ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹ 10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

P

Peepal Media • ರಾಜ್ಯ

• 1 ನಿಮಿಷದ ಓದು

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹ 10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.25: ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ತೆರಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ ಪರಿಹಾರದ ಚೆಕ್ ವಿತರಿಸಿದರು.

ಮಲ್ಲೇಶ್ವರಂನ ಬಾಲಕನ ನಿವಾಸಕ್ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಭೇಟಿ ಮಾಡಿ ಸಾಂತ್ವನ ಹೇಳಿದರು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು ಮೃತಪಟ್ಟ ಬಾಲಕನ ಮನೆಗೆ ನಮ್ಮ ಮಂತ್ರಿಗಳು ಹಾಗೂ ಶಾಸಕರು ಬಂದು ಸಾಂತ್ವನ ಹೇಳಿದ್ದರು. ನಾನು ಅವರ ಮನೆಗೆ ಬಂದು ಬಾಲಕನ ತಂದೆ ತಾಯಿ ಭೇಟಿ ಮಾಡಿದೆ. ಬಿಬಿಎಂಪಿ ವತಿಯಿಂದ 5 ಲಕ್ಷ ಹಾಗೂ ಪಕ್ಷದ ವತಿಯಿಂದ (ಬ್ಲಾಕ್ ಕಾಂಗ್ರೆಸ್) 5 ಲಕ್ಷ ಪರಿಹಾರ ಸೇರಿ ಒಟ್ಟು 10 ಲಕ್ಷದ ಚೆಕ್ ನೀಡಲಾಗಿದೆ.

ಮೃತಪಟ್ಟ ಬಾಲಕನ ನೇತ್ರವನ್ನು ಕುಟುಂಬದವರು ದಾನ ಮಾಡಿ ನಮಗೆ ಮಾದರಿಯಾಗಿದ್ದಾರೆ. ಬಡತನವಿದ್ದರೂ ಸಮಾಜ ಹಾಗೂ ದೇಶಕ್ಕೆ ಕಾಣಿಕೆ ನೀಡುವ ತೀರ್ಮಾನವನ್ನು ನಾವು ಮೆಚ್ಚಬೇಕು. ಮಗನನ್ನು ಕಳೆದುಕೊಂಡಿರುವ ನೋವನ್ನು ಭರಿಸುವ ಶಕ್ತಿ ಅವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಈ ಕುಟುಂಬದ ಜತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ. ದಿನೇಶ್ ಗುಂಡೂರಾವ್ ಅವರ ಫೌಂಡೇಶನ್ ವತಿಯಿಂದ ಮೃತ ಬಾಲಕನ ತಂಗಿಯ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು. ಮಾನವೀಯತೆ ದೃಷ್ಟಿಯಿಂದ ಈ ನೆರವು ನೀಡುತ್ತಿದ್ದೇವೆ. ಇದು ನಮ್ಮ ಧರ್ಮ.

ಬಿಬಿಎಂಪಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದ್ದು, ಬೇರೆ ಪಾರ್ಕ್ ಹಾಗೂ ಮೈದಾನಗಳ ಪರಿಸ್ಥಿತಿ ಇದೇ ರೀತಿ ಇದೆ ಎಂದು ಕೇಳಿದಾಗ, “ಈ ಪ್ರಕರಣದ ವರದಿ ಕೇಳಿದ್ದೇವೆ. ವರದಿ ಬಂದ ಬಳಿಕ ತೀರ್ಮಾನ ಮಾಡುತ್ತೇವೆ. ಬೆಂಗಳೂರಿನ ಬೇರೆ ಕಡೆಗಳಲ್ಲಿ ಗೇಟ್ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.

ಮೈಸೂರಿನ ಲೋಕಾಯುಕ್ತ ಪೊಲೀಸರಿಂದ ಸಿದ್ದರಾಮಯ್ಯ ಅವರ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿರುವ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ವಿಚಾರ ತಿಳಿದ ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version