ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಂದಿರಾ ಕ್ಯಾಂಟೀನ್‌ ಸಿಬ್ಬಂದಿಗಳಿಗೆ ಸಂಬಳದ ವಿಳಂಬ : ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಇಂದಿರಾ ಕ್ಯಾಂಟೀನ್‌ ಸಿಬ್ಬಂದಿಗಳಿಗೆ ಸಂಬಳದ ವಿಳಂಬ : ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಮನವಿ

ಪುತ್ತೂರು: ಇಂದಿರಾ ಕ್ಯಾಂಟೀನ್‌ ಸಿಬ್ಬಂದಿಗಳಿಗೆ ಸಂಬಳದ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಕಾರ್ಮಿಕ ಘಟಕವು ಹಿರಿಯ ಕಾರ್ಮಿಕ ನಿರೀಕ್ಷಕರಾದ ಗಣಪತಿ ಹೆಗ್ಗಡೆ ಅವರಿಗೆ ಮನವಿ ಸಲ್ಲಿಸಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಬಡ ಕೂಲಿ ಕಾರ್ಮಿಕರು, ಆಟೋ ಚಾಲಕರು, ವಲಸೆಗಾರರು ಸೇರಿದಂತೆ ಸಾಕಷ್ಟು ಮಂದಿ ಇಂದಿರಾ ಕ್ಯಾಂಟೀನ್‌ನ ಸೌಲಭ್ಯವನ್ನು ಉಪಯೋಗಿಸಿಕೊಂಡು ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಮಯಕ್ಕೆ ಸರಿಯಾಗಿ ಸಂಬಳ ಕೊಡದೆ ವಿಳಂಬ ಮಾಡುತ್ತಿದ್ದು, ಇಂದಿರಾ ಕ್ಯಾಂಟೀನ್‌ನ ಕಾರ್ಯಚಟುವಟಿಕೆಗಳೂ ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಬಡ ವಿದ್ಯಾರ್ಥಿಗಳ, ಕೂಲಿ ಕಾರ್ಮಿಕರ ಹಿತ ಕಾಪಾಡದ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿ ಅವರ ಆದೇಶದ ಮೇರೆಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ, ಒಂದು ವೇಳೆ ಇದೇ ರೀತಿ ವಿಳಂಬವಾಗುತ್ತಿದ್ದರೆ ಕಾರ್ಮಿಕ ಇಲಾಖೆ ಮತ್ತು ಇಂದಿರಾ ಕ್ಯಾಂಟೀನ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಅಲ್ಲಿನ ಕಾಂಗ್ರೆಸ್‌ ಕಾರ್ಮಿಕ ಘಟಕದ ಸದಸ್ಯರು ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್‌ ಡಿಸೋಜ ಹಾಗೂ ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಕಾರ್ಮಿಕ ಘಟದ ಅಧ್ಯಕ್ಷ ಶರೋನ್‌ ಸಿಕ್ವೇರಾ, ಪುತ್ತೂರು ಬ್ಲಾಕ್‌ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಕೇಶವ್‌ ಪಡೀಲ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು