ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಆರೋಪಗಳನ್ನು ತಳ್ಳಿಹಾಕಿದ ಪತ್ರಕರ್ತ: ಸುಳ್ಳು ದೂರು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ದಿನೇಶ್ ಅಮೀನ್ ಮಟ್ಟು

P

Peepal Media • ರಾಜ್ಯ

• 1 ನಿಮಿಷದ ಓದು

ಆರೋಪಗಳನ್ನು ತಳ್ಳಿಹಾಕಿದ ಪತ್ರಕರ್ತ: ಸುಳ್ಳು ದೂರು ನೀಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ದಿನೇಶ್ ಅಮೀನ್ ಮಟ್ಟು

ಬೆಂಗಳೂರು: ಪತ್ರಕರ್ತ ದಿನೇಶ್ ಅಮೀನ್ ಮಟ್ಟು ತಮ್ಮ ವಿರುದ್ಧ ಮಾಡಲಾದ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಸುಳ್ಳು ಆರೋಪ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮಕ್ಕೆ ಆದೇಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.

ದಿನೇಶ್‌ ಅಮೀನ್‌ ವಿಧಾನ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ನಾಮನಿರ್ದೇಶನಗೊಳ್ಳಲಿದ್ದಾರೆ ಎನ್ನುವ ಸುದ್ದಿಗಳುಹರಿದಾಡಿದ ಬೆನ್ನಲ್ಲೇ ಅವರ ವಿರುದ್ಧ ರಾಜ್ಯಪಾಲರ ಬಳಿ ದೂರು ಸಲ್ಲಿಸಲಾಗಿತ್ತು. ಇದೀಗ ಅವರು ಆ ಆರೋಪಗಳನ್ನು ನಿರಾಕರಿಸಿದ್ದು, ತನ್ನ ವಿರುದ್ಧ ಸುಳ್ಳು ದೂರು ನೀಡಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯಪಾಲರಿಗೆ ಪತ್ರ ಬರೆದಿರುವ ದಿನೇಶ್, “ಗಾಡ್ಕರ್ ಎಂಬ ಅಪರಿಚಿತ ವ್ಯಕ್ತಿಯು ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿದ್ದಾರೆ. ನನ್ನ ವಿವರಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಆ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲು ಆದೇಶಿಸಬೇಕೆಂದು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

“ನಾನು ಯಾವುದೇ ಸುಳ್ಳು ದಾಖಲೆ ಸಲ್ಲಿಸಿ ನಿವೇಶನ ಪಡೆದಿಲ್ಲ. ಫೇಕ್ ನ್ಯೂಸ್ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯವಿಲ್ಲದ ಕಾರಣ, ಎರಡು ವರ್ಷಗಳಾದರೂ ಆರೋಪಪಟ್ಟಿಯನ್ನು ಸಲ್ಲಿಸಲಾಗಿಲ್ಲ. ಆದ್ದರಿಂದ, ನನ್ನ ಮೇಲೆ ಯಾವುದೇ ದೋಷಾರೋಪವಿಲ್ಲ. ‘ದಿ ಪಾಲಿಸಿ ಫ್ರಂಟ್’ ಸಂಸ್ಥೆಯಲ್ಲಿ ನಾನು ಮಾಲೀಕನೂ ಅಲ್ಲ, ಪಾಲುದಾರನೂ ಅಲ್ಲ,” ಎಂದು ದಿನೇಶ್ ಸ್ಪಷ್ಟಪಡಿಸಿದ್ದಾರೆ.



ವಿಧಾನಸಭೆ ನಾಮ ನಿರ್ದೇಶನ ಮುಂದೂಡಿದ್ದೇವೆ: ಸಿ ಎಮ್

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದಿದ್ದಾರೆ.

ದಿನೇಶ್‌ ಅಮೀನ್‌ ಮಟ್ಟು ಸಿದ್ದರಾಮಯ್ಯನವರ ಈ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಅವರು ಸಮಾಜಿಕ ಹೋರಾಟಗಳಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದಾರೆ


P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version