ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಸವಾದಿ ಶರಣರಿಗೂ ಮಾರ್ಗದರ್ಶಕರು ದೇವರ ದಾಸಿಮಯ್ಯ – ನಗರ ಸಭೆಯ ಅಧ್ಯಕ್ಷರಾದ ಚಂದ್ರೇಗೌಡ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಬಸವಾದಿ ಶರಣರಿಗೂ ಮಾರ್ಗದರ್ಶಕರು ದೇವರ ದಾಸಿಮಯ್ಯ – ನಗರ ಸಭೆಯ ಅಧ್ಯಕ್ಷರಾದ ಚಂದ್ರೇಗೌಡ

ಹಾಸನ : ದೇವರ ದಾಸಿಮಯ್ಯ ಅವರು ಕೇವಲ ಒಂದು ಜಾತಿ ಧರ್ಮಕ್ಕೆ ಸೀಮಿತವಾಗದೆ ಸಮಸ್ತ ಕುಲ ಕೋಟಿಗೆ ಸೇರಿದವರಾಗಿದ್ದಾರೆ, ಇವರು ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಪಾರವಾದದ್ದು ಎಂದು ನಗರ ಸಭೆಯ ಅಧ್ಯಕ್ಷರಾದ ಚಂದ್ರೇಗೌಡ ಅವರು ತಿಳಿಸಿದ್ದಾರೆ.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಗರದ ಆರ್.ಸಿ ರಸ್ತೆಯಲ್ಲಿ ದೇವರ ದಾಸಿಮಯ್ಯ ಅವರ ಸರ್ಕಲ್ ನಿರ್ಮಿಸಿರುವುದು ಎಲ್ಲರಿಗೂ ಸಂತಸದ ವಿಷಯವಾಗಿದೆ. ಕ್ರಿಯೆ ಜ್ಞಾನದಿಂದ ಉತ್ತಮ ಮನುಷ್ಯರಾಗಬಲ್ಲಿರಿ ಎಂದು ದೇವರ ದಾಸಿಮಯ್ಯ ಅವರು ಹೇಳಿದ್ದಾರೆ. ಇವರು ದೇವರಿಗೆ ಪ್ರಶ್ನೆ ಮಾಡಿದ ಮಹಾನ್ ಮೇಧಾವಿ ಆಗಿದ್ದಾರೆ ಎಂದರು.

ಸಾಹಿತಿಗಳಾದ ಗೊರೂರು ಅನಂತರಾಜು ಅವರು ಮಾತನಾಡಿ ನೇಯ್ಗೆ ಕಾಯಕದ ಅವತಾರ ಪುರುಷ ದೇವರ ದಾಸಿಮಯ್ಯ ಅವರಾಗಿದ್ದಾರೆ, ಇವರು ಬಸವಾದಿ ಶರಣರಿಗೂ ಮಾರ್ಗದರ್ಶಕರಾಗಿದ್ದವರು, ನೇಯ್ಗೆ ವೃತ್ತಿಯಿಂದ ಕಾಯಕಕ್ಕೆ ಬುನಾದಿ ಹಾಕಿದವರು, ವಚನ ಸಾಹಿತ್ಯಕ್ಕೆ ಪೀಠಿಕೆ ಬರೆದು ಮುನ್ನುಡಿ ಹಾಕಿದವರು ದೇವರ ದಾಸಿಮಯ್ಯ, ಶರಣರ ತತ್ವಗಳನ್ನು ಪ್ರಚಾರ ಮಾಡಿದವರಾಗಿದ್ದಾರೆ. ಬಸವಣ್ಣನವರು ಕೂಡ ಇವರ ಕುರಿತು ವಚನಗಳಲ್ಲಿ ಹಾಡಿ ಹೊಗಳಿದ್ದಾರೆ ಎಂದು ದೇವರ ದಾಸಿಮಯ್ಯ ಅವರ ಕುರಿತು ಸವಿವರವಾಗಿ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹೆಚ್.ಪಿ ತಾರಾನಾಥ್, ತಹಶೀಲ್ದಾರರಾದ ಮೋಹನ್ ಕುಮಾರ್, ಹಾಸನ ನೌಕರ ಸಂಘದ ಗೌವಾಧ್ಯಕ್ಷರಾದ ಈ.ಕೃಷ್ಣೇಗೌಡ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ವಿಷಯಗಳು: #karnataka #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು