ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ರಾಮಲಿಂಗಾರೆಡ್ಡಿ ರಾಜೀನಾಮೆ ಬಿಕ್ಕಟ್ಟು ಸುಖಾಂತ್ಯ: ತಡರಾತ್ರಿ ಸಿಎಂ ಡಿ.ಕೆ. ಶಿವಕುಮಾರ್ ನಡೆಸಿದ ಸಂಧಾನ ಯಶಸ್ವಿ

PPeepal Media

Peepal Media ರಾಜ್ಯ

• 1 ನಿಮಿಷದ ಓದು

ರಾಮಲಿಂಗಾರೆಡ್ಡಿ ರಾಜೀನಾಮೆ ಬಿಕ್ಕಟ್ಟು ಸುಖಾಂತ್ಯ: ತಡರಾತ್ರಿ ಸಿಎಂ ಡಿ.ಕೆ. ಶಿವಕುಮಾರ್ ನಡೆಸಿದ ಸಂಧಾನ ಯಶಸ್ವಿ

ರಾಜೀನಾಮೆ ನೀಡುವ ಮೂಲಕ ಹೊಸ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ರಾಜಕೀಯ ಸವಾಲು ಒಡ್ಡಿದ್ದ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರ ಅಸಮಾಧಾನದ ಬಿಕ್ಕಟ್ಟು ತಡರಾತ್ರಿ ನಡೆದ ಮ್ಯಾರಾಥಾನ್ ಚರ್ಚೆಯ ಬಳಿಕ ಸುಖಾಂತ್ಯಗೊಂಡಿದೆ.

ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೀಡುವ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಕೇವಲ ಮೂರೇ ದಿನಗಳಲ್ಲಿ ಎದುರಾಗಿದ್ದ ಈ ಭಿನ್ನಮತವನ್ನು ಶಮನಗೊಳಿಸಲು ಕಾಂಗ್ರೆಸ್ ಹೈಕಮಾಂಡ್ ತೀವ್ರ ಕಸರತ್ತು ನಡೆಸಿತ್ತು.

ಇದರ ಭಾಗವಾಗಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ತಡರಾತ್ರಿ ಜಯನಗರದ ಖಾಸಗಿ ಹೋಟೆಲ್‌ನಲ್ಲಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಸುಮಾರು ಎರಡೂವರೆ ಗಂಟೆಗಳ ಕಾಲ ಸುದೀರ್ಘ ಸಂಧಾನ ಸಭೆ ನಡೆಸಿದರು. ಶನಿವಾರ ಮುಂಜಾನೆವರೆಗೂ ನಡೆದ ಈ ಮಹತ್ವದ ಸಭೆಯಲ್ಲಿ ಕಾಂಗ್ರೆಸ್‌ನ ಇತರ ಹಿರಿಯ ನಾಯಕರು ಹಾಗೂ ರೆಡ್ಡಿ ಅವರ ಆಪ್ತ ವಲಯದ ಮುಖಂಡರು ಭಾಗಿಯಾಗಿದ್ದರು.

ಸಭೆಯ ಬಳಿಕ ಜಂಟಿಯಾಗಿ ಮಾಧ್ಯಮಗಳ ಮುಂದೆ ಬಂದ ನಾಯಕರು ಬಿಕ್ಕಟ್ಟು ಬಗೆಹರಿದಿರುವುದನ್ನು ಸ್ಪಷ್ಟಪಡಿಸಿದರು. ಇದು ನಮ್ಮ ಪಕ್ಷದ ಆಂತರಿಕ ಅಥವಾ ಕುಟುಂಬದ ವಿಷಯವಾಗಿದ್ದು, ಮಾತುಕತೆಯ ಮೂಲಕ ಎಲ್ಲವನ್ನೂ ಬಗೆಹರಿಸಿಕೊಳ್ಳಲಾಗಿದೆ ಎಂದು ಸಿಎಂ ಶಿವಕುಮಾರ್ ತಿಳಿಸಿದರು. ಖಾತೆ ಹಂಚಿಕೆಯಲ್ಲಿ ಉಂಟಾಗಿದ್ದ ಮಿಸ್‌ಕಮ್ಯುನಿಕೇಷನ್‌ನಿಂದಾಗಿ ಈ ಸಮಸ್ಯೆ ಎದುರಾಗಿತ್ತು, ಹಿರಿಯ ನಾಯಕರಿಗೆ ಸೂಕ್ತ ಅವಕಾಶಗಳನ್ನು ಕಲ್ಪಿಸಿ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಮಲಿಂಗಾರೆಡ್ಡಿ ಅವರು ಸಹ ಮುಖ್ಯಮಂತ್ರಿಗಳ ಹೇಳಿಕೆಯನ್ನು ಬೆಂಬಲಿಸಿ, ಸದ್ಯಕ್ಕೆ ಎಲ್ಲಾ ಗೊಂದಲಗಳು ನಿವಾರಣೆಯಾಗಿವೆ ಎಂದು ತಿಳಿಸಿದರು.

PPeepal Media

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು