ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧರ್ಮಸ್ಥಳ ಪ್ರಕರಣ: 30 ಯುಡಿಆರ್ ದಾಖಲೆಗಳಲ್ಲಿ ವ್ಯತ್ಯಾಸ : ಎಸ್‌ಐಟಿ ತನಿಖಾ ವ್ಯಾಪ್ತಿ ವಿಸ್ತರಣೆಗೆ ಮಹಿಳಾ ಆಯೋಗ ಸೂಚನೆ

PPeepal Media Desk

Peepal Media Desk ರಾಜ್ಯ

• 1 ನಿಮಿಷದ ಓದು

ಧರ್ಮಸ್ಥಳ ಪ್ರಕರಣ: 30 ಯುಡಿಆರ್ ದಾಖಲೆಗಳಲ್ಲಿ ವ್ಯತ್ಯಾಸ : ಎಸ್‌ಐಟಿ ತನಿಖಾ ವ್ಯಾಪ್ತಿ ವಿಸ್ತರಣೆಗೆ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆಯೇ, 1998ರಿಂದ 2014ರವರೆಗಿನ ಅಸ್ವಾಭಾವಿಕ ಸಾವುಗಳ (ಯುಡಿಆರ್) ದಾಖಲೆಗಳಿಗೆ ಸಂಬಂಧಿಸಿದಂತೆ ಮಹತ್ವದ ವ್ಯತ್ಯಾಸ ಬೆಳಕಿಗೆ ಬಂದಿದೆ. ಈ ಕುರಿತು ರಾಜ್ಯ ಮಹಿಳಾ ಆಯೋಗ ಸರ್ಕಾರಕ್ಕೆ ಪತ್ರ ಬರೆದಿದ್ದು, ಹೊಸದಾಗಿ ಪತ್ತೆಯಾಗಿರುವ ಅಂಶಗಳನ್ನು ಎಸ್‌ಐಟಿ ತನಿಖೆಯ ವ್ಯಾಪ್ತಿಗೆ ತರಲು ಅಗತ್ಯ ಆದೇಶ ಹೊರಡಿಸುವಂತೆ ಸೂಚಿಸಿದೆ.

ಎಸ್‌ಐಟಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಸ್ಥಳೀಯ ಆಡಳಿತದ ದಾಖಲೆಗಳ ನಡುವೆ ವ್ಯತ್ಯಾಸ ಕಂಡುಬಂದಿರುವುದನ್ನು ಉಲ್ಲೇಖಿಸಲಾಗಿದೆ. 1998ರಿಂದ 2014ರ ಅವಧಿಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ 1,480 ಯುಡಿಆರ್ ಪ್ರಕರಣಗಳು ದಾಖಲಾಗಿದ್ದರೆ, ಧರ್ಮಸ್ಥಳ ಗ್ರಾಮ ಪಂಚಾಯಿತಿ ದಾಖಲೆಗಳಲ್ಲಿ ಇದೇ ಅವಧಿಯಲ್ಲಿ 1,510 ಮೃತದೇಹಗಳನ್ನು ದಫನ ಮಾಡಿರುವ ಮಾಹಿತಿ ದಾಖಲಾಗಿದೆ ಎನ್ನಲಾಗಿದೆ.

ಇದರಿಂದ ಎರಡೂ ದಾಖಲೆಗಳ ನಡುವೆ 30 ಪ್ರಕರಣಗಳ ವ್ಯತ್ಯಾಸ ಕಂಡುಬಂದಿದ್ದು, ಈ ಅಸಂಗತತೆಗೆ ಕಾರಣವೇನು ಎಂಬ ಪ್ರಶ್ನೆ ಇದೀಗ ತನಿಖೆಯ ಕೇಂದ್ರಬಿಂದುವಾಗಿದೆ. ಈ 30 ಪ್ರಕರಣಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳು, ಪೊಲೀಸ್ ರಿಜಿಸ್ಟರ್‌ಗಳು, ಪಂಚಾಯಿತಿ ದಾಖಲೆಗಳು ಹಾಗೂ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸುವ ಅಗತ್ಯವನ್ನು ಮಹಿಳಾ ಆಯೋಗ ಒತ್ತಿಹೇಳಿದೆ.

ಎಸ್‌ಐಟಿ ವ್ಯಾಪ್ತಿ ವಿಸ್ತರಣೆಗೆ ಸೂಚನೆ
ಹೊಸದಾಗಿ ಬೆಳಕಿಗೆ ಬಂದಿರುವ ದಾಖಲೆಗಳಲ್ಲಿನ ವ್ಯತ್ಯಾಸಗಳು ಈಗಿರುವ ಎಸ್‌ಐಟಿ ತನಿಖೆಯ ವ್ಯಾಪ್ತಿಗೆ ಸ್ವಯಂಚಾಲಿತವಾಗಿ ಸೇರುವುದಿಲ್ಲ ಎಂದು ಮಹಿಳಾ ಆಯೋಗ ಅಭಿಪ್ರಾಯಪಟ್ಟಿದೆ. ಹೀಗಾಗಿ, ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಿ ಅಗತ್ಯ ಸರ್ಕಾರಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.

ಅಲ್ಲದೆ, ತನಿಖೆಗೆ ಸಂಬಂಧಿಸಿದ ಮೂಲ ದಾಖಲೆಗಳು, ಪೊಲೀಸ್ ಮತ್ತು ಪಂಚಾಯಿತಿ ರಿಜಿಸ್ಟರ್‌ಗಳು ಹಾಗೂ ವೈದ್ಯಕೀಯ ವರದಿಗಳು ಸುರಕ್ಷಿತವಾಗಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆಯೋಗ ಪತ್ರ ಬರೆದಿದೆ.

ಅಸ್ಥಿಪಂಜರಗಳ ವೈಜ್ಞಾನಿಕ ಪರೀಕ್ಷೆಗೂ ಒತ್ತು
ಧರ್ಮಸ್ಥಳದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಪತ್ತೆಯಾದ ಮಾನವ ಅಸ್ಥಿಪಂಜರಗಳು ಹಾಗೂ ತಲೆಬುರುಡೆಗಳ ಕುರಿತು ವೈಜ್ಞಾನಿಕವಾಗಿ ತನಿಖೆ ನಡೆಸುವ ಅಗತ್ಯವನ್ನೂ ಆಯೋಗ ಒತ್ತಿಹೇಳಿದೆ. ಡಿಎನ್‌ಎ ಸೇರಿದಂತೆ ವಿಧಿವಿಜ್ಞಾನ ಪರೀಕ್ಷೆಗಳ ಮೂಲಕ ಅವುಗಳ ಗುರುತು ಹಾಗೂ ಸಾವಿಗೆ ಸಂಬಂಧಿಸಿದ ಅಂಶಗಳನ್ನು ಪತ್ತೆಹಚ್ಚಿ, ನಾಪತ್ತೆಯಾದವರ ದಾಖಲೆಗಳೊಂದಿಗೆ ತಾಳೆ ಮಾಡುವಂತೆ ಸೂಚಿಸಲಾಗಿದೆ.

ಹೀಗಾಗಿ, ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ 16 ವರ್ಷಗಳ ಅವಧಿಯ ಯುಡಿಆರ್ ದಾಖಲೆಗಳಲ್ಲಿನ 30 ಪ್ರಕರಣಗಳ ವ್ಯತ್ಯಾಸ ಇದೀಗ ಮತ್ತೊಂದು ಪ್ರಮುಖ ಅಂಶವಾಗಿ ಹೊರಹೊಮ್ಮಿದೆ. ಈ ವ್ಯತ್ಯಾಸಕ್ಕೆ ನಿಖರ ಕಾರಣವೇನು ಎಂಬುದು ಎಸ್‌ಐಟಿ ತನಿಖೆ ಹಾಗೂ ಸಂಬಂಧಿತ ದಾಖಲೆಗಳ ಪರಿಶೀಲನೆಯ ಬಳಿಕವೇ ಸ್ಪಷ್ಟವಾಗಬೇಕಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು