ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025: ರಾಜ್ಯಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ – ಆಯುಕ್ತ ಹೇಮಂತ ನಿಂಬಾಳ್ಕರ್

P

Peepal Media • ರಾಜ್ಯ

• 2 ನಿಮಿಷದ ಓದು

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025: ರಾಜ್ಯಕ್ಕೆ ಪ್ರಶಸ್ತಿ ಲಭಿಸುವ ವಿಶ್ವಾಸ – ಆಯುಕ್ತ ಹೇಮಂತ ನಿಂಬಾಳ್ಕರ್

ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು ಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಗಣರಾಜ್ಯೋತ್ಸವದಲ್ಲಿ ರಾಜ್ಯದಿಂದ ಭಾಗವಹಿಸಲಿರುವ ಸ್ತಬ್ಧಚಿತ್ರವು ಗದಗಿನ ಲಕ್ಕುಂಡಿಯಲ್ಲಿರುವ ಮಂದಿರಕ್ಕೆ ಹೋಲುವಂತಿರುವ ಸ್ತಬ್ಧಚಿತ್ರವನ್ನು ಅಂತರರಾಷ್ಟ್ರೀಯ ಕಲಾವಿದ ಶಶಿಧರ ಅಡಪ ವಿನ್ಯಾಸಗೊಳಿಸಿದ್ದು, ದೆಹಲಿಯ ರಾಷ್ಟ್ರೀಯ ರಂಗಶಾಲಾ ಕ್ಯಾಂಪಿನಲ್ಲಿ ಕಳೆದ ಒಂದು ತಿಂಗಳಿನಿಂದ ರಾಜ್ಯದ 50ಕ್ಕೂ ಹೆಚ್ಚು ಜನ ಕಲಾವಿದರು,ಕುಶಲ ಕರ್ಮಿಗಳು ಮೈಕೊರೆಯುವ ಚಳಿಯಲ್ಲಿ ಸ್ತಬ್ಧಚಿತ್ರವನ್ನು ನಿರ್ಮಾಣಗೊಳಿಸಿದ್ದಾರೆ.

ಜ.23 ರ ಗುರುವಾರ ನವದೆಹಲಿಯ ಕರ್ತವ್ಯ ಪಥದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ನಡೆದ ಸ್ತಬ್ಧಚಿತ್ರದ ಪೂರ್ವಾಭ್ಯಾಸದಲ್ಲಿ ರಾಜ್ಯದ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರಕ್ಕೆ ಎರಡೂ ಬದಿಯಲ್ಲಿ ನೆರೆದ ಜನಸ್ತೋಮವು ತಮ್ಮ ಹತ್ತಿರ ಸ್ತಬ್ಧಚಿತ್ರ ಬಂದಾಗ ಅದರ ವಿನ್ಯಾಸ, ಶಿಲ್ಪಕಲೆ, ಸಂಸ್ಕøತಿ, ಸಾಂಪ್ರದಾಯಿಕ ಉಡುಗೆಯೊಂದಿಗೆ ಭಾಗವಹಿಸಿದ ಕಲಾವಿದರ ದೃಶ್ಯವನ್ನು ಕಂಡ ಜನರು ಕರತಾಡನ ಮೂಲಕ ಅಭೂತಪೂರ್ವವಾಗಿ ಸ್ವಾಗತಿಸಿ ಪ್ರಶಂಸೆ ವ್ಯಕ್ತಪಡಿಸಿದರು.

ಕರ್ತವ್ಯಪಥದಲ್ಲಿ ಸೇರಿದ ಜನರಿಂದ ನಿರೀಕ್ಷೆಗೂ ಮೀರಿ ಬಂದ ಪ್ರತಿಕ್ರಿಯೆಗೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ರಾಜ್ಯದ ಸ್ತಬ್ಧಚಿತ್ರಕ್ಕೆ ಪ್ರಶಸ್ತಿ ದೊರೆಯಲಿದೆ ಎಂಬ ವಿಶ್ವಾಸವನ್ನು ಆಯುಕ್ತರಾದ ಹೇಂಮಂತ್ ನಿಂಬಾಳ್ಕರ್ ಅವರು ವ್ಯಕ್ತಪಡಿಸಿದರು.
ಕರ್ತವ್ಯ ಪಥದಲ್ಲಿ ಸಾಗಿದ ಸ್ತಬ್ದಚಿತ್ರಕ್ಕೆ ಕನ್ನಡ ಸಾಹಿತ್ಯ ಇರುವ ಶಿಲ್ಪಕಲೆಯ ತೊಟ್ಟಿಲು ನಮ್ಮ ಗದುಗಿನ ಲಕ್ಕುಂಡಿ ಎಂಬ ಹಾಡಿಗೆ ಹೆಸರಾಂತ ಕಲಾವಿದ ಪ್ರವೀಣ ಡಿ.ರಾವ್ ಅವರ ಸಂಗೀತ ಸಂಯೋಜನೆಯ ನೀನಾದಕ್ಕೆ ಗದಗ, ಬೆಂಗಳೂರು, ಮೈಸೂರು ಹಾಗೂ ಧಾರವಾಡದಿಂದ ಆಗಮಿಸಿದ ಸ್ತಬ್ಧಚಿತ್ರದ ಕಲಾವಿದರು ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿ ಹೆಚ್ಚಿನ ಮೆರಗು ತಂದಿದ್ದಲ್ಲದಲೇ ಅಲ್ಲಿ ಸೇರಿದವರನ್ನು ರೋಮಾಂಚನಗೊಳಿಸಿತು.

ಸ್ತಬ್ದಚಿತ್ರದ ಮೇಲ್ಭಾಗದಲ್ಲಿ 10 ಜನ ಕಲಾವಿದರು ಸೇರಿದಂತೆ 18 ಜನ ಕಲಾವಿದರಿದ್ದು, ಸ್ತಬ್ಧಚಿತ್ರದ ಇಕ್ಕೆಲಗಳಲ್ಲಿ ನಾಲ್ಕು ಪುರುಷ-ಮಹಿಳೆಯರು ಸಾಂಪ್ರಾದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದು, ಸ್ತಬ್ಧಚಿತ್ರಕ್ಕೆ ಇನ್ನಷ್ಟು ಮೆರಗು ತಂದಿತು.

ಕರ್ನಾಟಕದ ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿಯನ್ನು ಅದರ ಅದ್ಭುತ ಕಲ್ಲಿನ ವಾಸ್ತುಶಿಲ್ಪಕ್ಕಾಗಿ ಶಿಲ್ಪಕಲೆಯ ತೊಟ್ಟಿಲು ಎಂದು ಕರೆಯಲಾಗುತ್ತದೆ. ಇಲ್ಲಿನ ಸುಂದರವಾದ ದೇವಾಲಯಗಳು, ಮೆಟ್ಟಿಲು ಬಾವಿಗಳು ಮತ್ತು ಚಾಲುಕ್ಯ ರಾಜವಂಶದ ಶಾಸನಗಳಿಗೆ ನೆಲೆಯಾಗಿದೆ. ಸಾಂಸ್ಕೃತಿಕ ಶಕ್ತಿ ಕೇಂದ್ರವಾಗಿರುವುದರ ಜೊತೆಗೆ, ಕ್ರಿ. ಶ. 10 ರಿಂದ 12 ನೇ ಶತಮಾನದ ನಡುವೆ ಲಕ್ಕುಂಡಿ ಒಂದು ದೊಡ್ಡ ವಾಣಿಜ್ಯ ಕೇಂದ್ರವಾಗಿತ್ತು. ಈ ನಗರವು ಹಲವಾರು ರಾಜವಂಶಗಳಿಂದ ಆಳಲ್ಪಟ್ಟಿತ್ತಾದರೂ ಅವುಗಳಲ್ಲಿ ಅತ್ಯಂತ ಪ್ರಮುಖವಾದದ್ದು ಚಾಲುಕ್ಯರ ರಾಜವಂಶ.

ಲಕ್ಕುಂಡಿಯು ಪ್ರಾಚೀನಾನ್ವೇಷಕರು ಮತ್ತು ವಾಸ್ತುಶಿಲ್ಪ ಪ್ರಿಯರ ಸ್ವರ್ಗವಾಗಿದೆ. ಇದು 50 ದೇವಾಲಯಗಳನ್ನು ಹೊಂದಿದ್ದು, ಅವುಗಳಲ್ಲಿ ಹೆಚ್ಚಿನವು ಶಿವನಿಗೆ ಸಮರ್ಪಿತವಾಗಿವೆ; 101 ಮೆಟ್ಟಿಲು ಬಾವಿಗಳು (ಕಲ್ಯಾಣಿ, ಪುಷ್ಕರಣಿ); ಮತ್ತು 29 ಶಾಸನಗಳು ಇಲ್ಲಿವೆ. ಇವುಗಳು ಕಲ್ಯಾಣಿ ಚಾಲುಕ್ಯರ ಕಲೆ, ಸಂಸ್ಕೃತಿ ಮತ್ತು ವಾಸ್ತುಶಿಲ್ಪದ ಶ್ರೇಷ್ಠತೆಯ ಸಂಕೇತವಾಗಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಿರ್ವಹಿಸುತ್ತಿರುವ ವಸ್ತುಸಂಗ್ರಹಾಲಯವು ಲಕ್ಕುಂಡಿಯ ಶ್ರೀಮಂತ ಶಿಲ್ಪಕಲೆಯನ್ನು ಪ್ರದರ್ಶಿಸುತ್ತಿದೆ.

ಸ್ತಬ್ಧಚಿತ್ರದ ಮುಂಭಾಗವು ಬ್ರಹ್ಮ ಜಿನಾಲಯ ದೇವಸ್ಥಾನದ ಬ್ರಹ್ಮನ ಪ್ರತಿಮೆಯನ್ನು ಹೊಂದಿದೆ. ಇದು ಲಕ್ಕುಂಡಿಯಲ್ಲಿರುವ ಅತ್ಯಂತ ಹಳೆಯ ಜೈನ ದೇವಾಲಯವಾಗಿದ್ದು ಭಗವಾನ್ ಮಹಾವೀರನಿಗೆ ಸಮರ್ಪಿತವಾಗಿದೆ. ಅದರ ನಂತರ ಬ್ರಹ್ಮ ಜಿನಾಲಯ ದೇವಸ್ಥಾನದ ತೆರೆದ ಕಂಬದ ಮಂಟಪವಿದೆ. ಸ್ತಬ್ಧಚಿತ್ರದ ಮುಖ್ಯ ವಿಭಾಗವು ಭವ್ಯವಾದ ಮತ್ತು ಅಲಂಕೃತವಾದ ಕಾಶಿ ವಿಶ್ವೇಶ್ವರ ದೇವಸ್ಥಾನ ಮತ್ತು ಶಿವನಿಗೆ ಸಮರ್ಪಿತವಾದ ನನ್ನೇಶ್ವರ ದೇವಸ್ಥಾನವನ್ನು ಪ್ರದರ್ಶಿಸುತ್ತದೆ.

ವಿಷಯಗಳು: #karnataka #peepal #peepalmedia #politics
P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version