ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ: ಪುರುಷೋತ್ತಮ ಬಿಳಿಮಲೆ

P

Peepal Media Desk • ರಾಜ್ಯ

• 1 ನಿಮಿಷದ ಓದು

ರಾಜ್ಯದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಕೆಗೆ ನಿರ್ಧಾರ: ಪುರುಷೋತ್ತಮ ಬಿಳಿಮಲೆ

ಬೀದರ್‌: ಮುಸ್ಲಿಂ ಸಮುದಾಯದಿಂದ ಬೇಡಿಕೆ ಬಂದಿರುವುದರಿಂದ ಮದರಸಾಗಳಲ್ಲಿ ವಾರಕ್ಕೆ ಎರಡು ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ನಗರದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಾಯೋಗಿಕವಾಗಿ ರಾಜ್ಯದ ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು. ಅದರ ಸಾಧಕ–ಬಾಧಕ ನೋಡಿಕೊಂಡು ರಾಜ್ಯದ ಇತರೆ ಕಡೆಗಳಲ್ಲಿಯೂ ವಿಸ್ತರಿಸುವ ಯೋಚನೆ ಇದೆ. ಭಾಷೆಯ ಅಂತರ ದೂರ ಮಾಡುವುದು ಇದರ ಮುಖ್ಯ ಉದ್ದೇಶ. ಅಲ್ಪಸಂಖ್ಯಾತ ಮುಸ್ಲಿಮರಿಂದಲೂ ಇದಕ್ಕಾಗಿ ಬೇಡಿಕೆ ಬಂದಿತ್ತು ಎಂದರು.

ಈ ಸಂಬಂಧ ಮದರಸಾಗಳನ್ನು ನಡೆಸುತ್ತಿರುವ ಕೆಲ ವಿದ್ವಾಂಸರೊಂದಿಗೆ ಚರ್ಚಿಸಿದ್ದೇನೆ. ಯಾವ ವಿಷಯ ಕಲಿಸಬೇಕೆಂಬ ಗೊಂದಲ ಇಲ್ಲ. ಏಕೆಂದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದಲೇ ಪಠ್ಯ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.

ಶಾಲೆಗಳ ಅಭಿವೃದ್ಧಿ ಮಾಡಲಿಕ್ಕಾಗದ ಶಾಸಕರು ರಾಜಿನಾಮೆ ನೀಡಲಿ: ಪ್ರತಿಯೊಂದು ಕ್ಷೇತ್ರದ ಶಾಸಕರು ಅವರ ವ್ಯಾಪ್ತಿಯ ಕನಿಷ್ಠ ಐದು ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡಿಸಬೇಕು. ಇಲ್ಲದಿದ್ದರೆ ರಾಜಿನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಈ ಸಂಬಂಧ ಶೀಘ್ರದಲ್ಲೇ ಎಲ್ಲ ಶಾಸಕರನ್ನು ಭೇಟಿ ಮಾಡಿ, ಅವರಿಗೆ ಮನವಿ ಪತ್ರ ಸಲ್ಲಿಸಲಾಗುವುದು. ಯಾವ ಶಾಸಕರಿಗೆ ಈ ಕೆಲಸ ಮಾಡಲು ಆಗುವುದಿಲ್ಲವೋ ಅಂತಹವರು ಅವರ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಂತಹ ಶಾಸಕರನ್ನು ಮಾಧ್ಯಮದವರು ಕೂಡ ಪ್ರಶ್ನಿಸಬೇಕು ಎಂದು ಆಗ್ರಹಿಸಿದರು.

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಅವರ ಮಾತೃಭಾಷೆಯಲ್ಲಿ ಓದಿದವರಿಗೆ ಶಿಕ್ಷಣದಲ್ಲಿ ಶೇ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಅದೇ ನೀತಿ ನಮ್ಮ ರಾಜ್ಯದಲ್ಲೂ ಜಾರಿಗೆ ತರಬೇಕು. ಖಾಸಗಿ ವಲಯದ ಉದ್ಯೋಗಗಳಲ್ಲಿ ಶೇ 80ರಷ್ಟು ಉದ್ಯೋಗಗಳು ಕನ್ನಡಿಗರಿಗೆ ಮೀಸಲಿಡಬೇಕು. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್‌, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version