ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬಿಜೆಪಿ ಹೋರಾಟಕ್ಕೆ ಡಿಕೆ ಸರ್ಕಾರ ಬೆದರಿದೆ – ಪಾರ್ಕ್ ಮಸೂದೆ ವಾಪಸ್‌ ಕುರಿತು ವಿಜಯೇಂದ್ರ ಪ್ರತಿಕ್ರಿಯೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಬಿಜೆಪಿ ಹೋರಾಟಕ್ಕೆ ಡಿಕೆ ಸರ್ಕಾರ ಬೆದರಿದೆ –  ಪಾರ್ಕ್ ಮಸೂದೆ ವಾಪಸ್‌ ಕುರಿತು ವಿಜಯೇಂದ್ರ ಪ್ರತಿಕ್ರಿಯೆ

ರಾಯಚೂರು : ಬಿಜೆಪಿ ನಡೆಸಿದ ಹೋರಾಟಕ್ಕೆ ಸರ್ಕಾರ ಮಣಿದು ಪಾರ್ಕ್ ಮಸೂದೆಯನ್ನು ವಾಪಸ್ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಹೇಳಿದ್ದಾರೆ.

ಸಿಂಧನೂರಿನ ಬಳಿ‌ ನಡೆಯತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ವೇಳೆ ಮಾತನಾಡಿದ ಅವರು, ಪಾರ್ಕ್ ಮಸೂದೆಗೆ ಯಾವ ಮೂರ್ಖ ಈ ಸಲಹೆ ಕೊಟ್ಟಿದ್ದಾರೋ ಗೊತ್ತಿಲ್ಲ. ಬಿಜೆಪಿ ಹೋರಾಟಕ್ಕೆ ಸರ್ಕಾರ ಬೆದರಿದೆ. ಇದೀಗ  ಮಸೂದೆ ವಾಪಸ್ ಪಡೆಯುವ ನಿರ್ಧಾರ ಕೈಗೊಂಡಿದೆ ಎಂದು ಟೀಕಿಸಿದರು.

ಬಿಜೆಪಿ ಹೋರಾಟಕ್ಕೆ ಮಣಿದು ಪಾರ್ಕ್ ಮಸೂದೆ ವಾಪಸ್ ಪಡೆದಿರುವ ಸರ್ಕಾರ, ರೈತರ ವಿಚಾರದಲ್ಲೂ ಇದೇ ರೀತಿಯ ಸೂಕ್ಷ್ಮತೆ ತೋರಬೇಕು. ರೈತರ ಬದುಕಿನೊಂದಿಗೆ ಚೆಲ್ಲಾಟವಾಡದೆ, ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಬೆಳಗ್ಗೆಯೇ ರೈತರ ಬೇಡಿಕೆಗಳ ಬಗ್ಗೆ ನಾವು ಪ್ರಸ್ತಾಪ ಮಾಡಿದ್ದೇವೆ. ಇದೀಗ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ಬರಗಾಲದ ಸಂದರ್ಭದಲ್ಲಿ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು. ರೈತರ ಕೃಷಿ ಸಾಲ ಮನ್ನಾ ಸೇರಿದಂತೆ ಅವರ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣಾ) (ತಿದ್ದುಪಡಿ) ಮಸೂದೆ, 2026 ಅನ್ನು ರಾಜ್ಯ ಸರ್ಕಾರವು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಇದು ಬೆಂಗಳೂರಿನ ಐತಿಹಾಸಿಕ ಹಸಿರು ತಾಣಗಳಾದ ಲಾಲ್‌ಬಾಗ್ (Lalbagh) ಮತ್ತು ಕಬ್ಬನ್ ಪಾರ್ಕ್ (cubbon park) ಸೇರಿದಂತೆ ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಳ್ಳಲು ಶೇ. 5ರಷ್ಟು ಭೂಮಿಯನ್ನು ವರ್ಗಾಯಿಸಲು (ಡೈವರ್ಷನ್) ಅವಕಾಶ ನೀಡುತ್ತದೆ. ಈ ನಿರ್ಧಾರವು ಪರಿಸರವಾದಿಗಳು ಮತ್ತು ಬೆಂಗಳೂರಿನ ನಾಗರಿಕರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು