ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ದಸರಾ ಹಬ್ಬದ ಸಮಯದಲ್ಲಿಯೂ ಬಸ್ ಬಸ್ ದರ ಏರಿಕೆ‌ ಮಾಡಿದ ಸರ್ಕಾರ ?

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ದಸರಾ ಹಬ್ಬದ ಸಮಯದಲ್ಲಿಯೂ ಬಸ್ ಬಸ್ ದರ ಏರಿಕೆ‌ ಮಾಡಿದ ಸರ್ಕಾರ ?

ಬೆಂಗಳೂರು : ದಸರಾ (Mysore Dasara 2025) ಸಮಯದಲ್ಲಿ ಜನರಿಗೆ ಗುಡ್‌ನ್ಯೂಸ್‌ ಕೊಡಬೇಕಿದ್ದ ಸರ್ಕಾರ ದರ ಏರಿಕೆ (Price Hike) ಮೂಲಕ ಶಾಕ್‌ ಕೊಟ್ಟಿದೆ. ಹೌದು, ದಸರಾ ಹಿನ್ನೆಲೆಯಲ್ಲಿ ಟಿಕೆಟ್‌ ದರವನ್ನ ಏರಿಕೆ ಮಾಡಲಾಗಿದೆ.

20 ರೂಪಾಯಿ ಏರಿಕೆ
ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಉಚಿತ ಭಾಗ್ಯಗಳನ್ನ ಕೊಟ್ಟಿದ್ದ ಸರ್ಕಾರ ಈಗ ಜನರಿಗೆ ಬೆಲೆ ಏರಿಕೆಗಳ ಮೂಲಕ ಬರೆ ಎಳೆಯುತ್ತಿದೆ. ಈಗ ದಸರಾ ಸಮಯದಲ್ಲಿ ಬಸ್‌ಗಳ ಟಿಕೆಟ್‌ ದರವನ್ನ ಕಡಿಮೆ ಮಾಡುವ ಮೂಲಕ ಜನರಿಗೆ ಹಬ್ಬದ ಖುಷಿ ಕೊಡುವ ಬದಲಾಗಿ ಮೈಸೂರು ಮಾರ್ಗದ ಬಸ್‌ಗಳ ಟೆಕೆಟ್‌ ಬೆಲೆಯನ್ನ ಜಾಸ್ತಿ ಮಾಡಿದೆ. ರಾಜ್ಯ ಸರ್ಕಾರ ಈಗ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್ ದರವನ್ನ ಬರೋಬ್ಬರಿ 20 ರೂ. ಏರಿಕೆ ಮಾಡಿದ್ದು , ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ಮಾರ್ಗದಲ್ಲಿ ಓಡಾಡುವ ಕೆಎಸ್ ಆರ್‌ಟಿಸಿ ಬಸ್ ದರವನ್ನ ಹೆಚ್ಚು ಮಾಡಿದೆ. ಇದರಿಂದ ಮೈಸೂರು ದಸರಾ ನೋಡಲು ಹೋಗುವ ಪ್ರಯಾಣಿಕರಿಗೆ ಸಮಸ್ಯೆ ಆಗಲಿದೆ. ಕೆಂಪು ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಇದೆ. ಆದರೆ ಪುರುಷ ಪ್ರಯಾಣಿಕರಿಗೆ ಈ ಬೆಲೆ ಏರಿಕೆ ಬಿಸಿ ತಾಗಲಿದೆ. ಇದರಿಂದಾಗಿ ಮೈಸೂರಿಗೆ ಬಸ್‌ ಮೂಲಕ ಹೋಗುವ ಪ್ರಯಾಣಿಕರ ಸಂಖ್ಯೆ ಸಹ ಕಡಿಮೆ ಆಗುವ ಸಾಧ್ಯತೆ ಇದೆ. ಕೆಎಸ್‌ಆರ್‌ಟಿಸಿಯ ರಾಜಹಂಸ,  ವೇಗದೂತ, ಎಕ್ಸ್‌ಪ್ರೆಸ್‌, ಐರಾವತ ಸೇರಿದಂತೆ ಎಲ್ಲಾ ಬಸ್‌ಗಳ ಬೆಲೆ ಏರಿಕೆಯನ್ನ ಮಾಡಲಾಗಿದ್ದು, ದಸರಾ ಮುಗಿಯುವ ತನಕ ಇದೇ ಬೆಲೆ ಇರಲಿದೆ.

ಬೆಲೆ ಏರಿಕೆ ಎಷ್ಟಾಗಿದೆ?
ಐರಾವತ ಕ್ಲಬ್ ಕ್ಲಾಸ್ ಬಸ್‌ಗೆ 440 ರೂ ಇದ್ದ ದರ  460 ರೂಗೆ ಏರಿಕೆ ಆಗಿದೆ. ಹಾಗೆಯೇ, ತಡೆ ರಹಿತ ಸಾರಿಗೆ – 210 ರಿಂದ 240 ರೂ. ಐರಾವತ – 430 ರಿಂದ 450 ರೂ. ಕರ್ನಾಟಕ ಸಾರಿಗೆ ವೇಗದೂತ – 170 ರೂ. ನಿಂದ 190 ರೂ.ಗೆ ಮತ್ತು ರಾಜಾಹಂಸ – 270 ರಿಂದ 290 ರೂ ಏರಿಕೆ ಆಗಿದೆ.

ದಸರಾ ನಿಮಿತ್ತ 2,300 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ್ದ ಸರ್ಕಾರ
ದಸರಾ ಹಿನ್ನೆಯಲ್ಲಿ ಕೆ.ಎಸ್.ಆರ್.ಟಿ.ಸಿ ವತಿಯಿಂದ ಸುಮಾರು 2,300ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು.  ಸೆಪ್ಟೆಂಬರ್ 26,27 ಮತ್ತು 30 ರಂದು ರಾಜಧಾನಿ ಬೆಂಗಳೂರಿನಿಂದ ರಾಜ್ಯ & ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2300ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಆರಂಭ ಮಾಡಿದೆ.

ಬೆಂಗಳೂರಿನಿಂದ ಮೈಸೂರಿಗೆ 260 ಹೆಚ್ಚುವರಿ ಬಸ್ ಗಳು ತೆರಳಲಿದ್ದು, ಮೈಸೂರಿನ ಸುತ್ತಮುತ್ತಪ್ರವಾಸಿ ತಾಣಗಳಿಗೆ ಹೆಚ್ಚುವರಿ 350 ಬಸ್ ಗಳ ವ್ಯವಸ್ಥೆ ಇರಲಿದೆ. ಹೀಗಾಗಿ ಒಟ್ಟಾರೆ 610 ದಸರಾ ವಿಶೇಷ ವಾಹನಗಳನ್ನು ರಸ್ತೆಗಿಳಿದಿದೆ. ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ, ಎಂಬ ಹೆಸರುಗಳಲ್ಲಿ ವಿಶೇಷ ವಾಹನಗಳು ಸಂಚರಿಸುತ್ತಿದ್ದು, ಮೈಸೂರು- ಚಾಮರಾಜನಗರ- ಮಂಡ್ಯದ ಪ್ರವಾಸಿ ತಾಣಗಳಿಗೆ ತೆರಳುವ ಪ್ರಯಾಣಿಕರಿಗೆ ವಿಶೇಷ ವ್ಯವಸ್ಥೆ ಕಲ್ಪಿಸಿದೆ.

ಇದರ ಜೊತೆಗೆ ಪ್ರಯಾಣಿಕರಿಗೆ ಮಾಹಿತಿ ಕೇಂದ್ರ ಸೇರಿದಂತೆ ಹತ್ತು ಹಲವು ವ್ಯವಸ್ಥೆಗಳನ್ನು ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿ ಮತ್ತು ಇ-ಟಿಕೇಟ್ ಬುಕಿಂಗ್‌ ಗಾಗಿ www.ksrtc.karnataka.gov.in ವೆಬ್ ಸೈಟ್ ನಲ್ಲಿ ಪರಿಶೀಲಿಸಬೇಕಾಗಿ ಸಾರಿಗೆ ಇಲಾಖೆ ತಿಳಿಸಿದೆ.

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು