ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಹಿಮ್ಸ್ ಆವರಣದಲ್ಲಿ ಅಗ್ನಿ ಅವಘಡಗಳ ಸುರಕ್ಷತೆ ಬಗ್ಗೆ ಪ್ರಾತ್ಯಕ್ಷಿಕೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಹಿಮ್ಸ್ ಆವರಣದಲ್ಲಿ ಅಗ್ನಿ ಅವಘಡಗಳ ಸುರಕ್ಷತೆ ಬಗ್ಗೆ ಪ್ರಾತ್ಯಕ್ಷಿಕೆ


ಹಾಸನ: ನಗರದ ಹಾಸನ ವೈದ್ಯಕೀಯ ಮಹಾ ವಿದ್ಯಾಲಯದ ಆವರಣದಲ್ಲಿ ಅಂತರಾಷ್ಟಿçÃಯ ವಿಕೋಪ ತಗ್ಗಿಸುವ ದಿನದ ಅಂಗವಾಗಿ ಜಿಲ್ಲಾ ಪಂಚಾಯತ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಕಚೇರಿ ಹಾಗೂ ಅಗ್ನಿಶಾಮಕ ದಳದ ವತಿಯಿಂದ ಶುಕ್ರವಾರದಂದು ಅಗ್ನಿ ಅವಘಡಗಳ ಸುರಕ್ಷತೆ ಬಗ್ಗೆ ಪ್ರಾತ್ಯಕ್ಷಿಕೆ ನಡೆಯಿತು.
ಈ ವೇಳೆ ಹಾಸನದ ಅಗ್ನಿಶಾಮಕ ಠಾಣಾಧಿಕಾರಿ ಆರ್.ಕೆ. ಗೆಡ್ಡೆಗೌಡ ಮಾತನಾಡಿ, ಹಿಮ್ಸ್ ಭದ್ರತಾ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಅಗ್ನಿ ಅವಘಡಗಳಾದಾಗ ಅನುಸರಿಸಬೇಕಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಅಗ್ನಿಶಾಮಕ ದಳದ ಕರ್ತವ್ಯಗಳ ಬಗ್ಗೆ ವಿವರಿಸಿದರು. ಯಾವುದೇ ಸಂದರ್ಭದಲ್ಲಿ ಅಗ್ನಿ ಅವಘಡಗಳಾದಾಗ ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವ ಜೊತೆಗೆ ಇತರರನ್ನು ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ. ಈ ಸಂದರ್ಭದಲ್ಲಿ ತಮಗೂ ಯಾವುದೇ ರೀತಿ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸುವುದು ಬಹಳ ಅಗತ್ಯ. ಕಟ್ಟಡಗಳಲ್ಲಿ ಬೆಂಕಿ ಕಾಣಿಸಿಕೊಂಡಾಗ ಮೊದಲಿಗೆ ಅಲ್ಲಿರುವ ಬೆಂಕಿ ನಂದಿಸುವ ಸಿಲಿಂಡರ್ ಗಳನ್ನು ಬಳಸಿಕೊಂಡು ಬೆಂಕಿ ಹಾರಿಸುವ ಕೆಲಸ ಮಾಡಬೇಕು, ಬೆಂಕಿ ನಂದಿಸುವ ಸಿಲಿಂಡರ್ ಗಳಲ್ಲಿ ವಿವಿಧ ಮಾದರಿಯ ಸಿಲಿಂಡರ್ ಗಳು ಇವೆ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದು ಅಗತ್ಯ ಎಂದರು. ಸಣ್ಣ ಮಟ್ಟದ ಅಗ್ನಿ ಅವಘಡಗಳಾದಾಗ ಸಿಲಿಂಡರ್ ಬಳಕೆ ಮಾಡಬೇಕು ಆದರೆ ಅರಣ್ಯ ಪ್ರದೇಶ ಸೇರಿದಂತೆ ಇನ್ನಿತರ ದೊಡ್ಡ ಪ್ರಮಾಣದಲ್ಲಿ ಅಗ್ನಿ ಅವಘಡಗಳಾದಾಗ ತಕ್ಷಣ ಅಗ್ನಿಶಾಮಕ ಠಾಣೆಗೆ ಕರೆ ಮಾಡಬೇಕು. ತಾವಾಗಿಯೇ ಮುಂದೆ ಹೋಗಿ ಬೆಂಕಿ ನಂದಿಸಲು ಮುಂದಾಗಬಾರದು. ತುರ್ತು ಸಂಖ್ಯೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿದಿರಬೇಕು ಹಾಗಿದ್ದಾಗ ಮಾತ್ರ ಅವಗಡಗಳ ಸಂದರ್ಭದಲ್ಲಿ ಅವುಗಳನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ನೀರಿನಲ್ಲಿ ಯಾರಾದರೂ ಮುಳುಗಿದಾಗ ಅಥವಾ ಇನ್ನಿತರ ಅವಗಡಗಳಾದಾಗಲೂ ಅಗ್ನಿಶಾಮಕ ಠಾಣೆಗೆ ಕರೆ ಮಾಡಬೇಕು. ತಾವಾಗಿ ಇತರರನ್ನು ರಕ್ಷಣೆ ಮಾಡುವಾಗ ಮುಂಜಾಗ್ರತ ಕ್ರಮಗಳ ಅಗತ್ಯ ವಿದೆ. ಇನ್ನೊಬ್ಬರನ್ನು ರಕ್ಷಣೆ ಮಾಡುವ ಬರದಲ್ಲಿ ತಮ್ಮ ಜೀವಕ್ಕೆ ಆಪತ್ತು ಉಂಟಾಗಬಹುದು ಆದುದರಿಂದ ಬಹಳ ಎಚ್ಚರಿಕೆಯಿಂದ ಸಹಾಯ ಮಾಡಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಹಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದ ಬೆಂಕಿ ನಂದಿಸುವ ಪ್ರಾತ್ಯಕ್ಷಿಕೆ ಹೇಗೆ ಸುರಕ್ಷತೆಯಿಂದ ಇರಬೇಕು ಎನ್ನುವುದರ ಬಗ್ಗೆ ನೋಡುಗರ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಹಾಗೂ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಎಚ್‌ಎಸ್. ನಾಗಪ್ಪ, ಕೀಲು ಮತ್ತು ಮೂಳೆ ತಜ್ಞ ಡಾ.ಕ ಕಿರಣ್, ಡಾ. ಮಧು, ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಮುರುಳಿಧರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಷಯಗಳು: #karnataka #news #peepal #peepalmedia #Safty
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು