ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ಎಫೆಕ್ಟ್: ಪೋಟ್ಯಾಷ್, ಕಾಂಪ್ಲೆಕ್ಸ್ ಗೊಬ್ಬರ ಬೆಲೆ ದುಪ್ಪಟ್ಟು ಏರಿಕೆ, ರೈತರ ಆತಂಕ

PPeepal Media Desk

Peepal Media Desk ದೇಶ, ರಾಜ್ಯ

• 1 ನಿಮಿಷದ ಓದು

ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ಎಫೆಕ್ಟ್: ಪೋಟ್ಯಾಷ್, ಕಾಂಪ್ಲೆಕ್ಸ್ ಗೊಬ್ಬರ ಬೆಲೆ ದುಪ್ಪಟ್ಟು ಏರಿಕೆ, ರೈತರ ಆತಂಕ

ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಬೆಲೆಯೇರಿಕೆಯ ಪರಿಣಾಮವಾಗಿ ಈಗ ಅದರ ನೇರ ಹೊಡೆತ ರಾಜ್ಯದ ರೈತ ಸಮುದಾಯಕ್ಕೂ ತಟ್ಟಿದೆ. ರಸಗೊಬ್ಬರಗಳ ಕೊರತೆ ಹಾಗೂ ದಿಢೀರ್ ದರ ಏರಿಕೆಯಿಂದ ಮುಂಗಾರು ಬಿತ್ತನೆಗೆ ಸಜ್ಜಾಗಿರುವ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ವಿಶೇಷವಾಗಿ ಪೋಟ್ಯಾಷ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳ ಬೆಲೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಎರಡು ಬಾರಿ ಏರಿಕೆಯಾಗಿದೆ. ಮೇ ಮೊದಲ ವಾರದಲ್ಲಿ 50 ಕೆ.ಜಿ. ಚೀಲಕ್ಕೆ ₹1,400 ಇದ್ದ ದರ ಇದೀಗ ₹1,700ಕ್ಕೆ ತಲುಪಿದ್ದು, ಹೊಸ ದಾಸ್ತಾನುಗಳ ಬೆಲೆ ₹2,200ರವರೆಗೆ ಏರಿಕೆಯಾಗಿದೆ ಎಂದು ಗೊಬ್ಬರ ವಿತರಕರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಯೂರಿಯಾ ಹಾಗೂ ಡಿಎಪಿ (DAP) ರಸಗೊಬ್ಬರಗಳ ಅಂತರರಾಷ್ಟ್ರೀಯ ದರದಲ್ಲೂ ಏರಿಕೆಯಾಗಿದ್ದರೂ, ಕೇಂದ್ರ ಸರ್ಕಾರ ನೀಡುತ್ತಿರುವ ಸಬ್ಸಿಡಿಯಿಂದಾಗಿ ಸದ್ಯಕ್ಕೆ ಅವುಗಳ ಬೆಲೆ ನಿಯಂತ್ರಣದಲ್ಲಿದೆ. ಆದರೆ ಮುಕ್ತ ಮಾರುಕಟ್ಟೆಯ ಏರಿಳಿತ ಮುಂದುವರಿದರೆ ಸರ್ಕಾರಕ್ಕೆ ಈ ಸಬ್ಸಿಡಿ ಭಾರವನ್ನು ದೀರ್ಘಕಾಲ ನಿರ್ವಹಿಸುವುದು ಸವಾಲಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪೋಟ್ಯಾಷ್ ಮತ್ತು ಕಾಂಪ್ಲೆಕ್ಸ್ ಗೊಬ್ಬರಗಳಿಗೂ ಸಬ್ಸಿಡಿ ದೊರೆಯುತ್ತಿದೆಯಾದರೂ, ಅದು ನಿಗದಿತ ಮಿತಿಯಲ್ಲಿರುವುದರಿಂದ ಬೆಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗುವ ಸಂದರ್ಭಗಳಲ್ಲಿ ಸಬ್ಸಿಡಿ ಪ್ರಮಾಣ ಹೆಚ್ಚಳವಾಗದ ಕಾರಣ, ವಿವಿಧ ಕಂಪನಿಗಳು ತಮ್ಮದೇ ದರ ನಿಗದಿ ಮಾಡುತ್ತಿವೆ. ಇದರಿಂದ ರೈತರ ಮೇಲಿನ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಾಗಿದೆ.

ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯಕ್ಕೆ ರಸಗೊಬ್ಬರ ಅತ್ಯಗತ್ಯವಾಗಿದೆ. ಆದರೆ ಮಾರುಕಟ್ಟೆಯಲ್ಲಿ ಅಭಾವ ಹಾಗೂ ಕೈಗೆಟುಕದ ದರದಿಂದ ರೈತರು ತತ್ತರಿಸಿದ್ದಾರೆ. ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಹೆಚ್ಚುವರಿ ಸಬ್ಸಿಡಿ ಘೋಷಿಸಿ ರೈತರಿಗೆ ನೆರವಾಗಬೇಕು ಎಂಬ ಒತ್ತಾಯ ರೈತ ಸಂಘಟನೆಗಳಿಂದ ಕೇಳಿಬರುತ್ತಿದೆ.

PPeepal Media Desk

Peepal Media Desk

Peepal Media · ದೇಶ ವಿಭಾಗ

ಸಂಬಂಧಿತ ಸುದ್ದಿಗಳು