ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗೌಡರು ಇಲ್ಲಿಗೆ ಬಂದಿದ್ದು ಬಿಜೆಪಿ ಪರ ಪ್ರಚಾರಕ್ಕೋ ಅಥವಾ ನಮ್ಮ ನಾಯಕರ ಸೂಟ್‌ಕೇಸ್ ಲೆಕ್ಕ ಮಾಡುವುದಕ್ಕೋ?: ಡಿ.ಕೆ. ಶಿವಕುಮಾರ್ ವ್ಯಂಗ್ಯ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ಗೌಡರು ಇಲ್ಲಿಗೆ ಬಂದಿದ್ದು ಬಿಜೆಪಿ ಪರ ಪ್ರಚಾರಕ್ಕೋ ಅಥವಾ ನಮ್ಮ ನಾಯಕರ ಸೂಟ್‌ಕೇಸ್ ಲೆಕ್ಕ ಮಾಡುವುದಕ್ಕೋ?: ಡಿ.ಕೆ. ಶಿವಕುಮಾರ್ ವ್ಯಂಗ್ಯ

ದಾವಣಗೆರೆ: ಕಾಂಗ್ರೆಸ್ ನಾಯಕರು ಹಣದ ಚೀಲಗಳೊಂದಿಗೆ ಇಲ್ಲಿಗೆ ಬಂದಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, “ಬಿಜೆಪಿ ನಾಯಕ ಸದಾನಂದ ಗೌಡರು ಈ ಬಗ್ಗೆ ಇದುವರೆಗೆ ಯಾಕೆ ದೂರು ದಾಖಲಿಸಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಸದಾನಂದ ಗೌಡರು ಇಲ್ಲಿಗೆ ಬಂದಿರುವುದು ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಲೋ ಅಥವಾ ನಮ್ಮ ನಾಯಕರ ಸೂಟ್‌ಕೇಸ್‌ಗಳು ಎಷ್ಟು ದಪ್ಪ ಇವೆ, ಎಷ್ಟು ದೊಡ್ಡದಾಗಿವೆ ಎಂದು ವಿಶ್ಲೇಷಣೆ ಮಾಡಲೋ ಎಂಬುದು ನನಗೆ ಆಶ್ಚರ್ಯ ತರುತ್ತಿದೆ,” ಎಂದು ವ್ಯಂಗ್ಯವಾಡಿದರು.

ಈ ಬಾರಿ ಬಿಜೆಪಿಗೆ ಶೇ. 45 ಕ್ಕಿಂತ ಹೆಚ್ಚು ಅಲ್ಪಸಂಖ್ಯಾತರ ಮತಗಳು ಲಭಿಸಲಿವೆ ಎಂಬ ಸದಾನಂದ ಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ತುಂಬಾ ಸಂತೋಷ, ಅವರು ಎಲ್ಲರನ್ನೂ ಕರೆಯಲಿ. 2.30 ಲಕ್ಷ ಮತದಾರರಿಗೂ ಬಿಜೆಪಿಗೆ ಮತ ಹಾಕುವಂತೆ ಕೇಳಲಿ,” ಎಂದರು.

ಬಿಜೆಪಿ ಗೆದ್ದರೆ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂಬ ವದಂತಿಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಚುನಾವಣೆ ಸಮಯದಲ್ಲಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು ಅವರಿಗೆ ಮಾಮೂಲಿ,” ಎಂದು ಹೇಳಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು