ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಷ್ಟೊಂದು ಜನ ಬರುತ್ತಾರೆಂದು ಊಹಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

P

Peepal Media • ರಾಜ್ಯ

• 1 ನಿಮಿಷದ ಓದು

ಇಷ್ಟೊಂದು ಜನ ಬರುತ್ತಾರೆಂದು ಊಹಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂನ್ 5, 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಮೃತಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಾಮರ್ಶಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕಾಲ್ತುಳಿತ ಘಟನೆಯು ದುರದೃಷ್ಟಕರ ಎಂದು ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ತಮ್ಮ ಸಂತಾಪವನ್ನು ಸೂಚಿಸಿದ ಸಿಎಂ, ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ. ತನಿಖಾ ಆಯೋಗಕ್ಕೆ 15 ದಿನಗಳ ಗಡುವು ನೀಡಲಾಗಿದೆ ಎಂದು ಅವರು ಹೇಳಿದರು.

ವಿಜಯೋತ್ಸವಕ್ಕೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ ಎಂದು ಊಹಿಸಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕ್ರೀಡಾಂಗಣದಲ್ಲಿ ಕುಳಿತುಕೊಳ್ಳಬಹುದಾದಷ್ಟು ಅಥವಾ ಸ್ವಲ್ಪ ಹೆಚ್ಚು ಜನ ಮಾತ್ರ ಬರುತ್ತಾರೆ ಎಂದು ಭಾವಿಸಿದ್ದೆವು ಎಂದು ಅವರು ತಿಳಿಸಿದರು. ಆದರೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದಾರೆ ಎಂದು ಹೇಳಿದರು. ಕ್ರೀಡಾಂಗಣದ ಸಾಮರ್ಥ್ಯ 35 ಸಾವಿರ ಇದ್ದರೆ, 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಬಂದಿದ್ದಾರೆ ಎಂದು ಅವರು ವಿವರಿಸಿದರು.

ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ ಉಚಿತ ವೈದ್ಯಕೀಯ ಸೇವೆ ಒದಗಿಸುವುದಾಗಿ ಭರವಸೆ ನೀಡಿದರು. ಮೃತರಲ್ಲಿ ಹೆಚ್ಚಿನವರು ಯುವಕರು ಎಂದು ಅವರು ತಿಳಿಸಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version