ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ನರೇಂದ್ರ ಮೋದಿಯವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ: ಸಿದ್ದರಾಮಯ್ಯ ಎಚ್ಚರಿಕೆ

P

Peepal Media • ರಾಜ್ಯ

• 2 ನಿಮಿಷದ ಓದು

ನರೇಂದ್ರ ಮೋದಿಯವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ: ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು ಎಂದು ಸಿದ್ಧರಾಮಯ್ಯನವರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು “ಈ ಗೊಂದಲ ನಿವಾರಣೆಗಾಗಿ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕೆಂದು ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ, ಪರಸ್ಪರ ದೂಷಣೆ – ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ.

ಸನ್ಮಾನ್ಯ ನರೇಂದ್ರ ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು.

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ.ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ದ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೆ ಪ್ರೇಮಸಲ್ಲಾಪ ಎನ್ನೋಣವೇ? ಎಂದು ವಿರೋಧ ಪಕ್ಷದ ಕಾಲೆಳೆದಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ…
ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು.

2011ರಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ – ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು, ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತರ್‌ಕಲಹ ಕಾರಣ ಅಲ್ಲವೇ?

ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಮುಖ್ಯಮಂತ್ರಿ ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version