ನಾಯ್ಕ್, ಮೊಹಮದ್ ಜಿಕ್ರಿಯಾ, ಅಬ್ದುಲ್ ಜಬ್ಬಾರ್, ಎಸ್. ಎಸ್. ಹೈಟೆಕ್ ಹಾಗೂ ಬಾಪೂಜಿ ಸಂಸ್ಥೆಯ ಪ್ರಸಾದ್, ವೈದ್ಯರು, ಸಿಬ್ಬಂದಿ, ಎಸ್ ಎಸ್ ಹೈಟೆಕ್ ಆಸ್ಪತ್ರೆಯ ಡಾ. ಪ್ರಸಾದ್, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಕುಮಾರ್, ಜೆಜೆಎಂ ಕಾಲೇಜಿನ ಪ್ರಾಂಶುಪಾಲರಾದ ಮುರುಗೇಶ್, ಶ್ರೀಕಾಂತ್ ಬಂಗೇರಾ, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ಕೆ. ಎಲ್. ಹರೀಶ್ ಬಸಾಪುರ ಮತ್ತಿತರರು ಹಾಜರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version