ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಗರ್ಭಿಣಿಯರಲ್ಲಿ ರಕ್ತಹೀನತೆ ಇದ್ದಲ್ಲಿ ನಿರ್ಲಕ್ಷಿಸಬೇಡಿ, ಉಚಿತ ಎಫ್‌ಸಿಎಮ್ ಚುಚ್ಚುಮದ್ದು ತಪ್ಪದೇ ಪಡೆಯಿರಿ: ಡಿಹೆಚ್‌ಓ ಡಾ. ಯಲ್ಲಾ ರಮೇಶ್ ಬಾಬು

P

Peepal Media • ರಾಜ್ಯ

• 2 ನಿಮಿಷದ ಓದು

ಗರ್ಭಿಣಿಯರಲ್ಲಿ ರಕ್ತಹೀನತೆ ಇದ್ದಲ್ಲಿ ನಿರ್ಲಕ್ಷಿಸಬೇಡಿ, ಉಚಿತ ಎಫ್‌ಸಿಎಮ್ ಚುಚ್ಚುಮದ್ದು ತಪ್ಪದೇ ಪಡೆಯಿರಿ: ಡಿಹೆಚ್‌ಓ ಡಾ. ಯಲ್ಲಾ ರಮೇಶ್ ಬಾಬು

ಬಳ್ಳಾರಿ, ಜ.27: ಗರ್ಭಿಣಿಯರಲ್ಲಿ ರಕ್ತಹೀನತೆ ಇದ್ದಲ್ಲಿ ನಿರ್ಲಕ್ಷಿಸಬಾರದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಫ್‌ಸಿಎಮ್ ಚುಚ್ಚುಮದ್ದು ಹಾಕಿಸಿ ರಕ್ತಹೀನತೆ ತಡೆಗೆ ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಸಿರಗುಪ್ಪ ಪಟ್ಟಣದ ಹೊರವಲಯದ ವಲಸೆ ಜನವಿರುವ ಸಿದ್ದಪ್ಪ ನಗರಕ್ಕೆ ಗರ್ಭಿಣಿ ಮಹಿಳೆಯರ ಮನೆ ಭೇಟಿ ಮಾಡಿ ಸ್ಥಳೀಯ ಜನತೆಯೊಂದಿಗೆ ಅವರು ಮಾತನಾಡಿದರು.

ಮನೆಯಲ್ಲಿ ಗರ್ಭಿಣಿಯಿದ್ದರೆ ಅವರು ಮನೆಯ ಮಗಳಾಗಿರಲಿ ಅಥವಾ ಸೊಸೆಯಾಗಿರಲಿ ಯಾವುದೇ ಕಾರಣಕ್ಕೂ ರಕ್ತಹೀನತೆಯಾಗದಂತೆ ಕಾಳಜಿ ವಹಿಸಬೇಕು. ಈ ದಿಶೆಯಲ್ಲಿ ದುಬಾರಿಯಾದ ಎಫ್.ಸಿ.ಎಮ್ ಚುಚ್ಚುಮದ್ದನ್ನು ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ನಿಮ್ಮ ವೃತ್ತಿಯೊಂದಿಗೆ ಮನೆಯಲ್ಲಿನ ಗರ್ಭಿಣಿಯ ಆರೈಕೆಗೆ ಆದ್ಯತೆ ನೀಡಬೇಕು. ಆರೋಗ್ಯ ಇಲಾಖೆಯಿಂದ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಊಟವಾದ ಒಂದು ಗಂಟೆಯ ನಂತರ ತಪ್ಪದೇ ನುಂಗಿಸಬೇಕು. ಕಬ್ಬಿಣಾಂಶ ಮಾತ್ರೆ ನುಂಗಿದರೆ, ಭ್ರೂಣ ದಪ್ಪವಾಗುತ್ತದೆ, ಕಪ್ಪು ಬಣ್ಣದ ಮಗು ಹುಟ್ಟುತ್ತದೆ ಎಂಬ ತಪ್ಪು ನಂಬಿಕೆಗಳನ್ನು, ಗಾಳಿಸುದ್ದಿಗಳನ್ನು ನಂಬಬಾರದು. ವೈದ್ಯರ ಸಲಹೆಯಂತೆ ಉಚಿತವಾಗಿ ನೀಡುವ ಕಬ್ಬಿಣಾಂಶ ಮಾತ್ರೆಗಳನ್ನು ಪ್ರತಿದಿನ ಒಂದರಂತೆ ಕನಿಷ್ಟ 180 ಸೇವಿಸಬೇಕು ಎಂದು ಅವರು ವಿನಂತಿಸಿದರು.

ಗಂಡಾಂತರ ಗರ್ಭಿಣಿಯರು ಎಂದು ಗುರ್ತಿಸಿದ ನಂತರ ಅಂದರೆ ಚೊಚ್ಚುಲು ಗರ್ಭಿಣಿ, ಎತ್ತರ ಕಡಿಮೆ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕಬ್ಬಿಣಾಂಶ ಕೊರತೆ, ಅವಳಿ ಜವಳಿ ಗರ್ಭಣಿ, ವಿವಾಹವಾಗಿ ಐದಕ್ಕಿಂತ ಹೆಚ್ಚು ವರ್ಷಗಳ ನಂತರ ಗರ್ಭಿಣಿಯಾಗಿರುವುದು, ಮೊದಲ ಹೆರಿಗೆ ಸಿಸೇರಿಯನ್, ಮುಂತಾದ ಕಾರಣಗಳಿದ್ದರೆ ನಿರ್ಲಕ್ಷಿಸಬಾರದು. ಅಲ್ಲದೆ ತೀವ್ರ ರಕ್ತಹೀನತೆಯಂತಹ ಸನ್ನಿವೇಶದಲ್ಲಿ ಸ್ಥಳೀಯವಾಗಿ ನೀಡುವ ಚಿಕಿತ್ಸೆಯಾದ (ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ) ಸುಧಾರಣೆಯಾಗದಿದ್ದಲ್ಲಿ ತಜ್ಞರ ಬಳಿ ತಪ್ಪದೇ ಕಳುಹಿಸಬೇಕು. ಅಗತ್ಯವಿದ್ದಲ್ಲಿ ಸ್ಕ್ಯಾನ್ ಮಾಡಿಸಬೇಕು ಎಂದು ಹೇಳಿದರು.

ಪೌಷ್ಟಿಕ ಆಹಾರ ತಪ್ಪದೆ ನೀಡಿ:

ಗರ್ಭಿಣಿ ಮಹಿಳೆಯರಿಗೆ ಮೊಳಕೆ ಕಾಳು, ಹಸಿರು ತಪ್ಪಲು ಪಲ್ಯ ಮೊಟ್ಟೆ, ಮೀನು, ಸಾಂಸ್ಕೃತಿಕವಾಗಿ ಒಪ್ಪಿದರೆ ಮಾಂಸಹಾರಿ ಊಟ, ಋತುಮಾನದ ಹಣ್ಣುಗಳನ್ನು ತಪ್ಪದೇ ಕೊಡಬೇಕು. ಇದಕ್ಕೆ ಬೆಂಬಲವಾಗಿ ಈಗಾಗಲೇ ಪ್ರತಿ 9 ಹಾಗೂ 24 ತಾರೀಖುಗಳಂದು ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆಯೊಂದಿಗೆ ಪೌಷ್ಠಿಕತೆ ಇರುವ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ರಕ್ತ ಶೇಖರಣಾ ಘಟಕ ಆರಂಭ:

ಗರ್ಭಿಣಿ ಸೇರಿದಂತೆ ಇತರರಿಗೆ ರಕ್ತದ ಅವಶ್ಯಕತೆ ಇದ್ದರೆ ಒದಗಿಸಲು ಮೋಕಾ, ಕುರುಗೋಡು, ಕಂಪ್ಲಿ, ತೋರಣಗಲ್ಲು ಆರೋಗ್ಯ ಕೇಂದ್ರಗಳಲ್ಲಿ ರಕ್ತ ಶೇಖರಣಾ ಘಟಕ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ತಿಳಿಸಿದರು.

ಹೆರಿಗೆ ದಿನಾಂಕ 3 ದಿನ ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ:

ಹೆರಿಗೆಗೆ ನಿರೀಕ್ಷಿತ ದಿನಾಂಕದ 3 ದಿನ ಮೊದಲು ಗರ್ಭಿಣಿಯರು ಅದರಲ್ಲೂ ಗಂಡಾಂತರಕಾರಿ ಲಕ್ಷಣಗಳುಳ್ಳವರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಸರಳ ಹೆರಿಗೆಯ ಅವಕಾಶಗಳಿಗೆ ಬೆಂಬಲಿಸಬೇಕು ಎಂದು ಕೋರಿದರು.

ಮಕ್ಕಳ ಜನನದ ಮಧ್ಯ ಅಂತರಕ್ಕಾಗಿ ತಾತ್ಕಾಲಿಕ ವಿಧಾನ ಬಳಸಿ:
ಮೊದಲ ಹೆರಿಗೆ ಶಸ್ತ್ರಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಠ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ್-ಟಿ, ನೀರೊಧ್ ಬಳಸಲು ವಿನಂತಿಸಿದರು.

ಈ ಸಂದರ್ಭದಲ್ಲಿ ಸಿರುಗುಪ್ಪ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಸವರಾಜ್ ದಮ್ಮೂರ್, ಜಿಲ್ಲಾ ಆರೋಗ್ಯ ಶಿಕ್ಷಣಾದಿಕಾರಿ ಈಶ್ವರ ಹೆಚ್ ದಾಸಪ್ಪನವರ, ಅಂಗನವಾಡಿ ಸಹಾಯಕಿಯರು, ಸ್ಥಳೀಯರಾದ ಅಶೋಕ, ಕಾಸಿಮ್, ಹುಸೇನ್, ಶಿವಶಂಕರ ಉಪಸ್ಥಿತರಿದ್ದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version