ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಜೂನ್‌ 1ರಿಂದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಣೆ: ಬಿಎಂಟಿಸಿ

PPeepal Media Desk

Peepal Media Desk • ರಾಜ್ಯ

• 1 ನಿಮಿಷದ ಓದು

ಜೂನ್‌ 1ರಿಂದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಣೆ: ಬಿಎಂಟಿಸಿ

ಬಿಎಂಟಿಸಿಯಿಂದ ವಿದ್ಯಾರ್ಥಿಗಳಿಗೆ ಬಸ್‌ ಪಾಸ್‌ ವಿತರಣೆ ಸಂಬಂಧ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಜೂನ್‌ 1ರಿಂದ ವಿದ್ಯಾರ್ಥಿ ಬಸ್‌ ಪಾಸ್‌ ವಿತರಣೆ ಮಾಡಲಾಗುವುದು ಎಂದು ನಿಗಮ ತಿಳಿಸಿದೆ.

ಸರ್ಕಾರದ ನಿರ್ದೇಶನದಂತೆ ಉಚಿತ/ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್‌ಗಳನ್ನು ವಿತರಣೆ ಮಾಡಲಾಗುತ್ತಿದ್ದು, 2024-25ನೇ ಸಾಲಿನ ವಿದ್ಯಾರ್ಥಿ ಪಾಸ್‌ನ ಮೇ 29ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸ್ವೀಕರಿಸಿ, ಜೂನ್‌ 1ರಿಂದ ವಿದ್ಯಾರ್ಥಿ ಪಾಸ್‌ಗಳನ್ನು ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ವಿತರಣೆ ಮಾಡಲಾಗುವುದು.

2024-25ನೇ ಸಾಲಿನ ವಿದ್ಯಾರ್ಥಿ ರಿಯಾಯಿತಿ ಪಾಸ್‌ನ ಆನ್‌ಲೈನ್‌ ಅರ್ಜಿಯು ಸೇವಾಸಿಂಧು ಪೋರ್ಟಲ್‌ನಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಬೆಂಗಳೂರು ಒನ್‌ ಕೇಂದ್ರಗಳ ಮೂಲಕ ವಿದ್ಯಾರ್ಥಿ ಪಾಸ್‌ಗಾಗಿ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿ ಪಾಸ್‌ಗಳನ್ನು ಬೆಳಗ್ಗೆ 8ರಿಂದ ಸಂಜೆ 6.30ರವರೆಗೆ ವಾರದ ಎಲ್ಲಾ ದಿನಗಳಲ್ಲಿ ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಹಾಗೂ ಬಿಎಂಟಿಸಿಯ ಕೆಂಪೇಗೌಡ ಬಸ್‌ ನಿಲ್ದಾಣ, ಕೆಂಗೇರಿ ಟಿಟಿಎಂಸಿ, ಹೊಸಕೋಟೆ, ಎಲೆಕ್ಟ್ರಾನಿಕ್‌ ಸಿಟಿ ಘಟಕ-19, ಶಾಂತಿನಗರ ಟಿಟಿಎಂಸಿ, ಕರಾರಸಾನಿ ಆನೇಕಲ್‌ ಬಸ್‌ ನಿಲ್ದಾಣದಲ್ಲಿ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಾಲಾರಂಭಕ್ಕೂ ಮುನ್ನವೇ ಸಮವಸ್ತ್ರ

ಈ ಬಾರಿ ಶಾಲಾರಂಭಕ್ಕೂ ಮುನ್ನವೇ ಸಮವಸ್ತ್ರ ವಿತರಿಸಲಾಗುವುದು ಎಂದೂ ಸರ್ಕಾರ ತಿಳಿಸಿದೆ. ಶಾಲಾ ಮಕ್ಕಳಿಗೆ ಮೊದಲ ದಿನದಿಂದಲೇ ಪಠ್ಯಪುಸ್ತಕ, ಎರಡು ಜೊತೆ ಸಮವಸ್ತ್ರ ವಿತರಿಸಲಾಗುತ್ತದೆ. ಇದೇ ಮೊದಲ ಬಾರಿ ಶಾಲಾ ಆರಂಭಕ್ಕೂ ಮೊದಲೇ ಎಲ್ಲ ವಿಷಯಗಳ ಪಠ್ಯಪುಸ್ತಕಗಳು ಶಾಲೆಗಳನ್ನು ತಲುಪಿವೆ. ಒಂದೇ ಬಾರಿಗೆ ಎರಡೂ ಜೊತೆ ಸಮವಸ್ತ್ರ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು