ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ – ಡಾ. ಜಿ. ಪರಮೇಶ್ವರ್

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ ರಾಜ್ಯ

• 1 ನಿಮಿಷದ ಓದು

ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ – ಡಾ. ಜಿ. ಪರಮೇಶ್ವರ್

ಬೆಂಗಳೂರು : ರಾಜಭವನದ ಗಾಜಿನ ಮನೆಯಲ್ಲಿ ಇಂದು ನಡೆದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ, ಹಿರಿಯ ನಾಯಕ ಮತ್ತು ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಜಿ. ಪರಮೇಶ್ವರ್ (G Parameshwar) ಅವರು ಕರ್ನಾಟಕದ ನೂತನ ಉಪಮುಖ್ಯಮಂತ್ರಿಯಾಗಿ (Deputy CM) ಅಧಿಕೃತವಾಗಿ ಪದಗ್ರಹಣ ಮಾಡಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ನೂತನ ಸಂಪುಟದ ಮೊದಲ ಪಟ್ಟಿಯಲ್ಲಿ ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಪಟ್ಟ ಒಲಿದಿದೆ. ದೃಢ ಸಿದ್ಧಾಂತದ ನಾಯಕರಾಗಿರುವ ಇವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಶಾಸಕರಾಗಿ ಸುದೀರ್ಘ ಪಯಣ
ಡಾ. ಜಿ. ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಒಟ್ಟು 5 ಬಾರಿ ಶಾಸಕರಾಗಿ ಆಯ್ಕೆಯಾದ ಸುದೀರ್ಘ ಅನುಭವ ಹೊಂದಿದ್ದಾರೆ. ಆರಂಭದಲ್ಲಿ ಇವರು 1989, 1999 ಮತ್ತು 2004ರ ವಿಧಾನಸಭಾ ಚುನಾವಣೆಗಳಲ್ಲಿ ಮಧುಗಿರಿ ಕ್ಷೇತ್ರದ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಕ್ಷೇತ್ರ ಮರುವಿಂಗಡಣೆಯಾದ ಬಳಿಕ ಇವರು ಕೊರಟಗೆರೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರಗೊಂಡು, ಅಲ್ಲಿಂದ ಸ್ಪರ್ಧಿಸಿ ಪ್ರಸ್ತುತ ಕಾಂಗ್ರೆಸ್ ಶಾಸಕರಾಗಿದ್ದಾರೆ.

ಸಂಪುಟಗಳಲ್ಲಿ ನಿಭಾಯಿಸಿದ ಪ್ರಮುಖ ಜವಾಬ್ದಾರಿಗಳು
ಕಳೆದ ಮೂರು ದಶಕಗಳಲ್ಲಿ ಕಾಂಗ್ರೆಸ್ ನೇತೃತ್ವದ ವಿವಿಧ ಸರ್ಕಾರಗಳಲ್ಲಿ ಡಾ. ಜಿ. ಪರಮೇಶ್ವರ್ ಅವರು ಅತ್ಯಂತ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದಾರೆ. 1993ರಲ್ಲಿ ಎಂ. ವೀರಪ್ಪ ಮೊಯ್ಲಿ ಅವರ ನೇತೃತ್ವದ ಸರ್ಕಾರದಲ್ಲಿ ರೇಷ್ಮೆ ಸಚಿವರಾಗಿ ಮೊದಲ ಬಾರಿಗೆ ಸಚಿವ ಸಂಪುಟ ಸೇರಿದ್ದರು. 1999ರಲ್ಲಿ ಎಸ್.ಎಂ. ಕೃಷ್ಣ ಅವರ ಸಂಪುಟದಲ್ಲಿ ಉನ್ನತ ಶಿಕ್ಷಣ ಸಚಿವರಾಗಿ ಪ್ರಮುಖ ಸುಧಾರಣೆಗಳನ್ನು ತಂದಿದ್ದರು. 2015 ರಲ್ಲಿ ಸಿದ್ದರಾಮಯ್ಯ ಅವರ ಮೊದಲ ಅವಧಿಯ ಸರ್ಕಾರದಲ್ಲಿ ಅತ್ಯಂತ ಜವಾಬ್ದಾರಿಯುತವಾದ ಗೃಹ ಸಚಿವರಾಗಿ  ಕಾರ್ಯನಿರ್ವಹಿಸಿದ್ದರು. (ಇದಕ್ಕೂ ಮುನ್ನ 2014ರಲ್ಲಿ ಇವರು ವಿಧಾನಪರಿಷತ್ ಸದಸ್ಯರಾಗಿದ್ದರು).

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು