ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳಗುರುನಾನಕ್ ಜಯಂತಿ: ಪಾಕಿಸ್ತಾನದ ನಂಕಾನಾ ಸಾಹಿಬ್‌ನಲ್ಲಿ ಸಾವಿರಾರು ಭಾರತೀಯ ಸಿಖ್ ಭಕ್ತರ ಸಂಗಮಯುಎಇಯಲ್ಲಿ ಭೀಕರ ರಸ್ತೆ ಅಪಘಾತ: ಭಾರತೀಯರೂ ಸೇರಿ 13 ಮಂದಿ ಸಾವುಭಾವಪುಂಜ : ಮಾತೆಂಬುದು ಜ್ಯೋತಿರ್ಲಿಂಗತಿರುಪ್ಪರಂಕುಂದ್ರಂ ಬೆಟ್ಟದ ದೀಪ ವಿವಾದ: ಸುಪ್ರೀಂ ಕೋರ್ಟ್ ಆದೇಶ, ತಮಿಳುನಾಡು ಸರ್ಕಾರದ ವಿರೋಧ; ಧರ್ಮ ಮತ್ತು ಸಂವಿಧಾನದ ನಡುವೆ ಸಂಘರ್ಷರಸ್ತೆ ಅಪಘಾತಗಳ ನಿಯಂತ್ರಣಕ್ಕೆ ಎ.ಐ (AI) ತಂತ್ರಜ್ಞಾನದ ಬಲ – ಸಿಎಸ್ ಡಾ. ಶಾಲಿನಿ ರಜನೀಶ್ಜಿಲ್ಲಾಧಿಕಾರಿ ವಿರುದ್ಧದ ಆರೋಪ – ಪೊಲೀಸ್ ನೋಟಿಸ್‌ಗೆ ಡೋಂಟ್‌ ಕೇರ್ ಎಂದ ಕುಮಾರಸ್ವಾಮಿಬಾಂಗ್ಲಾದೇಶಕ್ಕೆ ಶೇಖ್ ಹಸೀನಾ: ಭಾರತದಿಂದ ವಾಪಸ್; ರಾಷ್ಟ್ರೀಯ ವಿಮಾನವೇ ಬೇಕೆಂಬ ಬೇಡಿಕೆ; ಬಂಧನಕ್ಕೆ ಸಿದ್ಧವಾಗಿರುವ ಸರ್ಕಾರ!ರಾಜಧಾನಿಯಲ್ಲಿ ಕುಡಿದು ವಾಹನ ಚಾಲನೆ – ಒಂದೇ ವಾರದಲ್ಲಿ 744 ಕೇಸ್‌28 ಎಸೆತಗಳಲ್ಲಿ ಶತಕ, 15ನೇ ವಯಸ್ಸಿನಲ್ಲೇ ವಿಶ್ವದಾಖಲೆ: ವೈಭವ್ ಸೂರ್ಯವಂಶಿ ಎಂಬ ಕ್ರಿಕೆಟ್ ವಿಸ್ಮಯ!ಆಶಾ ಕಾರ್ಯಕರ್ತೆಯರ ಬೇಡಿಕೆ ಇಡೇರಿಸಿ ಇಲ್ಲವಾದರೆ ಕರ್ನಾಟಕ ಬಂದ್​​​ – ವಾಟಾಳ್‌ ನಾಗರಾಜ್‌ನ.26ರಂದು ಸಂಯುಕ್ತ ಕಿಸಾನ್ ಮೋರ್ಚಾದಿಂದ ದೇಶವ್ಯಾಪಿ ಪ್ರತಿಭಟನೆ; ಮುಕ್ತ ವ್ಯಾಪಾರ ಒಪ್ಪಂದ ರದ್ದತಿಗೆ ಆಗ್ರಹಇಸ್ರೇಲ್ ದೇಶದಿಂದ ಶಸ್ತ್ರಾಸ್ತ್ರ ಖರೀದಿಗೆ ರಾಹುಲ್ ಗಾಂಧಿ ಬೆಂಬಲ: ಎಡಪಕ್ಷಗಳ ನಾಯಕರಿಂದ ಟೀಕೆಅಪ್ಪನನ್ನು ಕೊಲ್ಲಲೆಂದೇ ಸೆಕ್ಯುರಿಟಿ ತೆಗೆದುಹಾಕಲಾಗಿತ್ತು: ಅಂದಿನ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರೋಪಪಾಲಕ್ಕಾಡ್ ಶಾಲೆಯಲ್ಲಿ ಸಹಪಾಠಿಯಿಂದ ಗುಂಡಿನ ದಾಳಿ: 9ನೇ ತರಗತಿ ವಿದ್ಯಾರ್ಥಿಗೆ ಗಾಯ; ವಿದ್ಯಾರ್ಥಿ ವಶಕ್ಕೆಎರಡು ಮಕ್ಕಳಿರುವ ಹೆಂಗಸನ್ನು ಮದುವೆಯಾಗುವುದಾಗಿ ಹಟ ಹಿಡಿದ ಮಗನನ್ನು ಕೊಂದು ಮುಗಿಸಿದ ತಾಯಿಬೆಂಗಳೂರಿನ ಇತಿಹಾಸ, ಕಲೆ, ಸಾಹಿತ್ಯಕ್ಕೆ ಹೊಸ ವೇದಿಕೆ: ಡಿಸೆಂಬರ್ 4ರಿಂದ 10 ದಿನಗಳ ಬೆಂಗಳೂರು ಜಾತ್ರೆಕೆಪಿಎಸ್‌ಸಿ ನೇಮಕಾತಿ ಹಗರಣ: 384 ಕೆಎಎಸ್ ಅಧಿಕಾರಿಗಳ ಆಯ್ಕೆಯ ಮೇಲೂ ಅನುಮಾನದ ನೆರಳು; ತನಿಖೆಗೆ ಹೈಕೋರ್ಟ್ ಆದೇಶಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್ ಭರವಸೆಹಿಜಾಬ್ ನಿಯಮಕ್ಕೆ ಸೆಡ್ಡು ಹೊಡೆದ ಗಾಯಕಿಗೆ 74 ಚಡಿಯೇಟು; ಇರಾನ್‌ನಲ್ಲಿ ಕಠಿಣ ಶಿಕ್ಷೆ

ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಬೆಂಗಳೂರಿನಲ್ಲಿ ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ; ಭದ್ರತೆ ಹೆಚ್ಚಳ

ಬೆಂಗಳೂರು: ಪಂಜಾಬಿ ಗಾಯಕ ಹಾಗೂ ನಟ ದಿಲ್ಜಿತ್ ದೋಸಾಂಜ್ ಅವರ ಬೆಂಗಳೂರಿನಲ್ಲಿ ನಡೆಯಲಿರುವ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ದಾಳಿ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ.

ದಿಲ್ಜಿತ್ ಅವರ ‘ಆರಾ’ (AURA) ಭಾರತ ಪ್ರವಾಸದ ಭಾಗವಾಗಿ ನವೆಂಬರ್ 29ರಂದು ಬೆಂಗಳೂರಿನ ಮಾದಾವರದಲ್ಲಿರುವ NICE ಗ್ರೌಂಡ್ಸ್‌ನಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದ ವೇಳೆ ಸುಧಾರಿತ ಸ್ಫೋಟಕ ಸಾಧನ (IED) ಬಳಸಿ ಸ್ಫೋಟ ನಡೆಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ನವೆಂಬರ್ 9ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಈ ಬೆದರಿಕೆ ಸಂದೇಶ ರವಾನೆಯಾಗಿತ್ತು. ಬಳಿಕ ಈ ಮಾಹಿತಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೂ ತಲುಪಿದೆ. ಸಂದೇಶದಲ್ಲಿ ಖಲಿಸ್ತಾನ್ ಪರ ಘೋಷಣೆಯನ್ನೂ ಉಲ್ಲೇಖಿಸಲಾಗಿದ್ದು, ಸಂಗೀತ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರಬಾರದು, ಅನಾಥವಾಗಿ ಬಿದ್ದಿರುವ ಐಫೋನ್‌ಗಳನ್ನು ಮುಟ್ಟಬಾರದು ಹಾಗೂ ಮೆಟ್ರೋ ರೈಲುಗಳಲ್ಲಿ ಪ್ರಯಾಣಿಸಬಾರದು ಎಂಬ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ.

ಅಲ್ಲದೆ, ಮಾದಾವರ ಮೆಟ್ರೋ ನಿಲ್ದಾಣದಲ್ಲಿಯೂ ಸ್ಫೋಟ ನಡೆಸುವುದಾಗಿ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಕ್ರಮದ ಆಯೋಜಕರನ್ನು ಸಂಪರ್ಕಿಸಿ ಸ್ಥಳ ಹಾಗೂ ಕಾರ್ಯಕ್ರಮದ ದಿನಾಂಕವನ್ನು ಖಚಿತಪಡಿಸಿಕೊಂಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(4) ಮತ್ತು 353(1)(ಬಿ) ಅಡಿಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೈಬರ್ ಕ್ರೈಂ ಮತ್ತು ತಾಂತ್ರಿಕ ವಿಭಾಗದ ಪೊಲೀಸರು ಬೆದರಿಕೆ ಸಂದೇಶ ಕಳುಹಿಸಿರುವ ಇ-ಮೇಲ್ ಖಾತೆಯ ಮೂಲ, ಐಪಿ ವಿಳಾಸ ಹಾಗೂ ಸಂದೇಶದ ಸತ್ಯಾಸತ್ಯತೆ ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ. ಸಂಗೀತ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತಪಾಸಣೆ, ನಿಗಾ ಮತ್ತು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಈವರೆಗೆ ಕಾರ್ಯಕ್ರಮದ ದಿನಾಂಕ ಅಥವಾ ಆಯೋಜನೆಯಲ್ಲಿ ಯಾವುದೇ ಬದಲಾವಣೆ ಘೋಷಣೆಯಾಗಿಲ್ಲ. ನವೆಂಬರ್ 29ರ ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು