ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಸಿದ್ದರಾಮಯ್ಯ ದೆಹಲಿ ಬೇಟಿಗೆ ಕಾರಣ ಅಸಮಾಧಾನವಲ್ಲ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಸಿದ್ದರಾಮಯ್ಯ ದೆಹಲಿ ಬೇಟಿಗೆ ಕಾರಣ ಅಸಮಾಧಾನವಲ್ಲ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ (ಸಿಡಬ್ಲ್ಯುಸಿ) ಸದಸ್ಯರಾಗಿರುವುದರಿಂದ ಅವರ ನವದೆಹಲಿ ಭೇಟಿ ಸಹಜ ಪ್ರಕ್ರಿಯೆಯಾಗಿದ್ದು, ಇದರ ಹಿಂದೆ ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯನವರಿಗೆ ಅಸಮಾಧಾನವಿದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನೇ ನೀಡುತ್ತಿರಲಿಲ್ಲ. ಹೈಕಮಾಂಡ್‌ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದ ಅವರು, ಅದರಂತೆಯೇ ನಡೆದುಕೊಂಡಿದ್ದಾರೆ. ಅದು ಮುಗಿದುಹೋದ ಅಧ್ಯಾಯವಾಗಿದ್ದು, ಮತ್ತೆ ಚರ್ಚಿಸುವುದು ಅನಗತ್ಯ. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ನಮ್ಮ ಸರ್ಕಾರಕ್ಕೆ ನೂರು ದಿನ ಪೂರೈಸಿದ್ದು, ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ ಜನಪರ ಆಡಳಿತ ನೀಡಲಿದ್ದೇವೆ,” ಎಂದರು.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಹುದ್ದೆಗೆ ಚುನಾವಣೆ ನಡೆಸದೆ ಅವಿರೋಧ ಆಯ್ಕೆ ಮಾಡಬೇಕೆಂಬ ಪಕ್ಷದ ನಿರ್ಧಾರದಂತೆ, ಅಂತಿಮವಾಗಿ ವಿಧಾನ ಪರಿಷತ್ ಸದಸ್ಯ ಎಸ್. ರವಿ ಅವರನ್ನು ಆಯ್ಕೆ ಮಾಡಲಾಗಿದೆ. ನಿರ್ಣಾಯಕ ಸಭೆಯಲ್ಲಿ ಕೆ. ಎನ್. ರಾಜಣ್ಣ ಅವರೂ ಉಪಸ್ಥಿತರಿದ್ದು, ಅವರ ಸಮ್ಮತಿಯೊಂದಿಗೆಯೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಪಕ್ಷದಲ್ಲಿ ಯಾವುದೇ ಅಸಮಾಧಾನದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.

ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗೆ ಸಂಬಂಧಿಸಿದ ಪೋಸ್ಟರ್‌ಗಳು ಕಾಣಿಸಿಕೊಂಡಿರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ನಕ್ಸಲ್ ಮುಕ್ತ ಕರ್ನಾಟಕ ಘೋಷಣೆಯ ನಂತರವೂ ಕಾರ್ಕಳದಲ್ಲಿದ್ದ ನಕ್ಸಲ್ ನಿಗ್ರಹ ದಳವನ್ನು ಸಂಪೂರ್ಣ ರದ್ದುಪಡಿಸಿಲ್ಲ; ಅರ್ಧ ಪಡೆಯನ್ನು ಕೋಮು ಗಲಭೆ ನಿಯಂತ್ರಣದ ಸ್ಪೆಷಲ್ ಆ್ಯಕ್ಷನ್ ಫೋರ್ಸ್ ಆಗಿ ಪರಿವರ್ತಿಸಲಾಗಿದ್ದು, ಉಳಿದರ್ಧ ಪಡೆ ಕಾರ್ಯಾಚರಣೆಯಲ್ಲಿದೆ. ಪಾವಗಡದಲ್ಲಿ ನಕ್ಸಲ್ ಚಟುವಟಿಕೆಗಳು ಖಚಿತಪಟ್ಟರೆ ನಕ್ಸಲ್ ನಿಗ್ರಹ ಪಡೆಯನ್ನು ತುಮಕೂರಿಗೆ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ವಸತಿ ರಹಿತರಿಗೆ ಪ್ರತಿ ಜಿಲ್ಲೆಯಲ್ಲಿ 30×40 ಅಳತೆಯ 50 ಸಾವಿರ ನಿವೇಶನಗಳನ್ನು ವಿತರಿಸುವ ಯೋಜನೆಯಡಿ ಮಾಜಿ ಯೋಧರಿಗೂ ನಿವೇಶನಗಳನ್ನು ನೀಡಲಾಗುವುದು. ಮುಂದಿನ ಎರಡು ತಿಂಗಳಲ್ಲಿ ರಾಜ್ಯಾದ್ಯಂತ ಮೊದಲ ಹಂತವಾಗಿ 5 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಪರಮೇಶ್ವರ್ ಮಾಹಿತಿ ನೀಡಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು