ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸದ ಮೇಲೆ ಇ ಡಿ ದಾಳಿ

P

Peepal Media Desk • ರಾಜ್ಯ

• 1 ನಿಮಿಷದ ಓದು

ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸದ ಮೇಲೆ ಇ ಡಿ ದಾಳಿ

ಮಾಲೂರು: ಮಾಲೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಮತ್ತು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಹಾಲು
ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರು ಸಹಾ ಆಗಿರುವ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಸೋಮವಾರ ಮುಂಜಾನೆ 5:00 ಗಂಟಗೆ ಸರಿಯಾಗಿ ದಾಳಿ ನಡೆಸಿದ್ದಾರೆ.

ಶಾಸಕರ ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿನ ತಮ್ಮ ನಿವಾಸ, ಶಾಸಕರ ಆಪ್ತ ಸಹಾಯಕನಾದ ಹರೀಶ್ ನಿವಾಸ, ಶಾಸರ ಮಾಲೀಕತ್ವದ ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್, ಕೋಲಾರದಲ್ಲಿನ ಕೋಚಿಮುಲ್‌ ಕಚೇರಿ, ಕೋಚಿಮುಲ್‌ ವ್ಯವಸ್ಥಾಪಕ ನಿರ್ದೇಶಕರಾದಂತಹ ಗೋಪಾಲಮೂರ್ತಿ ನಿವಾಸ, ಹಾಗೂ ಆಡಳಿತಾತ್ಮಕ ನಿರ್ದೇಶಕರಾದ ನಾಗೇಶ್ ಅವರ ನಿವಾಸ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಶೋಧಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಕೋಚಿಮುಲ್ ನೇಮಕಾತಿ ವಿಚಾರದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಘೋಷಣೆಗೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಪಟ್ಟಿ ಹರಿದಾಡಿತ್ತು. ಇದರ ಅರೋಪ ಶಾಸಕರ ಮೇಲೆ ಇತ್ತು. ಇದೇ ವಿಚಾರವಾಗಿ ಸಂಸದರಾದ ಮುನಿಸ್ವಾಮಿ ಅವರು ಶಾಸಕ ನಂಜೇಗೌಡರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದ್ದರು.

ಸಧ್ಯಕ್ಕೆ ಇ,ಡಿ ಅವರು ಶೋಧಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗಿದ್ದು. ಶಾಸಕರ ಮನೆಯಲ್ಲಿ ನಂಜೇಗೌಡ ಅವರು ಮತ್ತು ಅವರ ತಮ್ಮ ಇರುವುದಾಗಿ ತಿಳಿದು ಬಂದಿದೆ. ಶೋಧಕಾರ್ಯ ಮುಗಿದ ನಂತರ ಮತ್ತಷ್ಟು ವಿಚಾರಗಳು ತಿಳಿಯಲಿವೆ.

P

Peepal Media Desk

Peepal Media · ರಾಜ್ಯ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version