ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಪಿಂಚಣಿ, ನಿವೃತ್ತಿ ಭತ್ಯೆ ನಿರಾಕರಣೆ – ಸಂಸ್ಕೃತ ವಿವಿಗೆ ಹೈಕೋರ್ಟ್‌ ನೋಟಿಸ್‌

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಪಿಂಚಣಿ, ನಿವೃತ್ತಿ ಭತ್ಯೆ ನಿರಾಕರಣೆ – ಸಂಸ್ಕೃತ ವಿವಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನಿವೃತ್ತಿ ಬಳಿಕ ಪಿಂಚಣಿ (Pension) ಹಾಗೂ ಇತರ ನಿವೃತ್ತಿ (Retirement) ಭತ್ಯೆಗಳನ್ನು (Allowance) ನಿರಾಕರಿಸಿದ್ದ ಕ್ರಮ ಪ್ರಶ್ನಿಸಿ ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಕೆಲ ನಿವೃತ್ತ ನೌಕರರು ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಹಾಗೂ ಸಂಸ್ಕೃತ ವಿಶ್ವ ವಿದ್ಯಾಲಯಕ್ಕೆ ಕರ್ನಾಟಕ ಹೈಕೋರ್ಟ್ (Karnataka High Court) ನೋಟಿಸ್ (Notice) ಜಾರಿಗೊಳಿಸಿದೆ. ಆ ಮೂಲಕ ನಿವೃತ್ತ ನೌಕರರ ಬೆನ್ನಿಗೆ ನಿಂತಿದೆ.

20 ವರ್ಷಕ್ಕೂ ಕಾಲ ಸೇವೆ

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಬರೋಬ್ಬರಿ 20 ವರ್ಷಕ್ಕೂ ಕಾಲ ಸೇವೆ ಸಲ್ಲಿಸಿರುವ ಎಸ್ ನಾರಾಯಣ ಸೇರಿ ಐವರು ನಿವೃತ್ತ ನೌಕರರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಚ್ ಟಿ ನರೇಂದ್ರ ಪ್ರಸಾದ್ ಇದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ನಾರಾಯಣ ಸೇರಿ ಐವರು ನಿವೃತ್ತ ನೌಕರರು ಸಲ್ಲಿಸಿರುವ ಅರ್ಜಿ ವಿಚಾರಣೆ ಆಲಿಸಿದ ಪೀಠವು, ಪ್ರತಿವಾದಿಗಳಾದ ರಾಜ್ಯ ಉನ್ನತ ಶಿಕ್ಷಣ ಇಲಾಖೆ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ರಾಜ್ಯ ಆರ್ಥಿಕ ಇಲಾಖೆಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಮುಂದೂಡಿತು.

ಸಂಸ್ಕೃತ ವಿವಿ ನಿರಾಕರಣೆ ?

ಮೇಲುಕೋಟೆಯಲ್ಲಿ ಇರುವ ಸಂಸ್ಕೃತ ಸಂಶೋಧನಾ ಅಕಾಡೆಮಿಯಲ್ಲಿ 1979 ರಿಂದ 1992ರ ಅವಧಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಕೊಂಡಿದ್ದ ಅರ್ಜಿದಾರರೆಲ್ಲರೂ 2013ರಿಂದ 2017ರ ಅವಧಿಯಲ್ಲಿ ಸೇವೆಯಿಂದ ನಿವೃತ್ತಿ ಹೊಂದಿದ್ದಾರೆ. ಬರೋಬ್ಬರಿ ಎರಡು ದಶಕಗಳಿಗೂ ಅಧಿಕ ಅವಧಿಯವರೆಗೆ ಸೇವೆ ಸಲ್ಲಿಸಿದ್ದರೂ ಕೂಡ ಅರ್ಜಿದಾರರಿಗೆ ಪಿಂಚಣಿ ಇನ್ನಿತರ ನಿವೃತ್ತಿ ಭತ್ಯೆಗಳನ್ನು ಸಂಸ್ಕೃತ ವಿವಿ ನಿರಾಕರಿಸಿದೆಯಂತೆ. ಗುತ್ತಿಗೆ ಆಧಾರದಲ್ಲಿ ನೇಮಕೊಂಡಿದ್ದರೂ 2007ರ ಏಪ್ರಿಲ್ 1ರಿಂದ ಸರ್ಕಾರ ಸಾಮಾನ್ಯ ವೇತನ ಶ್ರೇಣಿಯನ್ನು ಅರ್ಜಿದಾರರಿಗೂ ವಿಸ್ತರಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಅರ್ಜಿದಾರರಿಗೆ ಅವರ ಸೇವಾ ಅಧಿಯಲ್ಲಿ ವೇತನವನ್ನಷ್ಟೇ ಪಾವತಿ ಮಾಡಲಾಗಿದೆ. ಅರ್ಜಿದಾರರು 2006ರ ಏಪ್ರಿಲ್ 1ಕ್ಕೂ ಮೊದಲೇ ನೇಮಕಗೊಂಡಿದ್ದು, ಈ ದಿನಾಂಕಕ್ಕೂ ಮುನ್ನ ಸರ್ಕಾರಿ ಅನುದಾನಿತ ಸಂಸ್ಥೆಗಳಿಗೆ ನೇಮಕಗೊಳ್ಳುವ ನೌಕರರು ಹಳೇ ಪಿಂಚಣಿ ಯೋಜನೆ (ಒಪಿಎಸ್) ಅಡಿಯಲ್ಲಿ ಪಿಂಚಣಿ ಹಾಗೂ ನಿವೃತ್ತಿ ಭತ್ಯೆಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಮೇಲುಕೋಟೆಯ ಸಂಸ್ಕೃತ ಸಂಶೋಧನಾ ಅಕಾಡೆಮಿಗೆ 2015ರ ಮಾರ್ಚ್ 25ರಿಂದ 6ನೇ ವೇತನ ಆಯೋಗದ ಲಾಭಗಳನ್ನು ನೀಡಲಾಗಿದೆ. ಆದರೆ, ಅರ್ಜಿದಾರರಿಗೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಸಂಬಂಧ ಅರ್ಜಿದಾರರ ಮನವಿ ಪರಿಗಣಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಮಾನವ ಹಕ್ಕುಗಳ ಆಯೋಗ ಹಾಗೂ ಹೈಕೋರ್ಟ್ ಸಹ ಆದೇಶ ನೀಡಿವೆಯಾದರೂ, ಅರ್ಜಿದಾರರ ಮನವಿಗಳನ್ನು ಸರ್ಕಾರ ತಿರಸ್ಕರಿಸಿದೆ.

ಇದೇ ಕಾರಣಕ್ಕೆ, ಅರ್ಜಿದಾರರು ನಿವೃತ್ತಿ ಹೊಂದಿದ ದಿನಾಂಕದಿಂದ ಅನ್ವಯವಾಗುವಂತೆ ಪಿಂಚಣಿ ಹಾಗೂ ಇತರ ನಿವೃತ್ತಿ ಭತ್ಯೆಗಳನ್ನು ಪಾವತಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ವಾದ ಆಲಿಸಿದ ಹೈಕೋರ್ಟ್, ರಾಜ್ಯ ಸರ್ಕಾರ, ಸಂಸ್ಕೃತ ವಿಶ್ವ ವಿದ್ಯಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು