ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

3ನೇ ದಿನವು ಮುಂದುವರೆದ ಪೌರ ನೌಕರರ ಮುಷ್ಕರ ಬೇಡಿಕೆ ಈಡೇರಿಸದಿದ್ರೆ ಕುಡಿಯುವ ನೀರು ಬಂದ್ ಎಚ್ಚರಿಕೆ

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌ • ರಾಜ್ಯ

• 1 ನಿಮಿಷದ ಓದು

3ನೇ ದಿನವು ಮುಂದುವರೆದ ಪೌರ ನೌಕರರ ಮುಷ್ಕರ ಬೇಡಿಕೆ ಈಡೇರಿಸದಿದ್ರೆ ಕುಡಿಯುವ ನೀರು ಬಂದ್ ಎಚ್ಚರಿಕೆ

ಹಾಸನ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರಸಭೆ ಆವರಣದಲ್ಲಿ ನಡೆಸುತ್ತಿರುವ ಅನಿರ್ಧಿಷ್ಟವಧಿ ಪೌರನೌಕರ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಮ್ಮ ಬೇಡಿಕೆ ಈಡೇರಿಸದಿದ್ದರೇ ಕುಡಿಯುವ ನೀರನ್ನು ಕೂಡ ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದೆ ವೇಳೆ ಪೌರ ನೌಕರರ ಸಂಘದ ಉಷಾ ಚಂದ್ರಶೇಖರ್ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಚಾಲಕರು, ಲೋಡರ್ಸ್ ಕ್ಲೀನರ್ಸ್, ಗಾರ್ಡನರ್, ಸ್ಯಾನಿಟರಿ ಸೂಪರ್‌ವೈರ‍್ರ, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಎಂದರು. ಕೌರ ಕಾರ್ಮಿಕರನ್ನು ದಿನಗೂಲಿ, ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಾಮಾನ ವೇತನ: ನೌಕರರನ್ನು ಖಾಯಂ ಮಾಡುವುದು ಹಾಗೂ ಎಲ್ಲಾ ನೌಕರರಿಗೆ ಎಸ್.ಎಫ್.ಸಿ. ಮುಕ್ತ ನಿಧಿಯಿಂದ ವೇತನ ನೀಡಬೇಕು ಎಂದು ಆಗ್ರಹಿಸಿದರು.


ರಂಜಾನ ಹಬ್ಬದ ನಂತರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ರಾಜ್ಯ ಪದಾಧಿಕಾರಿಗಳೊಂದಿಗೆ ಮಾನ್ಯ ಮುಖ್ಯ ಮಂತ್ರಿಗಳ ಎದುರಿಗೆ ಸಭೆ ನಡೆಸಲು ದಿನಾಂಕ ನೀಡುವುದಾಗಿಯೂ ಸಹ ಭರವಸೆ ನೀಡಿದ್ದರು. ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಪ್ರಸ್ತುತ ಇಲ್ಲಿಯವರೆಗೂ ಚರ್ಚಿಸಲು ಆಹ್ವಾನಿಸಿರುವುದಿಲ್ಲ. ನಗರದಲ್ಲಿ ರಾಜ್ಯ ಪರಿಷತ್‌ನ ಸರ್ವ ಸದಸ್ಯರ ಸಭೆಯನ್ನು ಕರೆದು ರಾಜ್ಯ ಪರಿಷತ್ ಸಭೆಯಲ್ಲಿ ತೀರ್ಮಾನಿಸಿದಂತೆ ಘನ ಸರ್ಕಾರಕ್ಕೆ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು 45 ದಿನಗಳ ಅನಿರ್ದಿಷ್ಠಾವದಿ ಮುಷ್ಕರದ ನೋಟೀಸ್‌ನ್ನು ನೀಡಲಾಗಿರುತ್ತದೆ. ಪೌರ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಅಧ್ಯಕ್ಷ ಯೋಗೇಶ್, ಶಾಖಾ ಅಧ್ಯಕ್ಷ ಎನ್.ಆರ್. ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ರಂಜನ್, ಖಜಾಂಚಿ ಹೆಚ್.ಜಿ. ರಾಮು ಇತರರು ಉಪಸ್ಥಿತರಿದ್ದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು