ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮೈಕ್ರೋ ಫೈನಾನ್ಸ್‌ಗಳ ವಸೂಲಿ ಕ್ರಮಕ್ಕೆ ಹೆದರಿ ಆತ್ಮಹತ್ಯೆ ಬೇಡ, ಸರ್ಕಾರ ನಿಮ್ಮ ಜೊತೆಗಿದೆ: ಸಿದ್ದರಾಮಯ್ಯ ಕರೆ

PPeepal Media Desk

Peepal Media Desk • ರಾಜ್ಯ

• 2 ನಿಮಿಷದ ಓದು

ಮೈಕ್ರೋ ಫೈನಾನ್ಸ್‌ಗಳ ವಸೂಲಿ ಕ್ರಮಕ್ಕೆ ಹೆದರಿ ಆತ್ಮಹತ್ಯೆ ಬೇಡ, ಸರ್ಕಾರ ನಿಮ್ಮ ಜೊತೆಗಿದೆ: ಸಿದ್ದರಾಮಯ್ಯ ಕರೆ
ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಹೆದರಿ ಆತ್ಮಹತ್ಯೆ ಬೇಡ, ಸರ್ಕಾರ ನಿಮ್ಮ ಜೊತೆಗಿದೆ: ಸಿದ್ದರಾಮಯ್ಯ ಕರೆ
  • ಕೃಷಿ-ಕೈಗಾರಿಕೆ ಅಭಿವೃದ್ಧಿಯಾದರೆ ನಾಡಿನ ಅಭಿವೃದ್ಧಿ
  • ಸುತ್ತೂರು ಕ್ಷೇತ್ರ ಕೇವಲ ಧಾರ್ಮಿಕ ಕ್ಷೇತ್ರ ಅಲ್ಲ. ಅಧ್ಯಾತ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರವೂ ಹೌದು
  • ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ
  • ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ

ಮೈಸೂರು ಜ 31: ಬಸವಣ್ಣನವರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇದನ್ನು ಇಡೀ ಸಮಾಜ ಅರಿತುಕೊಳ್ಳಬೇಕು
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಮೈಸೂರು ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗದ್ದುಗೆ ದರ್ಶನ ಪಡೆದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಾತ್ಯತೀತ ಸಮಾಜ ನಿರ್ಮಾಣ ಸಂವಿಧಾನದ ಮೂಲ ಉದ್ದೇಶ. ಶರಣಶ್ರೇಷ್ಠರಾದ ಬಸವಾದಿ ಶರಣರ ಆಶಯವೂ ಆಗಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಂಡು ಬಸವಣ್ಣನವರ ಆಶಯದಂತೆ ಜಾತಿ, ಧರ್ಮದ ಹೆಸರಿನ ಮನುಷ್ಯ ತಾರತಮ್ಯ ಹಾಗೂ ಮೌಡ್ಯಗಳನ್ನು ತೊರೆಯಬೇಕು ಎಂದು ಕರೆ ನೀಡಿದರು.

ನಮಗೆ ಸಿಕ್ಕಿರುವ ರಾಜಕೀಯ ಸ್ವಾತಂತ್ರ್ಯ ಆರ್ಥಿಕವಾಗಿ, ಸಮಾಜಿಕವಾಗಿ ಇಲ್ಲ . ಇದು ಸಿಗದ ಹೊರತು ಸ್ವಾತಂತ್ರ್ಯದ ಆಶಯ ಪೂರ್ತಿ ಆಗುವುದಿಲ್ಲ ಎನ್ನುವ ಮಾತನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ಸಭೆಯಲ್ಲೇ ಹೇಳಿದ್ದರು. ಅವತ್ತಿನ‌ ಅವರು ಮಾತು ಇವತ್ತಿಗೂ ಸತ್ಯ ಎಂದರು.

ಬಸವಣ್ಣನವರು 850 ವರ್ಷಗಳ ಹಿಂದೆ “ಇವ ನಾರವ ಎಂದು ಪ್ರಶ್ನಿಸದೆ, ಇವ ನಮ್ಮವ” ಎಂದು ಹೇಳಿ ಅಂದಿದ್ದರು. ಆದರೂ ಇವತ್ತಿಗೂ ನಾವು ಜಾತಿ ಕೇಳುವುದನ್ನು ನಿಲ್ಲಿಸಿಲ್ಲ, ಜಾತಿ-ಧರ್ಮದ ಅನಿಷ್ಠ ತಾರತಮ್ಯವನ್ನು ಇವತ್ತಿಗೂ ಕಾಣುತ್ತೇನೆ ಎಂದರು.

ನಾನು ವೈಯುಕ್ತಿಕವಾಗಿ ಬಸವಣ್ಣನವರ ಅಪ್ಪಟ ಹಿಂಬಾಲಕ. ಅದಕ್ಕೇ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋ ಕಡ್ಡಾಯಗೊಳಿಸಿದೆ ಎಂದರು.

ವಿದ್ಯಾವಂತರೂ ಕರ್ಮ‌ಸಿದ್ಧಾಂತವನ್ನು ಆಚರಿಸುವ ದುರಂತವನ್ನು ನಾವು ಕಾಣುತ್ತೇವೆ. ಯಾವ ದೇವರೂ ಬಡವನಾಗಿರು, ಹಸಿದುಕೊಂಡಿರು, ಹರಿದ ಬಟ್ಟೆಯಲ್ಲಿರು ಎಂದು ಹಣೆಬರಹ ಬರೆಯುವುದಿಲ್ಲ. ಇಂಥಾ ಮೌಡ್ಯವನ್ನು ವಿದ್ಯಾವಂತರೂ ಆಚರಿಸುತ್ತಿದ್ದಾರೆ. ಹೀಗಾದಾಗ ಅವರ ವಿದ್ಯೆಗೆ ಗೌರವ ಬರುತ್ತದಾ ಎಂದು ಪ್ರಶ್ನಿಸಿದರು.

ಜಾತಿ ಆಧಾರದಲ್ಲಿ ಮನುಷ್ಯನ ಯೋಗ್ಯತೆ ಅಳೆಯುವ ಪದ್ಧತಿಯನ್ನು ನಮ್ಮ ಸಂವಿಧಾನ ವಿರೋಧಿಸಿತು. ಪ್ರತಿಭೆ ಮತ್ತು ಸಾಮರ್ಥ್ಯ ಪ್ರತಿಯೊಬ್ಬರ ಸ್ವತ್ತು. ಅವಕಾಶಗಳು ಸಿಗಬೇಕಷ್ಟೆ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತವೆ. ಇದಕ್ಕೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದರು.

ಸುತ್ತೂರು ಮಠ ಶಿಕ್ಷಣ ಮತ್ತು ಅನ್ನ ದಾಸೋಹ ನಡೆಸುತ್ತಾ ಇಡೀ ಸಮಾಜದ ಆಸ್ತಿಯಾಗಿದೆ. ಜಾತ್ಯತೀತ ಮೌಲ್ಯಗಳು ಸುತ್ತೂರು ಮಠದ ಮೌಲ್ಯಗಳೂ ಆಗಿವೆ ಎಂದರು.

ಕಾಯಕ ಮತ್ತು ದಾಸೋಹ ಎರಡೂ ಬಸವಾದಿ ಶರಣರ ಆಶಯವಾಗಿತ್ತು. ಕಾಯಕ ಅಂದ್ರೆ ಉತ್ಪತ್ತಿ, ದಾಸೋಹ ಅಂದರೆ ವಿತರಣೆ ಎಂದು ವಿಶ್ಲೇಷಿಸಿದರು.

ನಾವು ಉಚಿತವಾಗಿ ಅಕ್ಕಿ ಕೊಟ್ಟಿದ್ದರಿಂದ ಬಡವರು, ಶ್ರಮಿಕರು ಸೋಮಾರಿಗಳಾಗುತ್ತಿದ್ದಾರೆ ಎನ್ನುವುದು ದುಡಿಯದ ಗ್ರ ಮೈಗಳ್ಳರು, ದುಡಿಯದೆ ಬೊಜ್ಜು ಬೆಳೆಸಿಕೊಂಡವರು ಮಾತ್ರ ಹೇಳಲು ಸಾಧ್ಯ ಎಂದರು.

ಬರಿ ಬಾಯಿ ಮಾತಿನಲ್ಲಿ ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆಶಯಗಳು ಜಾರಿ ಆಗುವುದಿಲ್ಲ. ಆಶಯಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಬೇಕು. ಈ ಉದ್ದೇಶದಿಂದಲೇ ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದೆವು ಎಂದು ಕರೆ ನೀಡಿದರು.

ನಾವು ಗ್ಯಾರಂಟಿಗಳನ್ನು ಜಾರಿಗೊಳಿಸಿದಾಗ ರಾಜ್ಯದ ಬೊಕ್ಕಸ ದಿವಾಳಿ ಆಗತ್ತೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯವರೇ ಈಗ ನಮ್ಮ ಗ್ಯಾರಂಟಿಗಳನ್ನು ಕಾಪಿ ಹೊಡೆದು ಅವರು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಘೋಷಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಆರ್ಥಿಕ, ಸಾಮಾಜಿಕ ಚಲನೆ ಸಿಕ್ಕಾಗ ಮಾತ್ರ ಜಾತಿ ವ್ಯವಸ್ಥೆ ಹೋಗಲು ಸಾಧ್ಯ. ನಮ್ಮ ಗ್ಯಾರಂಟಿಗಳು ಪ್ರತೀ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಚಲನೆ ನೀಡಿವೆ. ಜನರ ಕೊಳ್ಳುವ ಶಕ್ತಿಯನ್ನು ನಾವು ಹೆಚ್ಚಿಸಿದ್ದರಿಂದಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕೂಡ ಸದೃಢವಾಗಿದೆ ಎಂದರು.

ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ ಎಂದರು.

ಆತ್ಮಹತ್ಯೆ ಬೇಡ: ಸರ್ಕಾರ ನಿಮ್ಮ ಜೊತೆಗಿದೆ: ಕಂಪ್ಲೇಂಟ್ ಕೊಡಿ

ಮೈಕ್ರೋ ಫೈನಾನ್ಸ್ ಗಳ ವಸೂಲಿ ಕ್ರಮಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ಕಂಪ್ಲೇಂಟ್ ಕೊಡಿ. ಕಾನೂನು ಕ್ರಮ ತಗೊತೀವಿ ಎಂದು ಸಿದ್ದರಾಮಯ್ಯ ಅವರು ಕರೆ ನೀಡಿದರು.

PPeepal Media Desk

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು