ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

PPeepal Media

Peepal Media • ರಾಜ್ಯ

• 1 ನಿಮಿಷದ ಓದು

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ, ವೇತನ ಪತ್ರ/ ವೇತನ ಪಾವತಿ ಕುರಿತ ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.
ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು. ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.
ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.
ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.
ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.
ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು