ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಮಾದಕ ವಸ್ತುಗಳ ಸುಲಭ ಲಭ್ಯತೆಯೇ ವ್ಯಸನಿಗಳ ಹೆಚ್ಚಳಕ್ಕೆ ಕಾರಣ: ಶಾಸಕ ಎಸ್.ಎನ್.ಚನ್ನಬಸಪ್ಪ

P

Peepal Media • ರಾಜ್ಯ

• 2 ನಿಮಿಷದ ಓದು

ಮಾದಕ ವಸ್ತುಗಳ ಸುಲಭ ಲಭ್ಯತೆಯೇ ವ್ಯಸನಿಗಳ ಹೆಚ್ಚಳಕ್ಕೆ ಕಾರಣ: ಶಾಸಕ ಎಸ್.ಎನ್.ಚನ್ನಬಸಪ್ಪ

ಶಿವಮೊಗ್ಗ, ಆಗಸ್ಟ್.೦೧ : ಮಾದಕ ವಸ್ತುಗಳು ಸುಲಭವಾಗಿ ಮತ್ತು ಹತ್ತಿರದಲ್ಲೇ ಸಿಗುತ್ತಿರುವುದೇ ವ್ಯಸನಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ವಿಷಾದ ವ್ಯಕ್ತಪಡಿಸಿದರು.


ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ಷಣಾ ಇಲಾಖೆ ಹಾಗೂ ಹಲವು ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಾದಕ ವ್ಯಸನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದರಿಂದ ದೂರ ಇರಬೇಕು ಎಂದು ಹೇಳುತ್ತೇವೆಯೋ ಅವುಗಳೇ ಹತ್ತಿರದಲ್ಲಿ ಸಿಗುತ್ತಿರುವುದು ವಿಪರ್ಯಾಸ ಎಂದರು.


ದಿನಸಿ ಅಂಗಡಿಗಳಿಗಿಂತ ಮುಂಚಿತವಾಗಿಯೇ ಬಾಗಿಲು ತೆರೆಯುತ್ತವೆ ಮಾದಕ ವಸ್ತು ಸಿಗುವ ಅಂಗಡಿಗಳು ಎಂದ ಅವರು, ಮಹಾತ್ಮ ಗಾಂಧೀಜಿಯವರು ಯಾವುದನ್ನು ಬೇಡ ಎಂದರೋ ಅದನ್ನೇ ಸರ್ಕಾರ ವಿಶೇಷ ಮಳಿಗೆಗಳ ಮೂಲಕ ಮಾರಾಟ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.


ಶಾಲಾ ಕಾಲೇಜುಗಳ, ಮಂದಿರಗಳ ಸುತ್ತ ಮುತ್ತ ೧೦೦ ಅಡಿ ಅಂತರದಲ್ಲಿ ಮಾದಕ ವಸ್ತುಗಳು ಸಿಗುವ ಅಂಗಡಿಗಳು ಇರುವಂತಿಲ್ಲ ಎಂಬ ನಿಯಮವಿದೆ. ಇದು ತಮಾಷೆಯ ವಿಷಯವೆನಿಸಿದರು ಸತ್ಯವಾಗಿದೆ. ಆದರೆ ಮಾದಕ ವಸ್ತುಗಳನ್ನು ಇಷ್ಟಪಡುವ ವ್ಯಕ್ತಿ ೧೦೦ ಅಡಿ ಅಷ್ಟೇ ಅಲ್ಲ ಕಿಲೋಮೀಟರ್‌ಗಟ್ಟಲೆ ಹೋಗಬಲ್ಲ. ಆದ್ದರಿಂದ ಮಾದಕ ವಸ್ತುಗಳೇ ಸಿಗದಂತಾಗಬೇಕು, ಆಗ ಮಾತ್ರ ಇಂತಹ ಆಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.


ನಮ್ಮ ಯೋಚನಾ ಶಕ್ತಿ ಬದಲಾಗಬೇಕು. ನಮಗೆ ಹಾಗೂ ನಮ್ಮ ಆರೋಗ್ಯಕ್ಕೆ ಯಾವುದು ಕೆಡುಕನ್ನು ಉಂಟು ಮಾಡುತ್ತದೋ ಅದನ್ನು ಕಾಲಿನಿಂದ ಒದೆಯುವಂತಾಗಬೇಕು.


ಮಾದಕ ವಸ್ತುಗಳಿಂದ ದೂರವಿರಬೇಕೆಂಬ ದೃಢ ಮನೋ ನಿರ್ಧಾರವನ್ನು ಹೊಂದಬೇಕು.ಪ ಅಂತಹ ಗಟ್ಟಿತನವನ್ನು ಪ್ರದರ್ಶಿಸಿದರೆ ಮಾತ್ರ ಸಾಮಾಜಿಕ ಹಾಗೂ ವ್ಯಯಕ್ತಿಕ ಬದುಕು ಗಟ್ಟಿಯಾಗುತ್ತದೆ ಎಂದು ಹೇಳಿದರು.


ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಮಾತನಾಡಿ, ಮಹಾಂತ ಶಿವಯೋಗಿಗಳು ಆಗಸ್ಟ್ ೦೧ರಂದು ಜನಿಸಿದ ದಿನದಂದು ಮಾದಕ ವ್ಯಸನ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಆ ಮಹನೀಯರು ಪ್ರಾತಕಾಲ ಸ್ಮರಣೀಯರು. ಅವರು ತಮ್ಮ ಜೋಳಿಗೆಯ ಮೂಲಕ ಪ್ರತಿ ಮನೆ ಮನೆ, ಗಲ್ಲಿ ಗಲ್ಲಿ ಓಣಿಗಳನ್ನು ತಿರುಗಿ ಅವರುಗಳಲ್ಲಿದ್ದ ಮಾದಕ ವಸ್ತುಗಳನ್ನು ಜೋಳಿಗೆಗೆ ಹಾಕಿಸಿಕೊಂಡು ಜನರನ್ನು ಮಾದಕ ವಸ್ತುಗಳಿಂದ ಮುಕ್ತರನ್ನಾಗಿ ಮಾಡಿದವರು ಎಂದು ಹೇಳಿದರು.
ಜನ ಸಾಮಾನ್ಯರು ಇವುಗಳಿಂದ ದೂರವಿರಬೇಕು. ಯಾವುದೂ ನಮ್ಮ ಆರೋಗ್ಯಕ್ಕೆ ಮಾರಕವೊ ಅದನ್ನು ಸೇವಿಸಬಾರದು ಎಂಬ ಮನಸ್ಸನ್ನು ಹೊಂದಬೇಕು. ಆಗ ಮಾತ್ರ ಇಂತಹ ಆಚರಣೆಗೆ ಅರ್ಥ ಬರಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಟರಾಜ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ, ಡಿಡಿಪಿಐ ಪರಮೇಶ್ವರ್, ಡಾ|| ಪ್ರಮೋದ್, ಡಾ|| ಕಿರಣ್, ಉಮೇಶ್ ವಾರ್ತಾ ಇಲಾಖೆಯ ಭಾಗ್ಯ, ಸತೀಶ್ ಇತರರು ಉಪಸ್ಥಿತರಿದ್ದರು.


ತಮ್ಮ ಮನೆಯಲ್ಲಿರುವ ಸದಸ್ಯರನ್ನು ಮಾದಕವಸ್ತುಗಳಿಂದ ದೂರವಿರಿಸಿ ಇದೇ ಶ್ರೀಗಳ ಸಂದೇಶವಾಗಿತ್ತು. ತಪ್ಪುಗಳನ್ನು ತಿದ್ದಿಕೊಂಡು ಸರಿದಾರಿಗೆ ಬರುವುದೇ ಮಾನವನ ಗುಣ, ಒಮ್ಮೆ ನೀವು ತಪ್ಪು ಮಾಡಿದ್ದರೆ ಅದನ್ನು ಸರಿಪಡಿಸಿಕೊಳ್ಳಿ, ನಿಮ್ಮ ಇಚ್ಚಾ ಶಕ್ತಿಗೆ ಅನುಗುಣವಾಗಿ ಹಾಗೂ ಮನಸ್ಸಿನ ಗುರಿಗೆ ತಕ್ಕಂತೆ ಸ್ನೇಹ ಬೆಳೆಸಿ, ಸಿನಿಮಾ ನಟ, ನಟಿಯರ ಪಾತ್ರಗಳನ್ನು ಅನುಕರಣೆ ಮಾಡದೇ ನಿಮ್ಮದೇ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ. ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಹೊರಹೊಮ್ಮಿ ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಗಿರೀಶ್ ಕಿವಿಮಾತು ಹೇಳಿದರು.

P

Peepal Media

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version